ETV Bharat / state

ಮುನಿರತ್ನ ಕೇಸ್: ತನಿಖೆಯಾಗಿ ಸತ್ಯ ಹೊರಬರಲಿ, ಯಾರನ್ನೂ ಸಮರ್ಥಿಸಿಕೊಳ್ಳುವ ಪ್ರಶ್ನೆ ಇಲ್ಲ-ಬಿಜೆಪಿ - Muniratna Case - MUNIRATNA CASE

ಶಾಸಕ ಮುನಿರತ್ನ ಪ್ರಕರಣದ ಕುರಿತು ಸರಿಯಾದ ತನಿಖೆಯಾಗಿ ಸತ್ಯ ಹೊರಬರಲಿ. ಇಲ್ಲಿ ಯಾರನ್ನೂ ಸಮರ್ಥಿಸಿಕೊಳ್ಳುವ ಪ್ರಶ್ನೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

ಬಿಜೆಪಿ ನಾಯಕರ ಸ್ಪಷ್ಟನೆ
ಬಿಜೆಪಿ ನಾಯಕರ ಸ್ಪಷ್ಟನೆ (ETV Bharat)
author img

By ETV Bharat Karnataka Team

Published : Sep 20, 2024, 8:22 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ETV Bharat)

ತುಮಕೂರು/ದೊಡ್ಡಬಳ್ಳಾಪುರ: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ಇಲ್ಲಿ ಯಾರನ್ನೂ ಸಮರ್ಥಿಸಿಕೊಳ್ಳುವ ಪ್ರಶ್ನೆ ಇಲ್ಲ. ಈ ಕುರಿತು ಸರಿಯಾದ ರೀತಿಯಲ್ಲಿ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಒತ್ತಾಯಿಸಿದ್ದಾರೆ.

ತುಮಕೂರಿನಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುನಿರತ್ನ ಪ್ರಕರಣದಲ್ಲಿ ಎಲ್ಲೋ ಒಂದೆಡೆ ರಾಜ್ಯ ಸರ್ಕಾರದ ತರಾತುರಿ ನೋಡಿದರೆ, ಇದರಲ್ಲಿ ರಾಜಕೀಯ ಷಡ್ಯಂತ್ರವಿದೆ ಎಂಬುದನ್ನು ನಾವು ಗಮನಿಸಬೇಕಾಗುತ್ತದೆ ಎಂದರು.

ರಾಜ್ಯದ ಮುಖ್ಯಮಂತ್ರಿಗಳು ಹತಾಶರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ವಾಲ್ಮೀಕಿ ನಿಗಮ ಹಗರಣದ ವಿರುದ್ಧ, ಮುಡಾ ವಿರುದ್ಧದ ನಮ್ಮ ಪಾದಯಾತ್ರೆಯಿಂದಾಗಿ ಮುಖ್ಯಮಂತ್ರಿಗಳು ಒಂಟಿ ಕಾಲಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಪಕ್ಷದಲ್ಲಿ ಮುಖ್ಯಮಂತ್ರಿ ರೇಸ್ ಹೆಚ್ಚಾಗಿದೆ‌. ಹೀಗಾಗಿ ಹತಾಶರಾಗಿ ಪ್ರತಿಪಕ್ಷಗಳನ್ನು ಎದುರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಹಳೇ ಪ್ರಕರಣಗಳನ್ನು ಕೆದಕುವುದು, ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡುವುದು ಹೊಸದೇನಲ್ಲ ಎಂದು ಇದೇ ವೇಳೆ ತಿಳಿಸಿದರು.

ಮುನಿರತ್ನ ಕಾಂಗ್ರೆಸ್​ನಲ್ಲಿದ್ದರೆ ಒಳ್ಳೆಯವ, ಬಿಜೆಪಿಗೆ ಬಂದ್ರೆ ಕೆಟ್ಟವ?: ಮುನಿರತ್ನ ಕಾಂಗ್ರೆಸ್‌ನಲ್ಲಿದ್ದರೆ ಒಳ್ಳೆಯವನು, ಬಿಜೆಪಿಗೆ ಬಂದ್ರೆ ಕೆಟ್ಟವನಾ ಎಂದು ಮುನಿರತ್ನರನ್ನು ಸಮರ್ಥಿಸಿಕೊಳ್ಳುವ ಬಿಜೆಪಿಯವರಿಗೆ ನಾಚಿಕೆ ಆಗಲ್ವಾ? ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ದೊಡ್ಡಬಳ್ಳಾಪುರದ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಬಳಿಕ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದರು.

ಡಿ.ಕೆ.ಬ್ರದರ್ಸ್ ಬಗ್ಗೆ ಕೊತ್ವಾಲ್ ರಾಮಚಂದ್ರನ ಶಿಷ್ಯರು ಎಂದು ಮಾಧ್ಯಮದಲ್ಲಿ ಪ್ರಚಾರ ಆಗಿತ್ತು. ಮುನಿರತ್ನ ನಮ್ಮ ಪಕ್ಷಕ್ಕೆ ಬಂದು ಕೇವಲ 5 ವರ್ಷ ಆಗಿದೆ. ಆದರೆ, ಅವರು 30 ವರ್ಷ ಕಾಂಗ್ರೆಸ್‌ನಲ್ಲಿದ್ದರು. ಆಗ ಒಳ್ಳೆಯವನಾಗಿದ್ದ, ಈಗ ಕೆಟ್ಟವನಾಗಿದ್ದಾನಾ ಎಂದು ಪ್ರಶ್ನೆ ಮಾಡಿದ್ದಾರೆ.

ಪಿಎಸ್​​ಐ ಆತ್ಮಹತ್ಯೆ ಪ್ರಕರಣದಲ್ಲಿ ಹೆಂಡತಿ ದೂರು ನೀಡಿದರು. ಬೀದಿಯಲ್ಲಿ ಪ್ರತಿಭಟನೆ ಮಾಡಿ ಬಂಧಿಸುವಂತೆ ಆಗ್ರಹಿಸಿದರು. ಆದರೂ ನೀವು ಯಾಕೆ ಬಂಧಿಸಲಿಲ್ಲ?. ನೀವು ನಿಮ್ಮ ಪಕ್ಷದ ಶಾಸಕರಿಗೆ ಒಂದು, ಬಿಜೆಪಿ ಶಾಸಕರಿಗೆ ಇನ್ನೊಂದು ರೀತಿ ಧೋರಣೆ ಮಾಡುತ್ತಿದ್ದೀರಾ‌?. ಮುನಿರತ್ನ ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ. ನಾವು ಯಾರೂ ಕೂಡ ಬೆಂಬಲಿಸಲ್ಲ ಎಂದರು.

ಕಾನೂನಿನ ಪ್ರಕಾರ ನೋಟಿಸ್ ಕೊಡಬೇಕಿತ್ತು, ಓಡಿ ಹೋಗಿದ್ದರೆ ಬಂಧಿಸಬೇಕಿತ್ತು. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿ, ಉಪ್ಪು ತಿಂದವರು ನೀರು ಕುಡೀಬೇಕು, ಪೊಲೀಸ್ ಸ್ಟೇಷನ್​​ಗಳನ್ನು ನೀವು ಕಾಂಗ್ರೆಸ್​​ನ ಸ್ಟೇಷನ್ ಆಗಿ ಮಾಡಿಕೊಂಡಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು - Munirathna Gets Bail

ETV Bharat Logo

Copyright © 2025 Ushodaya Enterprises Pvt. Ltd., All Rights Reserved.