ETV Bharat / state

ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಸ್ಥಿತಿ ಇಲ್ಲ, ಡೆಂಗ್ಯೂ ಸೊಳ್ಳೆಗಿಂತ ಬಿಜೆಪಿ ಸುಳ್ಳುಗಳನ್ನೇ ಹೆಚ್ಚು ಹರಡುತ್ತಿದೆ: ಗುಂಡೂರಾವ್ - Minister Dinesh Gundurao - MINISTER DINESH GUNDURAO

ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

minister dinesh gundurao
ಸಚಿವ ದಿನೇಶ್ ಗುಂಡೂರಾವ್ (ETV Bharat)
author img

By ETV Bharat Karnataka Team

Published : Jul 8, 2024, 6:54 PM IST

Updated : Jul 8, 2024, 7:45 PM IST

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (ETV Bharat)

ಬೆಂಗಳೂರು: ''ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ'' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ''ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.‌ ಯಾವುದೇ ಬೆಡ್ ಅಥಾವಾ ಔಷಧಿಯ ಕೊರತೆಯಿಲ್ಲ.‌ ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಅವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ'' ಎಂದರು.‌

''ಇನ್ನೂ ಎರಡು ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ, ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲೂ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.‌ ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯ ನಡೆಸುತ್ತಿದೆ. ಔಷಧಗಳ ಲಭ್ಯತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ, ಜನರು ಹೆಚ್ಚು ಜಾಗೃತರಾಗಿ ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸಬೇಕು'' ಎಂದು ಮನವಿ ಮಾಡಿಕೊಂಡರಲ್ಲದೇ, ಜಾಗ್ರತೆಯಿಂದ ಇರುವಂತೆ ಸಲಹೆ ನೀಡಿದರು.

ಸೊಳ್ಳೆಗಳಿಗಿಂತ ಪ್ರತಿಪಕ್ಷ ನಾಯಕರ ಸುಳ್ಳುಗಳೇ ಹೆಚ್ಚು: ''ಡೆಂಗ್ಯೂ ವಿಚಾರದಲ್ಲಿ ಪ್ರತಿಪಕ್ಷ ನಾಯಕರು ಆತಂಕ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಸರಿಯಲ್ಲ. ಇಂತಹ ಸಂದರ್ಭದಲ್ಲಿ ಪ್ರತಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದರೆ, ಡೆಂಗ್ಯೂ ಹರಡುವ ಸೊಳ್ಳೆಗಳಿಗಿಂತ ಪ್ರತಿಪಕ್ಷ ನಾಯಕರ ಸುಳ್ಳುಗಳೇ ಹೆಚ್ಚು ಹರಡುತ್ತಿದೆ'' ಎಂದು ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ನಾಯಕರ ಹೇಳಿಕೆಗಳನ್ನು ಟೀಕಿಸಿದರು.

''ಪ್ರತಿಪಕ್ಷ ನಾಯಕರು ಜನರಲ್ಲಿ ಆತಂಕ ಮೂಡಿಸುವ ಬದಲು ಸರ್ಕಾರದ ಜೊತೆ ಕೈ ಜೋಡಿಸಲಿ. ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಉತ್ತಮ ಸಲಹೆಗಳನ್ನು ನೀಡಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಆ ರೀತಿಯ ಸಕಾರಾತ್ಮಕ ಚಿಂತನೆಗಳನ್ನು ಪ್ರತಿಪಕ್ಷಗಳು ಪ್ರದರ್ಶಿಸಲಿ'' ಎಂದರು.

ಇದನ್ನೂ ಓದಿ: ರಾಜ್ಯದ ಹಲವೆಡೆ 159 ಹೊಸ ಡೆಂಗ್ಯೂ ಪ್ರಕರಣ ಪತ್ತೆ; 3.18 ಕೋಟಿ ಪ್ಯಾರಸಿಟಮಾಲ್ ಮಾತ್ರೆ ದಾಸ್ತಾನು - Dengue Cases

ಯಾವುದೇ ರೆಸಾರ್ಟ್​​​ಗೆ ಹೋಗಿರಲಿಲ್ಲ: ''ಡೆಂಗ್ಯೂ ಹೆಚ್ಚಳಕ್ಕೂ, ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ'' ಎಂದು ಸಚಿವರು ಪ್ರಶ್ನಿಸಿದರು. ''ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ, ಡೆಂಗ್ಯೂ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ. ಮನೆ - ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನು ಗುರುತಿಸಿ ಅಲ್ಲಿಯ ನಿವಾಸಿಗಳನ್ನ ಎಚ್ಚರಿಸಿದ್ದೇವೆ'' ಎಂದು ತಿಳಿಸಿದರು.

''ಎರಡು ದಿನದ ಪ್ರವಾಸದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.‌ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿದ್ದೇನೆ. ಹೀಗಿರುವಾಗ ಬಿಜೆಪಿ ನಾನು ಈಜುಕೊಳದಲ್ಲಿ ಈಜಿದ್ದನ್ನೇ ಪ್ರಶ್ನೆ ಮಾಡಿದೆ‌. ಬಿಜೆಪಿಗರಿಗೆ ಈಜು ಒಂದು ರೀತಿಯಲ್ಲಿ ಮೋಜು ಮಸ್ತಿಯಾಗಿರಬಹುದು‌. ಆದರೆ ನನಗಲ್ಲ. ನಾನು ಮಂಗಳೂರಿನ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೇನೆಯೇ ಹೊರತು ಬಿಜೆಪಿಯವರ ರೀತಿ ಯಾವುದೋ ರೆಸಾರ್ಟ್​​​ಗೆ ಹೋಗಿಲ್ಲ.‌ ಅದು ಬೆಳಗ್ಗೆ 6 ಗಂಟೆಗೆ ಎದ್ದು, ಸಮಯ ಬಿಡುವು ಮಾಡಿಕೊಂಡು ನಾನು ಈಜುಕೊಳಕ್ಕೆ ಹೋಗಿದ್ದೆ. ಏಕೆಂದರೆ ಈಜುಕೊಳಕ್ಕೆ ಭೇಟಿ ನೀಡುವುದು ನನ್ನ ಮಂಗಳೂರು ಪ್ರವಾಸದ ಒಂದು ಭಾಗವಾಗಿತ್ತು'' ಎಂದು ಸಚಿವ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 20 ವರ್ಷದಲ್ಲಿ ನಾನೆಂದೂ ಮದ್ಯ ಹಂಚಿ ರಾಜಕೀಯ ಮಾಡಿಲ್ಲ: ಸಂಸದ ಸುಧಾಕರ್​ - MP K Sudhakar

Last Updated : Jul 8, 2024, 7:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.