ಧಾರವಾಡ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕ್ಷಿಪ್ರ ಕಾರ್ಯಪಡೆ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯೊಂದರಲ್ಲಿ ಕೋಟಿ ಕೋಟಿ ಮೊತ್ತದ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ.
ಧಾರವಾಡದ ಅರ್ನಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನಲ್ಲಿರುವ ಮನೆ ಮೇಲೆ ಅಧಿಕಾರಿಗಳ ದಾಳಿ ನಡೆದಿತ್ತು. ಮನೆಯಲ್ಲಿ ಮದ್ಯ ಸಂಗ್ರಹ ಮಾಡಲಾಗಿದೆ ಎಂಬ ಮಾಹಿತಿ ಮೇರೆಗೆ ಚುನಾವಣಾ ಕ್ಷಿಪ್ರ ಕಾರ್ಯಪಡೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮದ್ಯ ಹುಡುಕಾಡುವಾಗ ವೇಳೆ ತಿಜೋರಿಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣವನ್ನು ಪೊಲೀಸರು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಕಾರಲ್ಲಿ ಹಣ ಪತ್ತೆ ಪ್ರಕರಣ: ವಾಹನ ಮಾಲೀಕರ ವಿರುದ್ಧ ಎಫ್ಐಆರ್, IT ತನಿಖೆ ಚುರುಕು - Money Seize Case