ETV Bharat / state

ಅಧಿಕಾರಿಗಳು ಸಾರ್ವಜನಿಕರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿ: ಡಿ.ಕೆ.ಶಿವಕುಮಾರ್ - D K Shivakumar

author img

By ETV Bharat Karnataka Team

Published : Jun 26, 2024, 10:01 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಪ್ರಾಮಾಣಿಕವಾಗಿ ಸಾರ್ವಜನಿಕರ ಸೇವೆ ಮಾಡುವಂತೆ ತಿಳಿಸಿದ್ದಾರೆ.

DCM DK Shivakumar
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ರಾಮನಗರ: ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ ಸಾರ್ವಜನಿಕರ ಸೇವೆ ಮಾಡುವವರು. ಈ ಸೇವೆ ಮಾಡಲೆಂದೇ ಅವರು ಈ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಆ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುವಂತೆ ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.

ಇಂದು ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಕಚೇರಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ನೊಂದ ಜನರಿಗೆ ಸಹಾಯ ಮಾಡಬೇಕು. ಅವರ ಸಮಸ್ಯೆ, ಅಹವಾಲುಗಳಿಗೆ ಸ್ಪಂದಿಸಬೇಕು. ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವ ನಾನು ಕೂಡ ಒಬ್ಬ ಸರ್ಕಾರಿ ನೌಕರನಿದ್ದಂತೆ. ಅಂತೆಯೇ, ಜನರಿಂದ ಆಯ್ಕೆಯಾದ ಪ್ರತಿನಿಧಿಗಳೆಲ್ಲರೂ ಸರ್ಕಾರಿ ನೌಕರರೇ. ಜನರ ಸೇವೆ ಮಾಡಲು ಅವರು ಈ ಆಯ್ಕೆ ಮಾಡಿದ್ದಾರೆ. ಕುಂದುಕೊರತೆಗಳನ್ನು ನಿವಾರಿಸಲು ಈ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಾಲ, ಸೌಲಭ್ಯ, ನಿವೇಶನ, ವಸತಿ, ರಸ್ತೆ, ಸ್ಮಶಾನ, ಅಂತರ್ಜಲ ಹೆಚ್ಚಿಸುವ ಬೇಡಿಕೆ, ಪಿಂಚಣಿ, ಬರ ಪರಿಹಾರ, ಪೋಡಿ, ಖಾತೆ ಬದಲಾವಣೆ ಕುರಿತಾಗಿ ಇದೂವರೆಗೂ ಸುಮಾರು ಮೂರು ಸಾವಿರ ಜನರು ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಅಧಿಕಾರಿಗಳು ಪರಿಶೀಲಿಸಿ ಅವರ ಸಮಸ್ಯೆಗೆ ಪರಿಹಾರ ನೀಡಬೇಕು. ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕುಂದುಕೊರತೆ ಪರಿಹರಿಸಲು ಲಂಚ ಪಡೆಯುತ್ತಿರುವ ಕುರಿತು ಕರೆ ಬಂದರೆ ಅವರನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತರಿಗೆ ಯಾವುದೇ ವೇತನ, ಪಿಂಚಣಿ ಸೌಲಭ್ಯವಿಲ್ಲ. ಅವರಿಗೆ ನಿವೃತ್ತಿ ಇರುವುದಿಲ್ಲ. ಅವರು ತಮ್ಮ ಸಮಸ್ಯೆಯ ಪರಿಹಾರಕ್ಕಾಗಿ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ರೈತರು ಈ ಕಾರ್ಯಕ್ರಮಕ್ಕೆ ಆಗಮಿಸಲು ಯಾವುದೇ ಸಂಕೋಚ ಬೇಡ ಅಥವಾ ತಾವೇ ಖುದ್ದು ತಾಲೂಕು ಕಚೇರಿಗೆ ತೆರಳಿ ತಮ್ಮ ಸಮಸ್ಯೆಯ ಕುರಿತು ಅರ್ಜಿ ನೀಡಬಹುದಾಗಿದೆ. ಅಧಿಕಾರಿಗಳು ಈ ಅರ್ಜಿಗಳನ್ನು ಪರಿಶೀಲಿಸಿ ತಮ್ಮ ಸಮಸ್ಯೆಗೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ನೀಡುತ್ತಾರೆ ಎಂದರು.

ಜನರಿಗೆ ಹಲವು ನಿಗಮಗಳಿಂದ ಒಂದು ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ನೀಡುವ ಅವಕಾಶವಿದೆ. ಸಬ್ಸಿಡಿ ರೂಪದಲ್ಲಿ ಸಾಲ ನೀಡಲು ಅವಕಾಶವಿದೆ. ಜನರ ಅಭಿವೃದ್ಧಿಗಾಗಿ ಸರ್ಕಾರ ಸದಾ ಬದ್ಧ. ಜನರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.

ನಿವೇಶನ ಹಂಚಿಕೆ ಮಾಡಲು ಸ್ಥಳ ಗುರುತಿಸಲಾಗುತ್ತಿದೆ. ಸರ್ಕಾರಿ ಸ್ಥಳ ಸಿಗದಿದ್ದರೆ ಖಾಸಗಿಯಾಗಿ ಖರೀದಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ವಿದ್ಯಾವಂತ ಯುವಕರಿದ್ದಾರೆ. ಅಂತರ್ಜಲವಿದೆ. ಹಲವು ಬೆಳೆ ಬೆಳೆಯುತ್ತಿದ್ದಾರೆ. ಹೈನುಗಾರಿಕೆಯಿದೆ. ಇದನ್ನೆಲ್ಲ ಉಪಯೋಗಿಸಿಕೊಂಡು ಜನರು ಅಭಿವೃದ್ಧಿಯಾಗಬೇಕು. ಸರ್ಕಾರದ ವತಿಯಿಂದ ಪಂಚ ಗ್ಯಾರಂಟಿ ಯೋಜನೆಯಡಿ ಹಲವು ಸೌಲಭ್ಯ ನೀಡಲಾಗುತ್ತಿದೆ. ತಮ್ಮ ಮನೆ ಬಾಗಿಲಿಗೆ ಸರ್ಕಾರದ ಬಂದಿದೆ ಎಂದು ಹೇಳಿದರು.

ಅರ್ಜಿ ಪರಿಶೀಲಿಸಿ ಕಾನೂನು ಬದ್ಧವಾಗಿ ಪರಿಹರಿಸಲಾಗುವುದು. ಜಿಲ್ಲೆಯಲ್ಲಿ ಸಿಎಸ್‌ಆರ್ ಮಾದರಿಯಲ್ಲಿ ಹಲವು ಶಾಲೆಗಳ ನಿರ್ಮಾಣವಾಗಿದೆ. ಖಾಸಗಿಯವರ ನೆರವಿನಿಂದಲೂ ಈ ಶಾಲೆಗಳ ನಿರ್ಮಾಣಕ್ಕೆ ಸಹಕಾರವಿದೆ. ಇದೊಂದು ಐತಿಹಾಸಿಕ ಕೆಲಸವಾಗಿದೆ. 150-200 ಕೋಟಿ ರೂ.ಗಳ ವಿಶೇಷ ಅನುದಾನದಿಂದ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಕೊಡುಗೆ ಏನು ಎಂಬುದು ಈಗಾಗಲೇ ಜನರಿಗೆ ತಿಳಿದಿದೆ. ಜನರ ಸೇವೆ ಮಾಡಲು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನರ ಆರ್ಶೀವಾದ ಇರಲಿ, ಅವರ ಸೇವೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ. ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿಯನ್ನು ಪಡೆದುಕೊಳ್ಳಬೇಕು. ಜನರಿಂದ ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆಹರಿಸುವ ಯತ್ನ ಮಾಡಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರು ಮಾತನಾಡಿ, ಜನಸ್ಪಂದನ ಕಾರ್ಯಕ್ರಮ ವಿಶಿಷ್ಟ ಕಾರ್ಯಕ್ರಮವಾಗಿದೆ. ಅಪರೂಪದಲ್ಲಿ ಅಪರೂಪ ಕಾರ್ಯಕ್ರಮವಿದು. ಜನರಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳನ್ನು ಇಂತಹ ಜನಸ್ಪಂದನ ಕಾರ್ಯಕ್ರಮದಲ್ಲಿ ಪರಿಹರಿಸಲಾಗುವುದು. ಜನರ ಸಮಸ್ಯೆಗಳನ್ನು ಬಗೆಹರಿಸುವ ಹೊಣೆ ನಮ್ಮದು ಎಂದು ತಿಳಿಸಿದರು.

ಹೋಬಳಿ ಮಟ್ಟದಲ್ಲಿಯೇ ಜನರ ಸಮಸ್ಯೆಗಳನ್ನು ಸ್ವೀಕರಿಸಿ, ಬಗೆಹರಿಸಲಾಗುವುದು. ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಉಪಮುಖ್ಯಮಂತ್ರಿಗಳು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.

ಸರ್ಕಾರ ಅಸ್ವಿತ್ವಕ್ಕೆ ಬಂದ ಕೂಡಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಪಂಚ ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ನಿಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆ ಬಗೆಹರಿಸುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ಕೆ ಅಹವಾಲುಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ : ಹಾಲಿನ ದರ ಪರಿಷ್ಕರಣೆ ಬೆನ್ನಲ್ಲೇ ರೈತರಿಗೆ ಸಿಹಿ ಸುದ್ದಿ ನೀಡಿದ್ರು ಡಿಸಿಎಂ ಡಿಕೆ ಶಿವಕುಮಾರ್ - DK Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.