ETV Bharat / state

ಕೃಷಿ ಇಲಾಖೆಯ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ - Agricultural Officers Recruitment - AGRICULTURAL OFFICERS RECRUITMENT

ಇದೇ ಮೊದಲ ಬಾರಿಗೆ ಕೃಷಿ ಇಲಾಖೆಯಲ್ಲಿ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

AGRICULTURAL OFFICERS RECRUITMENT
ಕರ್ನಾಟಕ ಲೋಕಸೇವಾ ಆಯೋಗ (ETV Bharat)
author img

By ETV Bharat Karnataka Team

Published : Sep 20, 2024, 6:27 PM IST

ಬೆಂಗಳೂರು : ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದು ಇದೇ ಮೊದಲು.

ಇಲಾಖೆಯಲ್ಲಿ ಶೇ. 60ಕ್ಕೂ ಅಧಿಕ ಹುದ್ದೆಗಳು‌ ಖಾಲಿ ಇರುವುದನ್ನು ಮನಗಂಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ‌ ಮೂಲಕ ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ)ಗೆ ಪ್ರಸ್ತಾವನೆ ಕಳಿಸಲು ಸಚಿವರು ಕಾರಣರಾಗಿದ್ದಾರೆ. ಈ ನೇಮಕಾತಿಯಿಂದ ರಾಜ್ಯ 31 ಜಿಲ್ಲೆಗಳ ಎಲ್ಲ ತಾಲೂಕುಗಳಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ.

2008 ರಲ್ಲಿ ಕೆಪಿಎಸ್‌ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು, ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ.

ಇದರಿಂದ‌ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.

ಮುಖ್ಯಮಂತ್ರಿಗಳಿಗೆ ಧನ್ಯವಾದ: ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಧನ್ಯವಾದ ಅರ್ಪಿಸಿದ್ದಾರೆ.

ಈ‌ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ. ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ. ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 3 ವರ್ಷ ವಯೋಮಿತಿ ಸಡಿಲಿಸಿ ಗ್ರಾಮ ಲೆಕ್ಕಿಗ ಹುದ್ದೆಗೆ ಪರಿಷ್ಕೃತ ಅಧಿಸೂಚನೆ - Village Accountant Recruitment

ETV Bharat Logo

Copyright © 2024 Ushodaya Enterprises Pvt. Ltd., All Rights Reserved.