ETV Bharat / state

ಭ್ರಷ್ಟಾಚಾರ ಆರೋಪದ ಅಧಿಕಾರಿಗಳ ವಿಚಾರಣೆ ಪಾರದರ್ಶಕವಾಗಿರಲಿ: ಹೈಕೋರ್ಟ್

ಲೋಕಾಯುಕ್ತ ಕೋರ್ಟ್​ನಿಂದ ಆರೋಪ ಖುಲಾಸೆಯಾಗಿದ್ದರೂ ಅರ್ಜಿದಾರರನ್ನು ಸೇವೆಯಿಂದ ವಜಾಗೊಳಿಸಿದ ಸರ್ಕಾರದ ಕ್ರಮವನ್ನು ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ.

High Court
ಹೈಕೋರ್ಟ್​
author img

By ETV Bharat Karnataka Team

Published : Jan 31, 2024, 8:30 AM IST

ಬೆಂಗಳೂರು: ಭ್ರಷ್ಟಾಚಾರ ಆರೋಪ ಹೊತ್ತ ಸರ್ಕಾರಿ ಸಿಬ್ಬಂದಿಯನ್ನು ಇಲಾಖಾ ವಿಚಾರಣೆಗೆ ಒಳಪಡಿಸುವಾಗ ಪಾರದರ್ಶಕತೆ ಮತ್ತು ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಖಾತಾ ಬದಲಾವಣೆ ಮಾಡಿಕೊಡಲು 500 ರೂ. ಲಂಚ ಪಡೆದ ಆರೋಪದಲ್ಲಿ ಲೋಕಾಯುಕ್ತ ಕೋರ್ಟ್‌ನಿಂದ ಖಾಲಾಸೆಯಾದ ಹೊರತಾಗಿಯೂ ತಮ್ಮನ್ನು ಸೇವೆಯಿಂದ ವಜಾಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ, ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಪಿಡಿಒ ಪಿ.ವಿ.ರುದ್ರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ನೌಕರರು ಸರ್ಕಾರಗಳ ಗುಲಾಮರಲ್ಲ: ಅರ್ಜಿದಾರ ಪಿ.ವಿ.ರುದ್ರಪ್ಪ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿದ ಸರ್ಕಾರದ ಆದೇಶವನ್ನು ರದ್ದುಪಡಿಸಿರುವ ನ್ಯಾಯಪೀಠ, "ನಮ್ಮ ವ್ಯವಸ್ಥೆ ಈಸ್ಟ್ ಇಂಡಿಯಾ ಕಂಪನಿಯೂ ಅಲ್ಲ; ನೌಕರರು ಸರ್ಕಾರಗಳ ಗುಲಾಮರೂ ಅಲ್ಲ" ಎಂದು ತಿಳಿಸಿತು. ಜೊತೆಗೆ, ಅರ್ಜಿದಾರರಿಗೆ ನಿವೃತ್ತಿಯವರೆಗೆ ನೀಡಬೇಕಾದ ವೇತನ, ನಿವೃತ್ತಿ ನಂತರದ ಪಿಂಚಣಿ ಸೇರಿದಂತೆ ಕಾನೂನು ಬದ್ಧವಾದ ಎಲ್ಲ ಸೇವಾ ಸೌಲಭ್ಯಗಳನ್ನೂ ಒದಗಿಸುವಂತೆ ನಿರ್ದೇಶನ ನೀಡಿತು.

ಇದಕ್ಕೂ ಮುನ್ನ, ಲಂಚ ಪ್ರಕರಣದಲ್ಲಿ ಅರ್ಜಿದಾರರನ್ನು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದ್ದರೂ ಅದೇ ಆರೋಪದ ಮೇಲೆ ಇಲಾಖೆ ವಿಚಾರಣೆಯಲ್ಲಿ ದೋಷಿಯಾಗಿ ತೀರ್ಮಾನಿಸಿ ಸೇವೆಯಿಂದ ವಜಾಗೊಳಿಸಿದ ಸರ್ಕಾರವನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

ಸಾಕ್ಷ್ಯಧಾರಗಳಿಲ್ಲ ಎಂದು ಹೇಳಿ ಲಂಚ ಪ್ರಕರಣದಿಂದ ಅರ್ಜಿದಾರರನ್ನು ಲೋಕಾಯುಕ್ತ ನ್ಯಾಯಾಲಯ ಖುಲಾಸೆಗೊಳಿಸಿದೆ. ಹೀಗಿದ್ದರೂ ಸರ್ಕಾರ ಏಕೆ ಅರ್ಜಿದಾರರನ್ನು ಸೇವೆಯಿಂದ ವಜಾಗೊಳಿಸಿದೆ?. ಈ ಪ್ರಕರಣದಲ್ಲಿ ಅರ್ಜಿದಾರರನ್ನು ದುರುದ್ದೇಶದಿಂದ ಇದರಲ್ಲಿ ಸಿಲುಕಿಸಿರುವುದು ಕಂಡುಬರುತ್ತಿದೆ. ವಿಚಾರಣೆ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನ್ಯಾಯದಾನ ಮಾಡಬಾರದು. ಅಂತೆಯೇ, ಕೈಯಲ್ಲಿ ಕಾಸಿಟ್ಟರೆ ಮಾತ್ರ ಸರ್ಕಾರಿ ಕೆಲಸ ಮಾಡುತ್ತೇನೆ ಎಂದು ಸರ್ಕಾರಿ ಸೇವಕರು ದುರ್ನತಡೆ ತೋರಿದಂತಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು 500 ರೂ. ಲಂಚದ ಬೇಡಿಕೆಯಿಟ್ಟಿದ್ದ ಆರೋಪದ ಮೇಲೆ ಅರ್ಜಿದಾರರ ವಿರುದ್ಧ 2011ರಲ್ಲಿ ಮಹಿಳೆಯರಿಬ್ಬರು ನೀಡಿದ್ದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಲೋಕಾಯುಕ್ತ ಸಂಸ್ಥೆಯ ವಿಚಾರಣಾ ವರದಿ ಆಧರಿಸಿ ಇಲಾಖೆ ವಿಚಾರಣೆ ನಡೆಸಿದ್ದ ಸರ್ಕಾರ ಅರ್ಜಿದಾರರನ್ನು ದೋಷಿಯಾಗಿ ಪರಿಗಣಿಸಿ 2019ರಲ್ಲಿ ಸೇವೆಯಿಂದ ವಜಾಗೊಳಿಸಿತ್ತು. ಈ ಆದೇಶವನ್ನು 2020ರಲ್ಲಿ ಕೆಎಟಿ ಪುರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಇದನ್ನೂ ಓದಿ: ಖರ್ಗೆ ಕುರಿತು ಅವಹೇಳನ ಆರೋಪ: ಸೂಲಿಬೆಲಿ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.