ETV Bharat / state

ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಿಎಂ ಕಚೇರಿ

ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಿದ್ದರಾಮಯ್ಯ ಕಚೇರಿ ಸ್ಪಷ್ಟಪಡಿಸಿದೆ.

CM Siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 12, 2024, 1:30 PM IST

ಬೆಂಗಳೂರು: "ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ" ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ.

ಈ ಸಂಬಂಧ ಮಾಧ್ಯಮ ಸ್ಪಷ್ಟನೆ ಹೊರಡಿಸಿರುವ ಸಿಎಂ ಕಚೇರಿ, "ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ" ಎಂದು ತಿಳಿಸಿದೆ.

"ಕಾಂಗ್ರೆಸ್ ಸರ್ಕಾರ ಒಂದು ಕೋಟಿ ರೂ.ವರೆಗಿನ ಕಾಮಗಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸುತ್ತಿರುವ ಬಗ್ಗೆ ವರದಿಯಾಗಿವೆ. ಈ ಸಂಬಂಧ ಕಾಂಗ್ರೆಸ್​ನ ಮುಸ್ಲಿಂ ಶಾಸಕರ ನಿಯೋಗ ಸಿಎಂರನ್ನು ಭೇಟಿಯಾಗಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ಕಲ್ಪಿಸುವಂತೆ ಮನವಿ ಮಾಡಿದ್ದರು. ಆಗಸ್ಟ್ 24ರಂದು ಕಾಂಗ್ರೆಸ್ ಮುಸ್ಲಿಂ ನಾಯಕರು ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಕಡತವನ್ನು ಪರಿಶೀಲಿಸಿ ಮಂಡಿಸಿ ಆರ್ಥಿಕ ಇಲಾಖೆಗೆ ಸೂಚಿಸಿದ್ದರು. ಆರ್ಥಿಕ ಇಲಾಖೆಯೂ ಈ ಸಂಬಂಧ ಪರಿಶೀಲನೆ ನಡೆಸಿದೆ ಎಂದು ಹೇಳಲಾಗಿದೆ."

ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್​. ಎ. ಹ್ಯಾರಿಸ್, ರಿಜ್ವಾನ್ ಅರ್ಷದ್​, ಆಸೀಪ್ ಸೇಠ್​, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕೀಶ್ ಬಾನು ಅವರು ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರು. ಕಾಮಗಾರಿಯಲ್ಲಿ 4% ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದರು.

ಅಲ್ಪಸಂಖ್ಯಾತರ ಪ್ರವರ್ಗ 2ಬಿಗೆ 4% ಮೀಸಲಾತಿ ನೀಡುವಂತೆ ಮನವಿ ಮಾಡಿದ್ದರು. ಈಗಾಗಾಲೇ ಎಸ್​ಸಿ, ಎಸ್​ಟಿಗೆ ಗುತ್ತಿಗೆಯಲ್ಲಿ 1 ಕೋಟಿ ರೂ.ವರೆಗೆ ಮೀಸಲಾತಿ ನೀಡಲಾಗುತ್ತಿದೆ. ಎಸ್‌ಸಿ ಎಸ್‌ಟಿ ಸಮುದಾಯಕ್ಕೆ 24% ಗುತ್ತಿಗೆ ಮೀಸಲಾತಿ ನೀಡಲಾಗಿದೆ. OBC ಸಮುದಾಯಕ್ಕೆ 4% ಗುತ್ತಿಗೆ ಮೀಸಲಾತಿ ನೀಡಲಾಗಿದೆ. 2A ಅಡಿ 15% ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ 43% ಮೀಸಲಾತಿ ನೀಡಲಾಗುತ್ತಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡಲು ಚಿಂತನೆ ಮಾಡಲಾಗಿದೆ. ಆ ಮೂಲಕ ಕಾಮಗಾರಿಗಳಲ್ಲಿ ಮೀಸಲಾತಿ 47%ಗೆ ಏರಿಕೆಯಾಗಲಿದೆ. ಈ ಸಂಬಂಧ ಕೆಟಿಪಿಪಿ ಕಾಯ್ದೆಯ 1999ರ 6ನೇ ಪ್ರಕರಣಕ್ಕೆ ತಿದ್ದುಪಡಿ ಮಾಡಲಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಟಿಪ್ಪಣಿಯೂ ಹರಿದಾಡುತ್ತಿದೆ.

ಇದನ್ನೂ ಓದಿ: ಒಳಮೀಸಲಾತಿ ಜಾರಿ ಕುರಿತು ಮಹತ್ವದ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.