ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ 6ನೇ ಪ್ರಾದೇಶಿಕ ಕೇಂದ್ರ ಕಚೇರಿ ತೆರೆದಿದೆ. ಮಾಗಡಿ ಮುಖ್ಯರಸ್ತೆಯ ಸುಂಕದಕಟ್ಟೆಯಲ್ಲಿರುವ ಶ್ರೀ ಲಕ್ಷ್ಮಿ ಕಾಲೇಜ್ ಆಫ್ ಸೈನ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಆವರಣದಲ್ಲಿ ಕಚೇರಿ ಪ್ರಾರಂಭಿಸಲಾಗಿದೆ.
ಜುಲೈ 22ರಿಂದಲೇ ವಿವಿಯ ವಿವಿಧ ಕೋರ್ಸ್ಗಳಿಗೆ (ಜುಲೈ ಆವೃತ್ತಿ) ಪ್ರವೇಶಾತಿ ಕಾರ್ಯ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ವಿವಿಧ ಶಿಕ್ಷಣ ಕೋರ್ಸ್ಗಳಿಗೆ ನೂತನ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಪರಿಶೀಲಿಸಿಕೊಂಡು, ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8453458238, 9844556968 8884772421. Email:ksoubengalururc06@gmail.com ಸಂಪರ್ಕಿಸಬಹುದು.