ETV Bharat / state

'ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಚರ್ಚೆಯಾಗಿಲ್ಲ': ಸತೀಶ್ ಜಾರಕಿಹೊಳಿ ಹೇಳಿಕೆಗೆ ಪರಮೇಶ್ವರ್ ಪ್ರತಿಕ್ರಿಯೆ - Guarantee Schemes

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿಕೆ ನೀಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಆದರೆ, ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದಷ್ಟೇ ಎಂದು ತಿಳಿಸಿದ್ದಾರೆ.

CONGRESS GUARANTEE SCHEMES
ಸತೀಶ್ ಜಾರಕಿಹೊಳಿ ಮತ್ತು ಡಾ.ಜಿ.ಪರಮೇಶ್ವರ್ (ETV Bharat)
author img

By ETV Bharat Karnataka Team

Published : Aug 14, 2024, 3:51 PM IST

Updated : Aug 14, 2024, 6:30 PM IST

ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ (ETV Bharat)

ಬೆಂಗಳೂರು: "ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಯಾರು ಹೇಳಿದ್ದು?. ಅದನ್ನು ನಾವು ಸ್ಥಗಿತಗೊಳಿಸುವುದಿಲ್ಲ. ಆದರೆ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ. ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಸದಾಶಿವನಗರದ ತಮ್ಮ‌ ನಿವಾಸದ ಬಳಿ ಇಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಪರಮೇಶ್ವರ್, "ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಹೀಗಾಗಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ" ಎಂದರು.

"ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.‌13ರಷ್ಟು ಮತ ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು?" ಎಂದ ಅವರು, "ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ" ಎಂದು ತಿಳಿಸಿದರು.

"ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನೂ ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಡಿ. ಸಿಎಂ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯುವಂತೆ ಕ್ಯಾಬಿನೆಟ್ ತೀರ್ಮಾನಿಸಿ ರಾಜ್ಯಪಾಲರಿಗೆ ಸಲಹೆ ನೀಡಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ" ಎಂದರು.

"ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೋ, ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು" ಎಂದು ತಿಳಿಸಿದರು.

ಭೋವಿ ನಿಗಮದ ಮೇಲೆ ಸಿಐಡಿ ತನಿಖಾ ತಂಡ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿ, "ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ.‌‌ ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ತರಬೇಕು‌‌" ಎಂದು ಹೇಳಿದರು.

ಇದನ್ನೂ ಓದಿ: 'ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಕ್ಕೆ ಕಾಂಗ್ರೆಸ್‌ ಶಾಸಕರೇ ಧಿಕ್ಕಾರ ಹಾಕುವ ಪರಿಸ್ಥಿತಿ ಬರಲಿದೆ' - R Ashok

Last Updated : Aug 14, 2024, 6:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.