ಹಾಸನ: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೇಮಾವತಿನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಕುಡಿಯುವ ನೀರು ತರಲು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಇಬ್ಬರು ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ ಸೇರಿದಂತೆ ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ನಿವಾಸದ ಕೂಗಳತೆ ದೂರದಲ್ಲಿಯೇ ಬೆಳ್ಳಂಬೆಳಗ್ಗೆ ನಡೆದ ಹತ್ಯೆಯಿಂದ ಹೇಮಾವತಿನಗರ ಬಡಾವಣೆ ಜನರು ಆತಂಕಗೊಂಡಿದ್ದಾರೆ.
ಇದನ್ನೂ ಓದಿ: ಬಹುತೇಕ ರಾಜ್ಯವನ್ನು ಆವರಿಸಿದ ನೈಋತ್ಯ ಮುಂಗಾರು: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - Monsoon
ಚೈಲ್ಡ್ ರವಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಸುತ್ತಮುತ್ತಲು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಆತನ ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಕೃತ್ಯ ಎಸಗಿದ್ದಾರೆ. ವಾಕಿಂಗ್ ಮಾಡುತ್ತಿದ್ದ ಜನರು, ಸಾರ್ವಜನಿಕರು ಹಾಗೂ ಶಾಲೆಗೆ ಹೋಗಲು ಬಸ್ಗಾಗಿ ಸ್ವಲ್ಪ ದೂರದಲ್ಲಿ ಮಕ್ಕಳು ಕಾಯುತ್ತಾ ನಿಂತಿರುವಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಕಂಡು ಎಲ್ಲರೂ ಭಯಭೀತರಾಗಿದ್ದಾರೆ.
ಇದನ್ನೂ ಓದಿ: ಲೋಕಸಮರ: ರಾಜ್ಯದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಳ, ಬಿಜೆಪಿ - ಜೆಡಿಎಸ್ ಕುಸಿತ - Lok Sabha Election Results
ಇದನ್ನೂ ಓದಿ: ಲೋಕಸಮರ: ಒಂದೇ ಕ್ಲಿಕ್ನಲ್ಲಿ ರಾಜ್ಯದ 28 ಕ್ಷೇತ್ರಗಳ ಫಲಿತಾಂಶ - lok sabha election Results 2024
ಪೆನ್ಷನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಹುಡುಕಾಟಕ್ಕೆ ಈಗಾಗಲೇ ಹಾಸನ ಎಸ್ಪಿ ಮಹಮದ್ ಸುಜೀತ್ ಎರಡು ತಂಡ ರಚನೆ ಮಾಡಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸೆರೆ - Praveen Nettaru Murder Case