ETV Bharat / state

ರಜಾ ದಿನದಲ್ಲೂ ಅಧಿಕಾರಿಗಳು ಕಾರ್ಯನಿರ್ವಹಿಸಿ ರಸ್ತೆ ಗುಂಡಿ ಮುಚ್ಚಬೇಕು: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ - Road Work

author img

By ETV Bharat Karnataka Team

Published : Sep 15, 2024, 8:53 AM IST

Updated : Sep 15, 2024, 10:17 AM IST

ಯಲಹಂಕ ವಲಯದ ಸಹಕಾರ ನಗರದಲ್ಲಿ ಶನಿವಾರ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದ್ದ ಸ್ಥಳಗಳಿಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​ ಪರಿಶೀಲನೆ ನಡೆಸಿದರು.

Tushar Girinath inspected the road pothole sealing work
ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ತುಷಾರ್​ ಗಿರಿನಾಥ್​ (ETV Bharat)
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (ETV Bharat)

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದೆ. ಸರಕಾರಿ ರಜಾ ದಿನಗಳಲ್ಲೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ನಗರದ ಯಲಹಂಕ ವಲಯದ ಸಹಕಾರ ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಂದಿನಿಂದ 3 ದಿನಗಳ ಕಾಲ ಸರಕಾರಿ ರಜೆಯಿದ್ದು, ರಜಾ ದಿನಗಳಲ್ಲೂ ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಇಂಜಿನಿಯರ್​ಗಳು ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಿದ್ದಾರೆ" ಎಂದರು.

"ನಗರದಲ್ಲಿ ಮಳೆ ಬರುವುದು ನಿಂತಿದ್ದು, ಗುತ್ತಿಗೆದಾರರಿಂದ ಹೆಚ್ಚು ಹಾಟ್ ಮಿಕ್ಸ್ ಪಡೆದು ಹಗಲು- ರಾತ್ರಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುವುದು. ಬಾಕಿಯಿರುವ ರಸ್ತೆ ಗುಂಡಿಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲಾಗುವುದು" ಎಂದು ತಿಳಿಸಿದರು.

ವಲಯ ಆಯುಕ್ತ ಕರೀಗೌಡ ಮಾತನಾಡಿ, "ಯಲಹಂಕ ವಲಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆ ಹಾಗೂ ವಾರ್ಡ್ ರಸ್ತೆಗಳಲ್ಲಿನ ಗುಂಡಿಗಳನ್ನು ಗುರುತಿಸಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಪ್ರಸ್ತುತ ವರ್ಷದಲ್ಲಿ 1567 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಬಾಕಿಯಿರುವ ಗುಂಡಿಗಳನ್ನು ಕೂಡ ಶೀಘ್ರ ಮುಚ್ಚಲಾಗುವುದು" ಎಂದು ತಿಳಿಸಿದರು.

"ಯಲಹಂಕ ವಲಯ ವ್ಯಾಪ್ತಿಯಲ್ಲಿ 865 ಕಿ.ಮೀ. ಉದ್ದದ 5433 ರಸ್ತೆಗಳನ್ನು ಡಾಂಬರೀಕರಣ ನಡೆಸಲು ಯೋಜನೆ ರೂಪಿಸಿದ್ದು, ಶೀಘ್ರ ಡಾಂಬರೀಕರಣ ಕೆಲಸ ಕೈಗೆತ್ತಿಕೊಳ್ಳಲಾಗುತ್ತದೆ. 110 ಹಳ್ಳಿಗಳ ಪೈಕಿ ಯಲಹಂಕ ವಲಯದಲ್ಲಿ 14 ಹಳ್ಳಿಗಳು ಬರಲಿದ್ದು, 89 ಕಿ.ಮೀ. ಉದ್ದದ 499 ರಸ್ತೆಗಳನ್ನು ಅಭಿವೃದ್ಧಿ ಮಾಡಬೇಕಿದೆ" ಎಂದು ಮಾಹಿತಿ ನೀಡಿದರು.

ಈ ವೇಳೆ ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಮುಖ್ಯ ಅಭಿಯಂತರ ರಂಗನಾಥ್, ಕಾರ್ಯಪಾಲಕ ಅಭಿಯಂತರ ಪ್ರದೀಪ್, ನಾಗಪ್ಪ ಕಮತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ತೆಗ್ಗುಗುಂಡಿಗಳು: ಕಾರ್ಪೊರೇಷನ್​ ವಿರುದ್ಧ ಜನರ ಹಿಡಿಶಾಪ - Potholes in Roads

Last Updated : Sep 15, 2024, 10:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.