ETV Bharat / state

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು: ಸಿಎಂ - Farmer Suicide Cases - FARMER SUICIDE CASES

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವ ಕುರಿತು ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

CM SIDDARAMAIAH WARN  PROVIDING RELIEF  FARMER FAMILY  BENGALURU
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jul 8, 2024, 2:27 PM IST

ಬೆಂಗಳೂರು: ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು. ರೈತರ ಸಭೆ ಮಾಡಿ ಜಾಗೃತಿ, ಆತ್ಮವಿಶ್ವಾಸ ಮೂಡಿಸುವ ಕಾರ್ಯ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ನಡೆದ ಡಿಸಿ, ಸಿಇಒ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಿಎಂ, ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎನ್ನುವ ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದರು. ಸಣ್ಣ ಪುಟ್ಟ ತಾಂತ್ರಿಕ ಕಾರಣಗಳಿಗಾಗಿ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ ಎಂದರು.

ಎಸ್ಎಸ್ಎಲ್​ಸಿ ಫಲಿತಾಂಶ ಕಡಿಮೆಯಾಗಬಾರದು: ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.10ರಷ್ಟು ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಒಂದು ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳದ್ದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.

ಡೆಂಗ್ಯೂ ನಿಯಂತ್ರಿಸಿ: ಕಲುಷಿತ ನೀರು ಕುಡಿದು ಹಲವು ಸಾವು-ನೋವುಗಳು ಸಂಭವಿಸಿವೆ. ಇಂತಹ ಪ್ರಕರಣಗಳು ಮರುಕಳಿಸಿದರೆ, ಹಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.
ವಲಸೆ ಕುರಿಗಾರರ ಹಿತ ಕಾಪಾಡಿ ವಲಸೆ ಕುರಿಗಳ ಆಕಸ್ಮಿಕ ಮರಣ ಸಂಭವಿಸಿದಲ್ಲಿ ಮಾಲೀಕರಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು ಎಂದು ಸೂಚಿಸಿದರು.

ಅನರ್ಹ ಬಿಪಿಎಲ್‌ ಕಾರ್ಡು ರದ್ದು ಮಾಡಿ: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಜಮೀನು ಮಾರ್ಗಸೂಚಿ ದರಕ್ಕಿಂತ ಕಡಿಮೆ ಬೆಲೆಗೆ ನೋಂದಣಿ ಅಗುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಬಾಕಿ ರಾಜಸ್ವವನ್ನು ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವರ್ಷದ ಮಾರ್ಚ್‌ ಅಂತ್ಯದ ವೇಳೆಗೆ ಇಂತಹ 24,519 ಪ್ರಕರಣಗಳು ಬಾಕಿಯಿದ್ದು, 310 ಕೋಟಿ ರೂ. ರಾಜಸ್ವ ವಸೂಲಾತಿ ಮಾಡಬೇಕಾಗಿದೆ. ಇದನ್ನು ತ್ವರಿತವಾಗಿ ಮಾಡಲು ಸೂಚನೆ ನೀಡಿದರು.

ರಾಜ್ಯದಲ್ಲಿ 92 ಉಪ ನೋಂದಣಿ ಹಾಗೂ 15 ಜಿಲ್ಲಾ ನೋಂದಣಿ ಕಚೇರಿಗಳು ಖಾಸಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವುಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರ ಪ್ರದೇಶದಲ್ಲಿ ಅತಿ ಹೆಚ್ಚು ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಿಬಿಎಂಪಿ ಅಧೀನದ ಕಟ್ಟಡಗಳಲ್ಲಿ ಸ್ಥಳಾವಕಾಶ ಒದಗಿಸಬೇಕು ಎಂದು ಸೂಚಿಸಿದರು.

ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಗಳ ಕಚೇರಿಗಳಿಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಬಾಡಿಗೆ ನೀಡುತ್ತಿದ್ದೇವೆ. ಇವರಿಗೆ ಸ್ವಂತ ಕಟ್ಟಡ ಕೊಡಿ. ಸ್ವಂತ ಕಟ್ಟಡದ ಅವಕಾಶ ಇಲ್ಲದಿದ್ದರೆ ಜಾಗ ನೀಡಿ ಕಟ್ಟಡ ಕಟ್ಟಿಸಿ. ಇದರಿಂದ ನಮಗೆ ವರ್ಷಕ್ಕೆ 40-50 ಕೋಟಿ ಬಾಡಿಗೆ ಹಣ ಉಳಿತಾಯವಾಗುತ್ತದೆ ಎಂದು ಸೂಚನೆ ನೀಡಿದರು.

ಕಲಬುರಗಿಯಲ್ಲಿ ಸಿಎಂ ಜನಸ್ಪಂದನಾ ಕಾರ್ಯಕ್ರಮ: ಜನಸ್ಪಂದನ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಬೇಕು. ಅಧಿವೇಶನದ ಮುಗಿದ ಬಳಿಕ ಜಿಲ್ಲಾ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ತಪ್ಪದೇ ಜನಸ್ಪಂದನಾ ಸಭೆಗಳನ್ನು ಮಾಡಬೇಕು. ಜಿಲ್ಲಾಧಿಕಾರಿಗಳು ಸ್ವೀಕರಿಸುವ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಬೇಕು. 40702 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ಇನ್ನೂ 8ಸಾವಿರ ಅರ್ಜಿಗಳು ವಿಲೇವಾರಿಗೆ ಬಾಕಿಯಿದೆ. ತಕ್ಷಣ ವಿಲೇವಾರಿ ಮಾಡಿ. ಕಲ್ಬುರ್ಗಿಯಲ್ಲಿ ಅಧಿವೇಶನ ಮುಗಿದ ಬಳಿಕ ಮುಂದಿನ ತಿಂಗಳು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಇದನ್ನೂ ಓದಿ: 'ನಾವು ಯಾವುದನ್ನೂ ಮುಚ್ಚಿ ಹಾಕುವುದಿಲ್ಲ, ಎಲ್ಲ ಪ್ರಕರಣಗಳ ತನಿಖೆ ನಡೆಯುತ್ತದೆ' - G Parameshwar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.