ETV Bharat / state

ಅಧಿಕಾರಿಯ ನಂತರ ಗುತ್ತಿಗೆದಾರ ಆತ್ಮಹತ್ಯೆ: ಪ್ರಕರಣ ಸಿಬಿಐಗೆ ವಹಿಸಲು ವಿಜಯೇಂದ್ರ ಆಗ್ರಹ - B Y Vijayendra - B Y VIJAYENDRA

ಅಧಿಕಾರಿ ಮತ್ತು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.

OFFICER AND CONTRACTOR SUICIDE CASE  VIJAYENDRA DEMANDS  CASE BE HANDED OVER TO CBI  BENGALURU
ಪ್ರಕರಣ ಸಿಬಿಐಗೆ ವಹಿಸಲು ವಿಜಯೇಂದ್ರ ಆಗ್ರಹ (ಕೃಪೆ: ETV Bharat Karnataka (ಸಂಗ್ರಹ ಚಿತ್ರ))
author img

By ETV Bharat Karnataka Team

Published : May 31, 2024, 1:08 PM IST

ಬೆಂಗಳೂರು: ಶಿವಮೊಗ್ಗದಲ್ಲಿ ಅಧಿಕಾರಿ ಆತ್ಮಹತ್ಯೆ ಬೆನ್ನಲ್ಲೇ ಸಂತೇಬೆನ್ನೂರಿನಲ್ಲಿ ಗುತ್ತಿಗೆದಾರರ ಆತ್ಮಹತ್ಯೆ ಮಾಡಿಕೊಂಡಿದ್ದು ಕೂಡಲೇ ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಟ್ವೀಟ್ ಮಾಡಿರುವ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ಭ್ರಷ್ಟ ವ್ಯೂಹಕ್ಕೆ ಸಿಲುಕಿದ ಅಧಿಕಾರಿಯೊಬ್ಬರ ಆತ್ಮಹತ್ಯೆಯ ಕರಿನೆರಳು ಅಚ್ಚೊತ್ತಿರುವ ಬೆನ್ನಲ್ಲೇ ಕೆಆರ್‌ಡಿಎಲ್​ನಿಂದ ಬಿಲ್ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಸರ್ಕಾರದಲ್ಲಿ ಏನಾಗುತ್ತಿದೆ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಮಾಯಕ ಹೆಣ್ಣುಮಕ್ಕಳಿಗೆ ಕೊಲೆ ಭಾಗ್ಯ, ಪ್ರಾಮಾಣಿಕ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ, ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ. ಬರಿದಾಗಿರುವ ಸರ್ಕಾರಿ ಖಜಾನೆ ಗುತ್ತಿಗೆದಾರರ ಪಾಲಿಗೆ ಆತ್ಮಹತ್ಯೆಯ ಬಾವಿಯಾಗುತ್ತಿದೆ. ಈ ಸರ್ಕಾರಕ್ಕೆ ಮಾನವ ಜೀವಗಳೆಂದರೆ ಅದು ಕೇವಲದ ಸಂಕೇತವಾಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಷ್ಟೂ ಕಾಲ ರಾಜ್ಯದ ಜನತೆ 'ನಿತ್ಯ ದುರಂತ ಸುದ್ದಿ' ಯನ್ನಷ್ಟೇ ತಿಳಿಯ ಬೇಕಿದೆ. ಇದು ಕರ್ನಾಟಕದ ಪರಮ ದೌರ್ಭಾಗ್ಯವಲ್ಲದೇ ಇನ್ನೇನೂ ಅಲ್ಲ. ಎರಡು ಅಮೂಲ್ಯ ಜೀವಗಳ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಸತ್ಯ ಏನೆಂಬುದು ಬಹಿರಂಗವಾಗಲೇ ಬೇಕಿದೆ. ಇದಕ್ಕೆ ಸಿಬಿಐ ತನಿಖೆಯೊಂದೇ ಉಳಿದಿರುವ ಮಾರ್ಗವಾಗಿದೆ ಎಂದು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ‌

ಇದನ್ನೂ ಓದಿ: ಇ-ಬಸ್ ಚಾಲಕರ ಹುದ್ದೆ ಕನ್ನಡಿಗರಿಗೆ ಸಿಗಲು ಯಾಕೆ ಸಿಎಂ ಕೇಂದ್ರಕ್ಕೆ ಪತ್ರ ಬರೆದಿಲ್ಲ?: ಆರ್.ಅಶೋಕ್ - R Ashok

ETV Bharat Logo

Copyright © 2025 Ushodaya Enterprises Pvt. Ltd., All Rights Reserved.