ETV Bharat / state

ಸಿಎಂ, ಡಿಸಿಎಂ ತಿಗಣೆಯಂತೆ ಬಡವರ ರಕ್ತ ಹೀರುತ್ತಿದ್ದಾರೆ: ಆರ್.ಅಶೋಕ್ ವಾಗ್ದಾಳಿ - R Ashok

ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಸರ್ಕಾರ ಹಾಲಿನ ದರದ ಏರಿಸಿರುವುದನ್ನು ಟೀಕಿಸಿದ್ದಾರೆ.

author img

By ETV Bharat Karnataka Team

Published : Jun 25, 2024, 3:29 PM IST

opposition-leader-r-ashok
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (ETV Bharat)
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ (ETV Bharat)

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಡವರ ರಕ್ತವನ್ನು ತಿಗಣೆಯ ರೀತಿಯಲ್ಲಿ ಹೀರುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದರು.

ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಸೋಲಿನ ಕೋಪಕ್ಕೆ ರಾಜ್ಯದಲ್ಲಿ ಬೆಲೆ ಏರಿಕೆ ಪರ್ವ ಶುರುವಾಗಿದೆ.‌ ಸಿಮೆಂಟ್, ಕಬ್ಬಿಣ ಸೇರಿ ಎಲ್ಲ ವಸ್ತುಗಳ ಬೆಲೆ ಏರಿಸಲಾಗಿದೆ. ಇದೀಗ ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಿಸಿದ್ದಾರೆ‌. ಕಳೆದ ವರ್ಷ ಮೂರು ರೂಪಾಯಿ ಜಾಸ್ತಿ ಮಾಡಿದ್ದರು ಎಂದರು.

ಈ ಸರ್ಕಾರ ಬಹಳ ದಿನ ಉಳಿಯಲ್ಲ. ನಾಲ್ಕು ರಾಜ್ಯಗಳ ಚುನಾವಣೆಗೆ ಕಪ್ಪ ಕಾಣಿಕೆ ಕೊಡಲು ಬೆಲೆ ಏರಿಕೆ ಮಾಡಿದ್ದಾರೆ. ಈ ರೀತಿ ಲೂಟಿ ಹೊಡೆಯುವ ಲೂಟಿಕೋರ ತಂಡಕ್ಕೆ ಮುಂಬರುವ ಜಿ.ಪಂ, ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ‌ ಎಂದು ಹೇಳಿದರು.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ವಿಧಾನಸೌಧದಿಂದ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ಸಿಎಂ ಮನೆಯಿಂದ ಹೊರಬರದಂತೆ ದಿಗ್ಬಂಧನ ಹಾಕುತ್ತೇವೆ. ಜುಲೈ 3 ಅಥವಾ 4ರಂದು ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ವೈಯಕ್ತಿಕ ವಿಚಾರ ಎಂದರು. ಬಳಿಕ ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಟೀಕಾಸಮರ ಮುಂದುವರೆಸಿ, ಎಸ್ಟಿಗಳಿಗೆ ಮೀಸಲಿಟ್ಟ 187 ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ. ಈ ಬಗ್ಗೆ ಏನೂ ಹೇಳುತ್ತೀರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ, ಹೋಗುವಾಗ ವಿಧಾನಸೌಧ ಅಡ ಇಟ್ಟು ಹೋಗಬಹುದು: ಆರ್.ಅಶೋಕ್ - R ASHOK

ETV Bharat Logo

Copyright © 2024 Ushodaya Enterprises Pvt. Ltd., All Rights Reserved.