ETV Bharat / state

ಡಿಸಿಎಂ‌ ಸಭೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಸಚಿವ ಶಿವರಾಜ್ ತಂಗಡಗಿ - Shivaraj Tangadagi - SHIVARAJ TANGADAGI

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

Minister Shivaraj Tangadagi
ಸಚಿವ ಶಿವರಾಜ್ ತಂಗಡಗಿ (ETV Bharat)
author img

By ETV Bharat Karnataka Team

Published : Jun 21, 2024, 7:31 PM IST

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಕಾಡೆಮಿ ಹಾಗೂ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರ ಸಭೆ ನಡೆಸಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಸಭೆ ನಡೆಸಿ, ಸಭೆ ಸೂಚನೆ ನೀಡುವ ಅಧಿಕಾರವಿದೆ. ಅದರಲ್ಲೂ ಡಿ.ಕೆ.ಶಿವಕುಮಾರ್ ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ, ಸರ್ಕಾರದ ಘನತೆ ಹೆಚ್ಚಿಸುವಲ್ಲಿ ಸಾಹಿತಿಗಳ ಪಾತ್ರ ಕೂಡ ಮಹತ್ವವಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿ ಕೆಲವು ಸಲಹೆ ನೀಡಿದ್ದಾರೆ ಎಂದರು.‌

ಸಾಹಿತಿಗಳ ಬಗ್ಗೆ ನಾನು ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅನಗತ್ಯವಾಗಿ ಅದರ ಬಗ್ಗೆ ಚರ್ಚೆ ಮಾಡುವುದು ಬೇಡ.‌ ಈ ಹಿಂದಿ‌ನ ಸರ್ಕಾರದಲ್ಲಿ ಯಾರೆಲ್ಲಾ ಎಲ್ಲಿ ಅಕಾಡೆಮಿಗಳ ಅಧ್ಯಕ್ಷರ ಸಭೆ ನಡೆಸಿದ್ದರು ಎಂಬುದನ್ನು ಹೇಳುತ್ತಾ ಹೋದರೆ, ಅದು ರಾಜಕೀಯವಾಗುತ್ತದೆ. ಹೀಗಾಗಿ ಈ ವಿಚಾರವನ್ನು ರಾಜಕಾರಣಗೊಳಿಸುವುದಿಲ್ಲ ಎಂದು ಹೇಳಿದರು.

ಹಿಂದಿನ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ವಿವಿಧ ಪ್ರಶಸ್ತಿಯನ್ನೇ ನೀಡಿರಲಿಲ್ಲ. ಘೋಷಣೆ ಮಾಡಿದ್ದವರಿಗೂ ಪ್ರಶಸ್ತಿ ಪ್ರದಾನ ಮಾಡಿರಲಿಲ್ಲ. ನಾನು ಸಚಿವನಾದ ಬಳಿಕ‌ ಆ ಸರ್ಕಾರ ಘೋಷಣೆ ಮಾಡಿದವರಿಗೆ ಬದಲಾವಣೆ ಮಾಡದೆ ಪ್ರಶಸ್ತಿ ಪ್ರದಾನ ಮಾಡಿದ್ದೇನೆ. ಇದು ನಮ್ಮ ಸಾಂಸ್ಕೃತಿಕ ಬದ್ಧತೆ ತೋರಿಸುತ್ತದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ- ಸಿಎಂ ಜೊತೆ ಚರ್ಚಿಸಿ ದಿನಾಂಕ‌ ನಿಗದಿ: ಈ ಬಾರಿಯ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ದಿನಾಂಕ‌ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ‌ ನೇಮಕ‌: ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದು, ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಸಚಿವರು ಹೇಳಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡ್ಡಾಯವಾಗಿ ಕನ್ನಡ ಭಾಷಾ ಮಾಧ್ಯಮದಲ್ಲಿ‌ ಪಾಠ ಮಾಡುವ ಶಿಕ್ಷಕರನ್ನೇ ಕನ್ನಡ ಮಾಧ್ಯಮ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರ ನೇಮಿಸಬೇಕು. ಈಗಾಗಲೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಗಡಿಭಾಗದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆ ಉಳಿವಿಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದರು.

ಅಕಾಡೆಮಿಗಳಿಗೆ ಅಗತ್ಯವಿರುವ ಅನುದಾನ: ನೂತನ ಅಕಾಡೆಮಿಗಳ ಅಧ್ಯಕ್ಷರುಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದ್ದು,‌ ಅಕಾಡೆಮಿಗಳಿಗೆ ಅಗತ್ಯವಿರುವ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

14 ಅಕಾಡೆಮಿ ಮತ್ತು 4 ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಜೊತೆ ಮೊದಲ ಬಾರಿಗೆ ಸಚಿವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಮಾಲೋಚನಾ‌ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಅಕಾಡೆಮಿ, ಪ್ರಾಧಿಕಾರದ ನೂತನ ಅಧ್ಯಕ್ಷರು ಮತ್ತು ಸದಸ್ಯರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲರೊಂದಿಗೆ ಸಭೆ ನಡೆಸಿದ್ದೇನೆ ಎಂದರು.

ಇದನ್ನೂ ಓದಿ: ಮೋದಿಗೆ, ಸಿ.ಟಿ ರವಿಗೆ ಹೊಡೆಯಿರಿ ಎಂದು ನಾನು ಹೇಳಿಲ್ಲ, ನನ್ನ ಭಾಷಣ ಸರಿಯಾಗಿ ಕೇಳಿ: ಸಚಿವ ಶಿವರಾಜ್ ತಂಗಡಗಿ - Minister shivaraj Tangadagi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.