ETV Bharat / state

ಕೂಲಿಗೆ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ : ಓರ್ವ ಸಾವು, ಮತ್ತೋರ್ವ ಬಚಾವ್ - WILD ELEPHANT ATTACK

ಕೂಲಿಗೆ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಬಚಾವ್​ ಆಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

one-dead-after-wild-elephant-attack
ಕಾಡಾನೆ ದಾಳಿಯಿಂದ ಮೃತಪಟ್ಟವರು (ETV Bharat)
author img

By ETV Bharat Karnataka Team

Published : Jan 21, 2025, 12:31 PM IST

ಚಾಮರಾಜನಗರ : ಹನೂರು‌ ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದಿಂದ ಅರಣ್ಯದ ರಸ್ತೆಯಲ್ಲಿ ಒಡೆಯರ ಪಾಳ್ಯಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ, ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಕೊಪ್ಪ ಗ್ರಾಮದ ನಿವಾಸಿ ಮುನಿಯಪ್ಪ (40) ಮೃತ ದುರ್ದೈವಿ. ಮುನಿಯಪ್ಪ ಹಾಗೂ ಈತನ ಸ್ನೇಹಿತ ಕುಳ್ಳುಚ್ಚ ಒಡೆಯರಪಾಳ್ಯ ಗ್ರಾಮದ ಜಮೀನುವೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಾರ್ಯನಿಮಿತ್ತ ಗ್ರಾಮಕ್ಕೆ ಬಂದು ಕೆಲಸ ಮುಗಿದ ನಂತರ ವಾಪಸ್ ಕೆಲಸಕ್ಕೆ ಒಡೆಯರಪಾಳ್ಯ ಗ್ರಾಮಕ್ಕೆ ತೆರಳುತ್ತಿದ್ದಾಗ ಅರಣ್ಯದಲ್ಲಿ ಕಾಡಾನೆ ಇಬ್ಬರ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ತೀವ್ರ ಗಾಯಗೊಂಡಿದ್ದ ಮುನಿಯಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಈತನ ಸ್ನೇಹಿತ ಕುಳ್ಳುಚ್ಚ ಪ್ರಜ್ಞೆ ಇಲ್ಲದೆ ಅರಣ್ಯದಲ್ಲಿಯೇ ಬಿದ್ದಿದ್ದರು.

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಇದನ್ನು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಗಾಯಗೊಂಡು ಪ್ರಜ್ಞೆ ಇಲ್ಲದೆ ಬಿದ್ದಿದ್ದ ಕುಳ್ಳುಚ್ಚನನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಕುಳ್ಳುಚ್ಚ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

''ಅರಣ್ಯದ ರಸ್ತೆಯಲ್ಲಿ ಕೊಪ್ಪ ಗ್ರಾಮದಿಂದ ಒಡೆಯರಪಾಳ್ಯ ಗ್ರಾಮಕ್ಕೆ ತೆರಳುತ್ತಿದ್ದ ಮುನಿಯಪ್ಪ ಎಂಬುವವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈತನ ಜೊತೆಗಿದ್ದ ಕುಳ್ಳುಚ್ಚನನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ'' ಎಂದು ವಲಯ ಅರಣ್ಯಾಧಿಕಾರಿ ಪುಟ್ಟರಾಜು ತಿಳಿಸಿದ್ದಾರೆ.

ಇದನ್ನೂ ಓದಿ : ಕೇರಳ: ವ್ಯಕ್ತಿಯನ್ನು ಸೊಂಡಿಲಲ್ಲಿ ಎಳೆದು ಬಿಸಾಡಿದ ಆನೆ, 17 ಮಂದಿಗೆ ಗಾಯ - ELEPHANT ATTACK

ETV Bharat Logo

Copyright © 2025 Ushodaya Enterprises Pvt. Ltd., All Rights Reserved.