ETV Bharat / state

ನನ್ನ ಬಡತನವನ್ನು ಇಷ್ಟು ಹೀಯಾಳಿಸಿ ಬಿಟ್ಟಿರಲ್ಲವೇ?: ಎಂಬಿ ಪಾಟೀಲ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ - Chalavadi Narayanaswamy

ಕೆಐಡಿಬಿ ಭೂಮಿಯನ್ನು ಪಡೆದಿರುವುದಾಗಿ ಛಲವಾದಿ ನಾರಾಯಣಸ್ವಾಮಿ ಹಾಗೂ ಮುರುಗೇಶ್​ ನಿರಾಣಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಸಚಿವ ಎಂ.ಬಿ.ಪಾಟೀಲ್​ ಆರೋಪ ಮಾಡಿದ್ದು, ಇದಕ್ಕೆ ಇದೀಗ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.

Opposition leader Chalavadi Narayanaswamy
ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (ETV Bharat)
author img

By ETV Bharat Karnataka Team

Published : Aug 30, 2024, 7:36 PM IST

ಬೆಂಗಳೂರು: "ನೀವು ನನ್ನ ಬಡತನವನ್ನು ಇಷ್ಟು ಹೀಯಾಳಿಸಿ ಬಿಟ್ಟಿರಲ್ಲವೇ? ಲಜ್ಜೆಗೆಟ್ಟ ವ್ಯಕ್ತಿ ಎಂದಿರಲ್ಲವೇ? ನಾನು ಯಾವುದರಲ್ಲಿ ಲಜ್ಜೆಗೆಟ್ಟವ, ವಿರೋಧ ಪಕ್ಷದ ನಾಯಕನಾಗಿ ನನ್ನ ಸ್ಥಾನದ ಗೌರವ ಉಳಿಸುವ ಕೆಲಸ ಮಾಡುತ್ತೇನೆ. ನೀವು ನಿಮ್ಮ ಸಚಿವ ಸ್ಥಾನಕ್ಕೆ ಅನುಗುಣವಾಗಿ ಮಾತನಾಡಬೇಕಿತ್ತು" ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಂ.ಬಿ.ಪಾಟೀಲರಿಗೆ ತಿರುಗೇಟು ನೀಡಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಪರಿಶಿಷ್ಟ ಜಾತಿಯವ; ನನಗ್ಯಾರೂ ಕೇಳೋರಿಲ್ಲವೆಂದು ಲಜ್ಜೆಗೆಟ್ಟವ ಎಂದಿದ್ದೀರಲ್ಲವೇ? ನೀವು ಹರಿಶ್ಚಂದ್ರರೇ? ಈ ಪ್ರಪಂಚದಲ್ಲಿ ಯಾರೂ ಹರಿಶ್ಚಂದ್ರರಲ್ಲ. 302, ಡೆಫೊಡಿಲ್ ಅಪಾರ್ಟ್‍ಮೆಂಟ್ ಯಾರದ್ದು? ನಿಮ್ಮದೇ ಅಲ್ಲವೇ? ನಿಮ್ಮದಕ್ಕೇ ನೀವು 2 ಸೈಟ್ ಬರೆದುಕೊಂಡಿದ್ದೀರಿ. ಇನ್ನು ಮೂರು ವಿಜಾಪುರದಲ್ಲಿ ಬರೆದುಕೊಂಡಿದ್ದೀರಿ. ಸೋಲಾಪುರ ರಸ್ತೆ, ಕೆಹೆಚ್‍ಬಿ ಕಾಲೋನಿಯಲ್ಲಿವೆ. ಲೂಟಿ ಮಾಡುತ್ತಿರುವುದು ನಾನಾ ನೀವಾ?" ಎಂದು ಪ್ರಶ್ನಿಸಿದರು.

ದುಡ್ಡು ಪೂರ್ತಿ ಕಟ್ಟಿದ್ದೇನೆ: "ನಾನು ಮಾಡಿದ ಲೋಪ ಏನು? ಅಪರಾಧವಾದರೂ ಏನು? ಹೇಳಿ ನೋಡೋಣ. ಸೇಲ್ ಡೀಡ್‍ಗೆ ಲೆಟರ್ ಬರೆದಿದ್ದಾರೆ ಎಂದಿದ್ದೀರಿ. ಸೇಲ್ ಡೀಡ್‍ಗೆ ಅಲ್ಲದೆ ಇನ್ನೇನಕ್ಕೆ ಲೆಟರ್ ಕೊಡಬೇಕು. ಅದು ನನ್ನ ನಿವೇಶನ. ದುಡ್ಡು ಪೂರ್ತಿ ಕಟ್ಟಿದ್ದೇನೆ. ಶೆಡ್ ಗಿರಾಕಿ ಎಂದಿದ್ದೀರಲ್ಲವೇ? ಶೆಡ್ ಕಟ್ಟಿದೀನಿ. ನ್ಯಾಯವಾಗಿಯೇ ಕಟ್ಟಿದ್ದೇನೆ. ಸಾಕಾಗದಿದ್ದರೆ ನೋಟಿಸ್ ಕೊಡಿ. ಇದುವರೆಗೆ ಸಾಲಗಾರನಲ್ಲದ ನಾನು ಸಾಲ ಮಾಡಿಯಾದರೂ ನಿಮಗೆ ತೃಪ್ತಿ ಆಗುವಂತೆ ಶೆಡ್ ಕಟ್ಟಿಸುವೆ. ನನ್ನ ದುಡಿಮೆಯಲ್ಲಿ ಏನು ಸಾಧ್ಯವೋ ಅದನ್ನು ಮಾಡಿದ್ದೇನೆ. ಕಾನೂನು ಬಿಟ್ಟು ಆಚೆ ಈಚೆ ಹೋಗುವವನಲ್ಲ. ನಾನೇನಾದರೂ ನಿಮ್ಮ ಬಗ್ಗೆ ವಿಷಯ ಹೊರಗಡೆ ತಂದರೆ ನಿಮಗೆ ನಿದ್ದೆ ಬರೋದಿಲ್ಲ" ಎಂದು ಸವಾಲು ಹಾಕಿದರು.

"ಖರ್ಗೆ ಕುಟುಂಬವನ್ನು ರಕ್ಷಣೆ ಮಾಡಿದರೆ ನನಗೇನೂ ತೊಂದರೆ ಇಲ್ಲ. ಅಲ್ಲಿ ಆಗಿರುವುದೇನು ಎಂದು ನನಗೆ ಗೊತ್ತಿದೆ. ಈಗಾಗಲೇ ಅವರು ನಿದ್ದೆ ಬಿಟ್ಟಿದ್ದಾರೆ. ಅವರು ನಿಮ್ಮನ್ನು ಎತ್ತಿಕಟ್ಟಿ ನನ್ನ ಮೇಲೆ ಏನೋ ಮಾಡಿಸಲು ಹೊರಟಿದ್ದಾರೆ. ನೀವೇನೂ ಮಾಡಲಾಗುವುದಿಲ್ಲ" ಎಂದು ಸವಾಲೆಸೆದರು.

"ನೀವಿನ್ನು ಒಂದು ವರ್ಷ ಹುಡುಕಿದರೂ ನನ್ನ ಒಂದೇ ಒಂದು ತಪ್ಪನ್ನು ತರಲಾಗದು. ಈ ಶೆಡ್ ಖರ್ಗೆ, ದೇಶಪಾಂಡೆಯವರಿಗೂ ಗೊತ್ತಿತ್ತು. ನಾನೇ ಹೇಳಿಕೊಂಡಿದ್ದೆ. ಕಾಂಗ್ರೆಸ್ಸಿನಲ್ಲೇ ಇರುವ ನನಗ್ಯಾಕೆ ಅನ್ಯಾಯ ಮಾಡುತ್ತೀರಿ ಎಂದಿದ್ದೆ. ಕ್ಯಾನ್ಸಲ್ ಆದ ಕುರಿತು ದೇಶಪಾಂಡೆಯವರನ್ನು ಕೇಳಿದಾಗ ಕೇರ್ ಮಾಡಿಲ್ಲ. ಕಾಂಗ್ರೆಸ್ಸಿಗರಿಗೆ ನನ್ನ ಬಗ್ಗೆ ಮುಂದೆ ಪ್ರೀತಿ, ಹಿಂದಿನಿಂದ ದ್ವೇಷ ಇದ್ದುದು ಈಗ ಗೊತ್ತಾಗಿದೆ" ಎಂದರು.

ಸೈಟ್ ಪುಕ್ಕಟೆ ಕೊಟ್ಟದ್ದಲ್ಲ: "ಸಚಿವ ಎಂ.ಬಿ. ಪಾಟೀಲ್ ಅವರು 2 ಗಂಟೆಗಳ ಕಾಲ ಪತ್ರಿಕಾಗೋಷ್ಠಿ ನಡೆಸಿ ನಾನು ಏನೋ ಮಾಡಬಾರದ ತಪ್ಪು ಮಾಡಿದ ರೀತಿಯಲ್ಲಿ ಮಾತನಾಡಿದ್ದಾರೆ. ಕೆಐಎಡಿಬಿ ಸೈಟ್ ಮಾಡುವುದು ಯಾಕಾಗಿ? ಅದರಲ್ಲಿ ನಾನು 2006-07ರಲ್ಲಿ ಸೈಟ್ ಪಡೆದುದು ನಿಜ. ಅದೇನೂ ಪುಕ್ಕಟೆ ಕೊಟ್ಟಿಲ್ಲ" ಎಂದು ಸ್ಪಷ್ಟಪಡಿಸಿದರು.

"ಎಲ್ಲರಂತೆ ನಾನು ವೇರ್‍ಹೌಸ್ ಇನ್ನೇನೋ ಉದ್ದೇಶದಿಂದ ನಿವೇಶನ ಪಡೆದಿದ್ದೇನೆ. ನಾವು ಬಡತನದಲ್ಲಿ ಬಂದವರು. ನಮ್ಮಲ್ಲಿ ಹಣ ಇರಲಿಲ್ಲ. ಅದಾದ ನಂತರ ಕಂತು ಕಟ್ಟಲು ಕಷ್ಟವಾದುದೂ ನಿಜ. ನಿಮ್ಮಲ್ಲಿ ನಾನು ಹಣ ಕೊಡಿ; ವಿನಾಯಿತಿ ಕೊಡಿ ಎಂದು ಕೇಳಿದ್ದೇನಾ? ಎಂದು ಪ್ರಶ್ನಿಸಿದರು.

"ಕಾಂಗ್ರೆಸ್ ಕಾಲದಲ್ಲಿ ನನಗೆ ಅನ್ಯಾಯ ಆಗಿದೆ. ಆಗ ಅದನ್ನು ಕ್ಯಾನ್ಸಲ್ ಮಾಡಿದರು. ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಜನರಲ್ ಸೆಕ್ರೆಟರಿ ಆಗಿದ್ದೆ. ಆದರೂ ನೀವು ನಿವೇಶನ ರದ್ದು ಮಾಡಿದ್ದೀರಿ. ಯಾಕೆ ಮಾಡಿದ್ದೀರಿ? ಅದಾದ ಬಳಿಕ ನಾನು ಕೋರ್ಟ್​ಗೆ ಹೋದೆ. ಇವತ್ತು ಶೆಡ್ ಕಟ್ಟಿದ್ದೇನೆ" ಎಂದು ವಿವರಿಸಿದರು.

ಇದನ್ನೂ ಓದಿ: ನಾನು ಶೆಡ್​ ಗಿರಾಕಿಯೇ, ದೊಡ್ ಗಿರಾಕಿ ಅಲ್ಲ: ಎಂ ಬಿ ಪಾಟೀಲ್​ಗೆ ಛಲವಾದಿ ತಿರುಗೇಟು - Chalavadi Narayana Swamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.