ETV Bharat / state

ಗಾಂಧಿ ತತ್ವ, ವಿಚಾರಧಾರೆಯಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah

author img

By ETV Bharat Karnataka Team

Published : Sep 1, 2024, 7:16 AM IST

ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.

gandhi
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ (CM X Post)

ಬೆಂಗಳೂರು: ''ಇಡೀ ವಿಶ್ವಕ್ಕೆ ಮಹಾತ್ಮ ಗಾಂಧಿಯ ಪ್ರಸ್ತುತತೆ ಹೆಚ್ಚುತ್ತಿದೆ. ಗಾಂಧಿ ತತ್ವ, ಗಾಂಧಿ ವಿಚಾರಧಾರೆಯ ವಿಚಾರದಲ್ಲಿ ನಾವು ರಾಜಿಯಾಗುವ ಪ್ರಶ್ನೆಯೇ ಇಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ (1924) ಆಚರಣೆ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

''ಈ ತಲೆಮಾರಿನ ಯುವ ಸಮೂಹಕ್ಕೆ ಮಹಾತ್ಮ ಗಾಂಧಿಯವರ ವಿಚಾರಗಳನ್ನು ಹೆಚ್ಚೆಚ್ಚು ತಲುಪಿಸಬೇಕು. ಪ್ರತೀ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೂ ಗಾಂಧಿಯ ವಿಚಾರಗಳು ಬೇರು ಬಿಡಬೇಕು. ಇದಕ್ಕೆ ತಕ್ಕಂತೆ ಇಡೀ ವರ್ಷ ಕಾರ್ಯಕ್ರಮಗಳನ್ನು ರೂಪಿಸುವುದು ಒಳ್ಳೆಯದು'' ಎಂದು ಸಲಹೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಬಿ.ಎಲ್.ಶಂಕರ್ ಸೇರಿ ಹಲವು ಪ್ರಮುಖರು ಮತ್ತು ಶತಮಾನೋತ್ಸವ ಆಚರಣೆ ಸಮಿತಿಯ ಮುಖಂಡರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಲ್ನಡಿಗೆ ಶಿಕ್ಷಕ, ಸಮಯದ ಪರಿಪಾಲಕ; ವೃತ್ತಿ ಆರಂಭಿಸಿದ ಶಾಲೆಯಲ್ಲೇ ನಿವೃತ್ತನಾದ ಗುರುವಿಗೆ ಚಿನ್ನದ ಕಾಣಿಕೆ - Gold Ring Gift

ETV Bharat Logo

Copyright © 2024 Ushodaya Enterprises Pvt. Ltd., All Rights Reserved.