ETV Bharat / state

ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ: ಮೇಲ್ಮನೆ ಸದಸ್ಯರಿಬ್ಬರ ಹೇಳಿಕೆ ದಾಖಲಿಸಿದ ಸಿಐಡಿ, ಸದ್ಯದಲ್ಲೇ ಯತೀಂದ್ರಗೂ ನೊಟೀಸ್? - CT RAVI CASE

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಸಿ.ಟಿ.ರವಿ ಪರಿಷತ್​ನಲ್ಲಿ ಅಶ್ಲೀಲ ಪದ ಬಳಕೆ ಆರೋಪ ಸಂಬಂಧ ಪರಿಷತ್ ಸದಸ್ಯರ ಹೇಳಿಕೆಗಳನ್ನು ಸಿಐಡಿ ದಾಖಲಿಸಿಕೊಳ್ಳುತ್ತಿದೆ. ಶೀಘ್ರದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಂದಲೂ ಹೇಳಿಕೆ ಪಡೆಯಲಿದೆ.

UPPER HOUSE MEMBERS  CID RECORDS STATEMENTS  CT RAVI IN TROUBLE  BENGALURU
ಮೇಲ್ಮನೆ ಸದಸ್ಯರಿಬ್ಬರ ಹೇಳಿಕೆ ದಾಖಲಿಸಿದ ಸಿಐಡಿ (Photo Credit: kla.kar.nic.in/ETV Bharat)
author img

By ETV Bharat Karnataka Team

Published : Jan 17, 2025, 7:23 AM IST

ಬೆಂಗಳೂರು: ಬೆಳಗಾವಿಯ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಪರಿಷತ್ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದಾರೆನ್ನಲಾದ ಪ್ರಕರಣ ಸಂಬಂಧ ಪರಿಷತ್ ಸದಸ್ಯರಾದ ಉಮಾಶ್ರೀ ಮತ್ತು ನಾಗರಾಜ್ ಯಾದವ್ ಅವರ ಹೇಳಿಕೆಯನ್ನು ಸಿಐಡಿ ದಾಖಲಿಸಿಕೊಂಡಿದೆ.

ಪ್ರಕರಣ ಸಂಬಂಧ ಪರಿಷತ್‌ ಕಾಂಗ್ರೆಸ್ ಸದಸ್ಯ ಉಮಾಶ್ರೀ ಮತ್ತು ನಾಗರಾಜ್ ಯಾದವ್ ಗುರುವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದು, ಕಲಾಪದ ಸಂದರ್ಭದಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ ಕುರಿತು ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಘಟನೆ ವೇಳೆ ವಿಧಾನ ಪರಿಷತ್​ ಕಲಾಪದಲ್ಲಿದ್ದ ಯತೀಂದ್ರ ಸಿದ್ದರಾಮಯ್ಯ ಅವರಿಗೂ ನೊಟೀಸ್ ನೀಡಲು ಸಿಐಡಿ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಬೆಳಗ್ಗೆ 10.30ಕ್ಕೆ ಬಂದ ಉಮಾಶ್ರೀ ಅವರನ್ನು ಮಹಿಳಾ ಡಿವೈಎಸ್ಪಿಯೊಬ್ಬರು ಮಧ್ಯಾಹ್ನ 12.30ರವರೆಗೆ ವಿಚಾರಣೆ ನಡೆಸಿದ್ದಾರೆ. ಹಾಗೆಯೇ ಮತ್ತೊಬ್ಬ ಪರಿಷತ್‌ ಸದಸ್ಯ ನಾಗರಾಜ್‌ ಯಾದವ್ 11 ಗಂಟೆಗೆ ತೆರಳಿದ್ದು, 1 ಗಂಟೆವರೆಗೂ ಡಿವೈಎಸ್ಪಿ ಕೇಶವಮೂರ್ತಿ ವಿಚಾರಣೆ ನಡೆಸಿದ್ದು, ಲಿಖಿತ ಮತ್ತು ಮೌಖಿಕ ರೂಪದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಜೊತೆಗೆ ಹೇಳಿಕೆಯನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪರಿಷತ್ ಕಲಾಪ ಎಷ್ಟು ಗಂಟೆಗೆ ಆರಂಭವಾಯಿತು? ನೀವುಗಳು ಎಷ್ಟು ಗಂಟೆವರೆಗೂ ಕಲಾಪದಲ್ಲಿ ಇದ್ದಿರಿ? ಸಿ.ಟಿ.ರವಿ ಅವರು ಮಹಿಳಾ ಸಚಿವರಿಗೆ ಅಶ್ಲೀಲ ಪದ ಬಳಸಿದಾಗ ಸ್ಥಳದಲ್ಲಿ ನೀವುಗಳು ಇದ್ದರಾ? ಸೇರಿ ಸುಮಾರು 40ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ತಿಳಿದುಬಂದಿದೆ.

ಕಲಾಪದ ಸಂದರ್ಭದಲ್ಲಿ ಸಿ.ಟಿ.ರವಿ ಅವರು ವಿಚಾರವೊಂದರ ಚರ್ಚೆ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ್ದು ಸ್ಪಷ್ಟವಾಗಿ ಕೇಳಿದ್ದೇವೆ. ಜತೆಗೆ ಸ್ಥಳದಲ್ಲಿದ್ದ ನಾವು ಕೂಡಲೇ ರವಿ ವಿರುದ್ಧ ಪ್ರತಿಭಟನೆ ನಡೆಸಿದ್ದೇವು. ಅಲ್ಲದೆ, ಅವರ ವಿರುದ್ಧ ಕ್ರಮಕ್ಕೆ ಸಭಾಪತಿಗಳಿಗೂ ದೂರು ನೀಡಿದ್ದೇವೆ ಎಂದು ಇಬ್ಬರು ಸದಸ್ಯರು ಹೇಳಿಕೆ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಿಷತ್‌ಸದಸ್ಯ ನಾಗರಾಜ್ ಯಾದವ್, ಪರಿಷತ್ ಕಲಾಪದಲ್ಲಿ ನಡೆದ ಘಟನೆಯನ್ನು ತನಿಖಾಧಿಕಾರಿಗಳಿಗೆ ಸಮರ್ಪಕವಾಗಿ ವಿವರಿಸಿದ್ದೇನೆ. ಯಾವ ಮಹಿಳೆಗೂ ಆ ರೀತಿಯ ಅಶ್ಲೀಲ ಪದ ಬಳಸಬಾರದು. ಸಿ.ಟಿ.ರವಿ ಅವರು ಮೊಂಡುತನ ಬಿಟ್ಟು ಬೇಷರತ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಯತೀಂದ್ರ ಸಿದ್ದರಾಮಯ್ಯಗೂ ನೋಟಿಸ್?: ಮತ್ತೊಂದೆಡೆ ಪ್ರಕರಣ ಸಂಬಂಧ ಸಿಐಡಿ ತನಿಖಾ ತಂಡ ಪರಿಷತ್‌ನ ಕೆಲ ಸದಸ್ಯರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈಗಾಗಲೇ ರಾಮೋಜಿಗೌಡ ಅವರ ಹೇಳಿಕೆ ಪಡೆಯಲಾಗಿದೆ. ಇದೀಗ ಉಮಾಶ್ರೀ ಮತ್ತು ನಾಗರಾಜ್ ಯಾದವ್ ಹೇಳಿಕೆ ಪಡೆಯಲಾಗಿದ್ದು, ಸದ್ಯದಲ್ಲೇ ಯತೀಂದ್ರ ಸಿದ್ದಾರಾಮಯ್ಯ ಅವರಿಗೂ ನೋಟಿಸ್ ಕೊಟ್ಟು, ಅವರಿಂದಲೂ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಓದಿ: ಮೂಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಇಡಿ ತನಿಖಾ ಪ್ರಕ್ರಿಯೆ ಪ್ರಶ್ನಿಸಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.