ETV Bharat / state

ಒಂದು ದಿನ ಇ - ಸ್ವತ್ತು ತಂತ್ರಾಂಶ ಸ್ಥಗಿತ: ಸಾರ್ವಜನಿಕರ ಸಹಕಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ - E SWATHU software shutdown

author img

By ETV Bharat Karnataka Team

Published : Jul 29, 2024, 10:17 PM IST

''ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ಸ್ಥಗಿತವಾಗುತ್ತದೆ. ಸಾರ್ವಜನಿಕರ ಸಹಕರಿಸಬೇಕು'' ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Priyank Kharge  E SWATHU software shutdown  E SWATHU software  Bengaluru
ಒಂದು ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ: ಸಾರ್ವಜನಿಕರ ಸಹಕಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ (ETV Bharat)

ಬೆಂಗಳೂರು: ''ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಮತ್ತೆ ಒಂದು ದಿನ ನಾಳೆ (ಜು. 30 ರಂದು) ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ'' ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

''ಸಾರ್ವಜನಿಕರ ಸಹಕಾರ ಕೋರಿರುವ ಸಚಿವರು ಸಾರ್ವಜನಿಕರ ಅನಾನುಕೂಲತೆ ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ - ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2 ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು'' ಎಂದು ಹೇಳಿದ್ದಾರೆ.

''ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ - ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಅಭಿವೃದ್ದಿಪಡಿಸಲಾಗುತ್ತಿದ್ದು, ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ'' ಎಂದು ತಿಳಿಸಿದ ಸಚಿವರು, ''ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ'' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಆರೋಪ: ತನಿಖೆಗೆ ಹೈಕೋರ್ಟ್ ತಡೆ - High Court Stays Investigation

ETV Bharat Logo

Copyright © 2024 Ushodaya Enterprises Pvt. Ltd., All Rights Reserved.