ETV Bharat / state

ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಸಚಿವ ಮಧು ಬಂಗಾರಪ್ಪ

ಕೃಪಾಂಕ ವ್ಯವಸ್ಥೆಯನ್ನು ಮುಂದುವರಿಸದಂತೆ ಸಿಎಂ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಕೃಪಾಂಕ ಪದ್ಧತಿಯನ್ನು ಮುಂದಿನ ವರ್ಷದಿಂದ ನಿಲ್ಲಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

author img

By ETV Bharat Karnataka Team

Published : 2 hours ago

GRACE MARKS BREAKDOWN
ಸಾಂದರ್ಭಿಕ ಚಿತ್ರ (ETV Bharat)

ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್ ಮಾರ್ಕ್ಸ್) ನೀಡುವುದನ್ನು ನಿಲ್ಲಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೃಪಾಂಕ್ ನೀಡದಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ, ಮುಂದಿನ ವರ್ಷದಿಂದ ಕೃಪಾಂಕ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವರ್ಷ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ರಾಜ್ಯದ ಒಟ್ಟಾರೆ ಫಲಿತಾಂಶ ಶೇ.73.40 ಆಗಿದೆ. ಕಳೆದ ವರ್ಷ ಶೇ‌.83ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 2288 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ ಎಂದರು.

ಅಮೆರಿಕದ ಸಂಸ್ಥೆಯ ಜೊತೆ ಒಡಂಬಡಿಕೆ: ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಅಳವಡಿಸಿ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಅಮೆರಿಕದ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ. ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ ಇಂದು ಅಮೆರಿಕದ ಜೆ-ಪಾಲ್‍ಸೌತ್ ಏಷಿಯಾ ಸಂಸ್ಥೆಯೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿದರು.

ಈ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, "ಶಿಕ್ಷಣದಲ್ಲಿ ಮಹತ್ವದ ಸುಧಾರಣೆ ಮಾಡಲಾಗುತ್ತಿದೆ. ಗುಣಮಟ್ಟ, ಹೊಸತನ ಮತ್ತು ತಂತ್ರಜ್ಞಾನ ಅಳವಡಿಕೆಗೆ ಜೆ-ಪಾಲ್ ಸಂಸ್ಥೆಯೊಂದಿಗೆ ಒಪ್ಪಂದವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಶುರುವಾಗಿರುವ ಎಲ್‍ಕೆಜಿ, ಯುಕೆಜಿ ಮಕ್ಕಳಿಗೆ ಚಿಲಿಪಿಲಿ ಪಠ್ಯ ಕ್ರಮವನ್ನು ಹೊಸದಾಗಿ ರೂಪಿಸಲಾಗುವುದು. ಪ್ರಾಯೋಗಿಕವಾಗಿ 6 ಸಾವಿರ ಮಕ್ಕಳಿಗೆ ಚಿಲಿಪಿಲಿ ಯೋಜನೆ ಅನ್ವಯವಾಗಲಿದೆ" ಎಂದು ಹೇಳಿದರು.

GRACE MARKS BREAKDOWN
ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (ETV Bharat)

"3ರಿಂದ 5ನೇ ತರಗತಿಯ ಮಕ್ಕಳಿಗೆ ಗಣಿತ-ಗಣಕ ಹಾಗೂ 6ರಿಂದ 10ನೇ ತರಗತಿಯ ಮಕ್ಕಳಿಗೆ ಮರುಸಿಂಚನ ಕಾರ್ಯಕ್ರಮ ರೂಪಿಸಲಾಗಿದೆ. ಗಣಿತ-ಗಣಕ ಕಾರ್ಯಕ್ರಮದಲ್ಲಿ ಶಿಕ್ಷಕರು, ಮಕ್ಕಳ ಪೋಷಕರ ಮೊಬೈಲ್‍ಗೆ ಕರೆ ಮಾಡಿ ಪ್ರತಿ ದಿನ 32ರಿಂದ 45 ನಿಮಿಷಗಳವರೆಗೂ ಗಣಿತ ಹೇಳಿಕೊಡಲಿದ್ದಾರೆ. ಇದಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ" ಎಂದು ತಿಳಿಸಿದರು.

"ಗಣಿತ-ಗಣಕದಿಂದ ಶೈಕ್ಷಣಿಕ ಗುಣಮಟ್ಟ ಕಡಿಮೆ ಇರುವ ಪೋಷಕರಿಗೂ ಗಣಿತದ ಜ್ಞಾನ ಹೆಚ್ಚಲಿದ್ದು, ಮಕ್ಕಳಿಗೆ ಮನೆಯಲ್ಲಿ ಮತ್ತಷ್ಟು ಕಲಿಕೆಗೆ ಪ್ರೋತ್ಸಾಹಿಸಲು ಅನುಕೂಲವಾಗಲಿದೆ. ಕಲಿಕಾ ಗುಣಮಟ್ಟ ಕಡಿಮೆ ಇರುವ ಮಕ್ಕಳಿಗಾಗಿ ಮರು ಸಿಂಚನ ಕಾರ್ಯಕ್ರಮ ರೂಪಿಸಲಾಗಿದೆ. ಇಂತಹ ವಿದ್ಯಾರ್ಥಿಗಳಿಗೆ ಅವರ ಹಿಂದಿನ ಪಠ್ಯ ಕ್ರಮಗಳನ್ನು ಪುನರ್‍ಮನನ ಮಾಡಿಕೊಡಲಾಗುವುದು. ಇದರಿಂದ ಹಳೆಯ ಕಲಿಕೆ ಹಾಗೂ ಹೊಸ ಜ್ಞಾನದ ಜೊತೆ ಸುಧಾರಣೆ ಕಾಣುವ ನಿರೀಕ್ಷೆಯಿದೆ. ಪ್ರಾಯೋಗಿಕವಾಗಿ 9 ಸಾವಿರ ಶಾಲೆಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ" ಎಂದರು.

"ನಾರ್ಥ್ ಅಮೆರಿಕದಲ್ಲಿ ಕೇಂದ್ರ ಕಚೇರಿ ಹೊಂದಿರುವ ಜೆ-ಪೌಲ್‍ಸೌತ್ ಏಷಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಎಐ (ಕೃತಕ ಬುದ್ಧಿಮತ್ತೆ) ಕಲಿಕೆಗೆ ನಾಂದಿ ಹಾಡಲಾಗಿದೆ. ನಮ್ಮ ಸರ್ಕಾರ ರಚನೆಯಾದ ಮೂರು ತಿಂಗಳಲ್ಲೇ ರಾಹುಲ್‍ ಗಾಂಧಿ ಅವರು ಪತ್ರ ಬರೆದು ವಿದ್ಯಾರ್ಥಿಗಳಿಗೆ ಎಐ ಕಲಿಸುವಂತೆ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದರು. ರಾಜ್ಯ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನದ ಜೊತೆ ಶಿಕ್ಷಣದ ಕಲಿಕೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕ್ಲಾಸ್‍ಗಳನ್ನು ರೂಪಿಸಲಾಗುವುದು, ಅಭ್ಯಾಸದ ಜೊತೆಗೆ ಬೋಧನೆ ನಡೆಸುವುದರಿಂದ ವಿದ್ಯಾರ್ಥಿ ಸ್ನೇಹಿ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಲಿದೆ".

"ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಭಾಷಾ ಕೀಳರಿಮೆ ಹಾಗೂ ವೇದಿಕೆಯ ಮುಜುಗರವನ್ನು ತಪ್ಪಿಸಲು ಅಗತ್ಯ ತರಬೇತಿಗಳನ್ನು ನೀಡಲಾಗುತ್ತದೆ. ಮುಂದಿನ 15-20 ವರ್ಷಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರದ ಬೃಹತ್ ಸಾಫ್ಟ್​ವೇರ್ ಕಂಪನಿಗಳಲ್ಲಿ ಕೆಲಸ ಮಾಡಲು ಸಹಕಾರಿಯಾಗಿದೆ. ಇಂದು ಒಡಂಬಡಿಕೆ ಮಾಡಿಕೊಂಡಿರುವುದರಿಂದ 93 ಬ್ಲಾಕ್‍ಗಳಲ್ಲಿ ಕಲಿಕಾ ವ್ಯವಸ್ಥೆಯನ್ನು ಸುಧಾರಿಸಲಾಗುತ್ತಿದೆ. ಮುಂದಿನ ಆರು ತಿಂಗಳ ಫಲಿತಾಂಶವನ್ನು ಆಧರಿಸಿ ರಾಜ್ಯಾದ್ಯಂತ ಯೋಜನೆಗಳನ್ನು ವಿಸ್ತರಿಸಲಾಗುವುದು" ಎಂದು ಸಚಿವರು ಹೇಳಿದರು.

"ಸರ್ಕಾರಿ ಶಾಲೆಗಳಿಗೆ ವಿದ್ಯುತ್ ಹಾಗೂ ನೀರನ್ನು ಪೂರೈಸುತ್ತಿರುವುದರಿಂದ ಶಿಕ್ಷಣದ ವ್ಯವಸ್ಥೆ ಸುಧಾರಣೆ ಕಾಣುತ್ತಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿನ ನಕಲು ಮಾಡುವುದನ್ನು ತಡೆಯಲಾಗಿದೆ. ಅವರ ಕಲಿಕೆಯ ಗುಣಮಟ್ಟವನ್ನು ಉನ್ನತೀಕರಿಸಲಾಗುವುದು" ಎಂದರು.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್‍ಸಿಂಗ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕ ಕೆ.ಎಂ.ರಮೇಶ್, ಜೆ-ಪಾಲ್ ಸೌತ್ ಏಷಿಯಾ ಸಂಸ್ಥೆಯ ಜಾಗತಿಕ ಕಾರ್ಯನಿರ್ವಾಹಕ ನಿರ್ದೇಶಕ ಇಕ್ಬಾಲ್ ಅಲಿವಾಲ್, ಕಾರ್ಯನಿರ್ವಾಹಕ ನಿರ್ದೇಶಕರಾದ ಶೋಭಿನಿ ಮುಖರ್ಜಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:

ಎಸ್ಎಸ್ಎಲ್​ಸಿ ಫಲಿತಾಂಶ: ಗ್ರೇಸ್ ಮಾರ್ಕ್ಸ್​ನಿಂದಲೇ ಶೇ.20ರಷ್ಟು ವಿದ್ಯಾರ್ಥಿಗಳು ಪಾಸ್! - SSLC Result

ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡದಂತೆ ಸಿಎಂ ಸೂಚನೆ - CM Siddaramaih

ETV Bharat Logo

Copyright © 2024 Ushodaya Enterprises Pvt. Ltd., All Rights Reserved.