ETV Bharat / state

ಬಿಜೆಪಿಯಲ್ಲಿ ನಾನೊಬ್ಬ ಕಾರ್ಯಕರ್ತ, ಉಚ್ಚಾಟನೆಗೆ ತಲೆಕೆಡಿಸಿಕೊಳ್ಳಲ್ಲ: ರಘುಪತಿ ಭಟ್ - KARNATAKA COUNCIL ELECTION - KARNATAKA COUNCIL ELECTION

ಪಕ್ಷದಿಂದ ಉಚ್ಚಾಟನೆಗೆ ಮಾಡಿರುವುದಕ್ಕೆ ತಲೆಕೆಡಿಸಿಕೊಳ್ಳಲ್ಲ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಹೇಳಿದರು.

Udupi  K Raghupati Bhat  Jagadish Shettar
ರಘುಪತಿ ಭಟ್ (ETV Bharat)
author img

By ETV Bharat Karnataka Team

Published : May 27, 2024, 12:35 PM IST

Updated : May 27, 2024, 2:46 PM IST

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಮಾತನಾಡಿದರು. (ETV Bharat)

ಉಡುಪಿ: ಜಗದೀಶ್ ಶೆಟ್ಟರ್ ಅವರ ನಡೆಯೇ ನನಗೆ ಮಾದರಿ. ಉಚ್ಚಾಟನೆಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ರು.

ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಚ್ಛಾಟನೆಯಾದ ಬಗ್ಗೆ ಮಾಧ್ಯಮದ ಮೂಲಕ ತಿಳಿಯಿತು. ಶಿಸ್ತು ಸಮಿತಿಯ ನೋಟಿಸ್ ಈವರೆಗೆ ನನಗೆ ತಲುಪಿಲ್ಲ. ಪಕ್ಷ ಎಂದರೆ ಜೀವ ಬಿಡುವ ಕಾರ್ಯಕರ್ತರಿಗೆ ನಿರಂತರ ನೋವಾಗುತ್ತಿದೆ. ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ. ನನ್ನದು ಕಾರ್ಯಕರ್ತನ ಹುದ್ದೆ, ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ. ಬಿಜೆಪಿ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಎಂಬುದರ ಬಗ್ಗೆ ಸ್ಪಷ್ಟಪಡಿಸಬೇಕು ಎಂದರು.

''ಟಿಕೆಟ್ ತಪ್ಪಿದಾಗ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು. ಪಕ್ಷ ನನ್ನನ್ನು ರಾಜ್ಯ ಕಾರ್ಯಕಾರಿ ಸದಸ್ಯನನ್ನೂ ಮಾಡಿಲ್ಲ. ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ನಾನು ಮೋದಿಗೆ ಬೈದಿಲ್ಲ. ರಾಜ್ಯದ ನಾಯಕರಿಗೆ ಬೈದಿಲ್ಲ'' ಎಂದ ಅವರು, ''ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ನಾಯಕರನ್ನು ಟೀಕೆ ಮಾಡಿದ ಜಗದೀಶ್ ಶೆಟ್ಟರ್ ಒಂದು ವರ್ಷದಲ್ಲಿ ವಾಪಸಾದರು. ಪಕ್ಷಕ್ಕೆ ವಾಪಸ್ ಆಗಿ ಲೋಕಸಭಾ ಟಿಕೆಟ್ ಪಡೆದುಕೊಂಡರು. ಇದು ಶಾಶ್ವತ ವಜಾ ಅಲ್ಲ. ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ'' ಎಂದು ಹೇಳಿದರು.

''ಒಬ್ಬ ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ. ಬಿಜೆಪಿ ಶಿಸ್ತು ಸಮಿತಿಗೆ ನನ್ನ ಹಲವು ಪ್ರಶ್ನೆ ಇದೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮವಾಗಿದೆ? ಅಡ್ಡ ಮತದಾನ ಮಾಡಿದ ಇಬ್ಬರೂ ಶಾಸಕರನ್ನು ಏನು ಮಾಡಿದ್ದೀರಿ? ವಜಾ ಮಾಡಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ? ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಆಗಿದೆ'' ಎಂದು ಪ್ರಶ್ನಿಸಿದರು.

''ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು. ಪಕ್ಷದ ದೃಷ್ಟಿಯಿಂದ ಜಿಲ್ಲಾಧ್ಯಕ್ಷರು, ಶಾಸಕ ಸುನಿಲ್ ಕುಮಾರ್ ಮಾಡುವುದು ಸರಿ ಇದೆ. ಪಕ್ಷದಿಂದ ವಜಾ ಮಾಡುವ ಸಮಾನ ನ್ಯಾಯ ಜಾರಿಗೆ ತನ್ನಿ. ಬಹಿರಂಗ ಹೇಳಿಕೆ ಕೊಡುವ, ಭ್ರಷ್ಟಾಚಾರ ಆರೋಪ ಮಾಡುವ ನಾಯಕರ ಮೇಲೆ ನೀವು ಏನು ಕ್ರಮ ಕೈಗೊಂಡಿದ್ದೀರಿ'' ಎಂದು ಪ್ರಶ್ನಿಸಿದರು.

''ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಸಲು ಯಾರಿಗೆ ಎಷ್ಟು ಹಣ ಹೋಗಿದೆ. ಯಾರು ಕೆಲಸ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳೇ ಆರೋಪ ಮಾಡುತ್ತಿದ್ದಾರೆ. ವಿಪ್ ಉಲ್ಲಂಘನೆ ಮಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ? ನಾನೊಬ್ಬ ಪಾಪದವ, ಬಡಪಾಯಿ ಮಾತ್ರ ನಿಮಗೆ ವಜಾಮಾಡಲು ಸಿಕ್ಕಿದ್ದಾ?'' ಎಂದು ಅಸಮಾಧಾನ ವ್ಯಕ್ತಪಡಿಸಿದರು. ''ನಾನು ವಿಚಲಿತನಾಗಿಲ್ಲ, ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ '' ಎಂದರು.

''ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ, ಶಿಕ್ಷೆಯೂ ಜಾಸ್ತಿ. ಉಡುಪಿಯಲ್ಲಿ ನಾಲ್ವರು ಸಿಟ್ಟಿಂಗ್ ಎಂಎಲ್ಎಗಳನ್ನು ಬದಲಿಸಲಾಯಿತು. ಇದನ್ನು ಶಿವಮೊಗ್ಗ, ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿಯಲ್ಲಿ ಮಾಡಕ್ಕಾಗುತ್ತಾ. ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ, ಪಕ್ಷ ಅಂತ ಕೆಲಸ ಮಾಡುತ್ತಾರೆ. ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತದೆ. ಕರಾವಳಿಗೆ ಮೀಸಲಿಟ್ಟ ಸ್ಥಾನವನ್ನು ಶಿವಮೊಗ್ಗಕ್ಕೆ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ'' ಎಂದು ರಘುಪತಿ ಭಟ್​ ಹೇಳಿದರು.

ಇದನ್ನೂ ಓದಿ: ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಆರೋಪ: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ‌ನಟಿ ಹೇಮಾ - Bengaluru Rave Party

Last Updated : May 27, 2024, 2:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.