ETV Bharat / state

ನಿಷೇಧಾಜ್ಞೆ ಮೂಲಕ ತುಂಗಭದ್ರಾ ಕಾಲುವೆಯಿಂದ ಕುಡಿಯುವ ನೀರು ಹರಿಸಲು ಸೂಚನೆ: ಸಚಿವ ಶಿವರಾಜ್ ತಂಗಡಗಿ - ತುಂಗಭದ್ರಾ ಕಾಲುವೆ

ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸಚಿವ ಶಿವರಾಜ್​ ತಂಗಡಗಿ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

Minister Shivaraj Thangadagi
ಸಚಿವ ಶಿವರಾಜ್​ ತಂಗಡಗಿ
author img

By ETV Bharat Karnataka Team

Published : Feb 24, 2024, 6:45 AM IST

ಬೆಂಗಳೂರು: "ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. "ಜಲಾಶಯದಲ್ಲಿ ನೀರಿನ ಸಾಮರ್ಥ್ಯ 9.04 ಟಿಎಂಸಿ, ಇದರಲ್ಲಿ ಡೆಡ್ ಸ್ಟೋರೆಜ್ 2 ಟಿಎಂಸಿ, ಈ ಪೈಕಿ ರಾಜ್ಯದ ಪಾಲು 1.860 ಟಿಎಂಸಿ, ಆಂಧ್ರಪ್ರದೇಶದ ಪಾಲು 2.813 ಟಿಎಂಸಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರಿಸಿ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಹಂಚಿಕೆ ಮಾಡಲಾಗಿದೆ" ಎಂದು ತಿಳಿಸಿದರು.

"ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ್ ಜಲಾಶಯ ಹಾಗೂ ಇತರ ಕೆರೆ ಕಟ್ಟೆಗಳಿಗೆ ಮಾ.5ರಿಂದ ಮಾ.16ರವರೆಗೆ 1200 ಕ್ಯೂಸೆಕ್ ನಂತೆ ಕುಡಿಯುವ ನೀರು ಹರಿಸಲಾಗುತ್ತದೆ. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ ಮೂಲಕ ಬಳ್ಳಾರಿ ಜಿಲ್ಲೆಗೆ ಹಾಗೂ ಇತರ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಿಗೆ ಮಾ.10ರಿಂದ ಮಾ.20ರವರೆಗೆ 100 ಕ್ಯೂಸೆಕ್​​ನಂತೆ ಮತ್ತು ಅಗತ್ಯಕ್ಕೆ ಅನುಗುಣವಾಗಿ ಮಾ.21ರಿಂದ ಮಾ.31ರವರೆಗೆ 100 ಕ್ಯೂಸೆಕ್ಸ್​ನಂತೆ ಕುಡಿಯುವ ನೀರಿನ ಯೋಜನೆಗೆ ಹಾಗೂ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು" ಎಂದರು.

"ರಾಯ ಬಸವಣ್ಣ ಕಾಲುವೆಯಿಂದ ವಿಜಯನಗರ ಜಿಲ್ಲೆಗೆ ಹಂಚಿಕೆಯಾದ 0.260 ಟಿಎಂಸಿ ನೀರಿನಲ್ಲಿ ಮಾ.1ರಿಂದ ಮೇ 30ರವರೆಗೆ 100 ಕ್ಯೂಸೆಕ್​​ನಂತೆ ಆನ್ ಆಫ್ ನಂತೆ ಕುಡಿಯುವ ನೀರೋಳಗೊಂಡು ಹರಿಸಬಹುದಾಗಿದೆ ಎಂದು ತೀರ್ಮಾನಿಸಲಾಗಿದೆ. ಕುಡಿಯುವ ನೀರಿಗೆ ಮಾತ್ರ ಆದ್ಯತೆ ಕೊಟ್ಟು ಜನರಿಗೆ ನೀರು ಒದಗಿಸಲು ತೀರ್ಮಾನ ಮಾಡಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನಿಷೇಧಾಜ್ಞೆ ಮೂಲಕ ನೀರು ಹರಿಸಲಾಗುವುದು" ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಜಿಲ್ಲಾಧಿಕಾರಿಗಳಿಗೆ ಸೂಚನೆ: ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಕಲಂ 144ನ್ನು ಅಳವಡಿಸಿ ಸೂಕ್ತ ಪೊಲೀಸ್ ಬಂದೋಬಸ್ತ್​ ಪಡೆದು ಕುಡಿಯುವ ನೀರಿನ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ಸಚಿವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಬಿ.ನಾಗೇಂದ್ರ, ಶಾಸಕರಾದ ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ನಾ.ರಾ.ಭರತ್ ರೆಡ್ಡಿ ಇನ್ನಿತರರು ಉಪಸ್ಥಿತರಿದ್ದರು.

ಪಂಪ್ ಸೆಟ್ ಮೂಲಕ ನೀರು ಬಳಸಿದ್ರೆ ಕ್ರಮ: ಕೆಲವರು ಪಂಪ್ ಸೆಟ್ ಮೂಲಕ ಅಕ್ರಮವಾಗಿ ನೀರು ಪಡೆಯುತ್ತಾರೆ ಎಂದು ರೈತ ಮುಖಂಡರು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದರು. ಇದರಿಂದ ಸಿಡಿಮಿಡಿಗೊಂಡ ಶಿವರಾಜ್ ತಂಗಡಗಿ ಅವರು, ಕುಡಿಯಲು ಮಾತ್ರ ನೀರು ಬಳಕೆ ಆಗಬೇಕು. ಅಕ್ರಮವಾಗಿ ನೀರು ಪಡೆದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಭೆಯಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಮಂಗನ ಕಾಯಿಲೆ ನಿಯಂತ್ರಣ ಕುರಿತು ಮಲೆನಾಡು ಶಾಸಕರೊಂದಿಗೆ ಸಚಿವ ಗುಂಡೂರಾವ್ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.