ETV Bharat / state

ಹೈಕೋರ್ಟ್ ಆದೇಶ ಉಲ್ಲಂಘಿಸಿ ರಸ್ತೆ ನಿರ್ಮಾಣ: ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್

ನ್ಯಾಯಾಂಗ ನಿಂದನೆ ಆರೋಪ ಪ್ರಕರಣದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

author img

By ETV Bharat Karnataka Team

Published : Mar 14, 2024, 7:47 AM IST

Notice to BBMP Commissioner under  violation of High Court order Allegation case
ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಗರದ ಮಲ್ಲತ್ತಹಳ್ಳಿ ಕೆರೆಯ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ ನ್ಯಾಯಾಲಯದ ಆದೇಶವಿತ್ತು. ಅದಾಗ್ಯೂ, ಹೈಕೋರ್ಟ್ ಆದೇಶ ಉಲ್ಲಂಘಿಸಿ ಮಾಗಡಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯು, ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ. ಆರ್. ಮೋಹನ್, ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣ ಚಟುವಟಿಕೆ ಕುರಿತಂತೆ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ರಸ್ತೆ ಸೇರಿದಂತೆ ಯಾವುದೇ ಶಾಶ್ವತ ಅಥವಾ ತಾತ್ಕಾಲಿಕ ನಿರ್ಮಾಣ ಕೆಲಸ ಕೈಗೊಳ್ಳಬಾರದು. ಗಣೇಶ ನಿಮಜ್ಜನ ಸೇರಿದಂತೆ ಯಾವುದೇ ರೀತಿಯ ಉತ್ಸವಗಳಿಗೆ ಅವಕಾಶ ನೀಡಬಾರದು ಎಂದು 2023 ರ ಮಾರ್ಚ್14 ರಂದು ಬಿಬಿಎಂಪಿಗೆ ಆದೇಶ ನೀಡಿದೆ. ಆದರೂ, ಈ ಆದೇಶವನ್ನು ಉಲ್ಲಂಘಿಸಿ 80 ಅಡಿ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಫೋಟೋ ಹಾಗೂ ದಾಖಲೆಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮೊದಲು ಟಿಕೆಟ್​ ಪಡೆದು ಬಳಿಕ ಪಕ್ಷ ಸೇರುತ್ತಿರುವ ಡಾ. ಸಿ ಎನ್ ಮಂಜುನಾಥ್

ಅಲ್ಲದೇ, ಕೆರೆಯ ಅಚ್ಚುಕಟ್ಟು ಪ್ರದೇಶವನ್ನೂ ತಗ್ಗಿಸಲಾಗಿದೆ. ನ್ಯಾಯಾಲಯದ ಆದೇಶಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಒಟ್ಟು 71.18 ಎಕರೆ ಪ್ರದೇಶದಲ್ಲಿ ಮಲ್ಲತ್ತಹಳ್ಳಿ ಕೆರೆ ಇದ್ದು, ಅದರಲ್ಲಿ 3 ಎಕರೆ ಸಂಬಂಧ ವ್ಯಾಜ್ಯವಿದೆ. ಇನ್ನೂ, 42 ಎಕರೆ ಪ್ರದೇಶದಲ್ಲಿ ಜಲ ಮೂಲ ಇದ್ದು, ಅದನ್ನು 44 ಎಕರೆಗೆ ವಿಸ್ತರಿಸಿ ಅಭಿವೃದ್ಧಿಪಡಿಸಬೇಕಾಗಿದೆ. ಸದ್ಯ ಆ ಕೆರೆಯಲ್ಲಿ ನೀರಿಲ್ಲ. ಕೆರೆಯ ಪ್ರದೇಶದಲ್ಲಿಯೇ ಕೊಳಚೆ ನೀರು ಹರಿಯುವ ಮಾರ್ಗವಿದೆ ಎಂದು ಪೀಠಕ್ಕೆ ವಿವರಿಸಿದರು.

ಇದನ್ನೂ ಓದಿ: ದುರುದ್ದೇಶಪೂರಿತವಾಗಿ ತಮ್ಮ ಕಕ್ಷಿದಾರರ ವಿರುದ್ದ ಚುನಾವಣಾ ಅಕ್ರಮ ಆರೋಪ: ಸಿಎಂ ಪರ ವಕೀಲರ ವಾದ

ಜೊತೆಗೆ, ಖಾಸಗಿ ವಸತಿ ಸಮುಚ್ಚಯಕ್ಕೆ ಸಂಪರ್ಕ ಕಲ್ಪಿಸಿ ಕೆರೆಯ ಜಾಗದಲ್ಲೇ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಆ ಮೂಲಕ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಲಾಗಿದೆ. ಹಾಗಾಗಿ ಬಿಬಿಎಂಪಿ ಮುಖ್ಯಸ್ಥರ ವಿರುದ್ಧ ನ್ಯಾಯಾಂಗ ನಿಂದನಾ ಕ್ರಮ ಜರುಗಿಸಬೇಕು ಎಂದು ಅವರು ಪೀಠಕ್ಕೆ ವಿವರಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.