ETV Bharat / state

ರಾಜ್ಯದಲ್ಲಿ ಹಿಂದೂಗಳ ಮೇಲೆ ಮಿತಿಮೀರಿದ ಹಲ್ಲೆ, ಭಯೋತ್ಪಾದನಾ ಚಟುವಟಿಕೆ: ಆರ್.ಅಶೋಕ್ ಆರೋಪ - Lok Sabha Election 2024 - LOK SABHA ELECTION 2024

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಆದರೆ ಡಿಸಿಎಂ ಸಹೋದರ ದೇಶ ಇಬ್ಭಾಗ ಮಾಡಬೇಕು ಎನ್ನುತ್ತಾರೆ ಎಂದು ಪ್ರತಿ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದರು.

R Ashok addressed the press conference.
ಪ್ರತಿ ಪಕ್ಷದ ನಾಯಕ ಆರ್ ಅಶೋಕ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
author img

By ETV Bharat Karnataka Team

Published : Apr 18, 2024, 7:30 PM IST

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

ಜೈ ಶ್ರೀರಾಮ್ ಕೂಗಿದ್ದಕ್ಕೆ ಹಲ್ಲೆ: ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ್ದನ್ನು ಆಕ್ಷೇಪಿಸಿ ಕೆಲ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ ಬೇರೆ ಘೋಷಣೆ ಕೂಗಬೇಕು ಎಂದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ನಾವು ಹಿಂದೂಸ್ತಾನದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಸಂದೇಹ ಕಾಡುವಂತಾಗಿದೆ. ಸಿದ್ದರಾಮಯ್ಯನವರು ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಕರ್ನಾಟಕವನ್ನು ಧಾರೆ ಎರೆದು ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದರು.

''ಶಾಸಕ ಲಕ್ಷ್ಮಣ ಸವದಿಯವರು ಸಾರ್ವಜನಿಕ ಸಭೆಯಲ್ಲಿ ಕೈಮುಗಿದು ವಿನಮ್ರವಾಗಿ ‘ನಾನು ಭಾರತ್ ಮಾತಾ ಕೀ ಜೈ ಅನ್ನಬಹುದೇ ಖರ್ಗೆ ಸಾಹೇಬರೇ’ ಎಂದು ಕೇಳಿಕೊಂಡಿದ್ದರು. ಖರ್ಗೆಯವರು ಅದಕ್ಕೆ ಅನುಮತಿ ಕೊಟ್ಟಿದ್ದಾರೆ. ಡಿ.ಕೆ.ಸುರೇಶ್ ಅವರು ಶ್ರೀರಾಮ ದೇವರಲ್ಲ, ನಾವು ಮನೆಯಲ್ಲಿ ಅವರ ಫೋಟೊ ಇಟ್ಟಿಲ್ಲ ಎನ್ನುತ್ತಾರೆ. ಡಿ ಕೆ ಸುರೇಶ್ ಅವರೇ, ನೀವು ಕಲ್ಲುಬಂಡೆ ವ್ಯಾಪಾರ ಮಾಡುವವರಲ್ಲವೇ? ಕಲ್ಲು ಬಂಡೆ ಇಟ್ಟುಕೊಳ್ಳಿ. ರಾಮನ ಫೋಟೊ ಯಾಕೆ ಇಡಬೇಕು?. ಇಡೀ ದೇಶದಲ್ಲಿ ರಾಮಭಕ್ತ ಆಂಜನೇಯನ ದೇವಸ್ಥಾನಗಳಿವೆ. ಇದು ನಿಮಗೆ ಕಣ್ಣಿಗೆ ಕಾಣಿಸುವುದಿಲ್ಲವೇ'' ಎಂದು ಡಿ ಕೆ ಸುರೇಶ್ ಅವರನ್ನು ಪ್ರಶ್ನಿಸಿದರು.

''ಹಿಂದೂಗಳನ್ನು ಈ ರೀತಿ ಬೈದು ಬೈದು ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಜಾಸ್ತಿಯಾಗಿವೆ. ಶ್ರೀರಾಮ ಮಂದಿರಕ್ಕೆ ಹೋಗುವ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗುತ್ತಿದೆ. ಮಂಡ್ಯದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಕಿತ್ತು ಹಾಕಿದ್ದೀರಿ. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಹಿಂದೂಗಳು ಭಯದಿಂದ ಬದುಕುವಂಥ ವಾತಾವರಣವನ್ನು ಸಿದ್ದರಾಮಯ್ಯ ಆ್ಯಂಡ್ ಗ್ಯಾಂಗ್​ನವರು ಮಾಡುತ್ತಿದ್ದಾರೆ'' ಎಂದು ಆರ್​ ಅಶೋಕ್​ ದೂರಿದರು.

ಹನುಮಾನ್ ಚಾಲೀಸ್​: ''ಚಿಕ್ಕಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದನ್ನು ವಿರೋಧಿಸಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಮಾಡಿ ಹೊಡೆದು ದರೋಡೆ ಮಾಡಿದ್ದಾರೆ. ಕಾಂಗ್ರೆಸ್ ಸರಕಾರ ಪರೋಕ್ಷವಾಗಿ ಗೂಂಡಾಗಿರಿಗೆ ಬೆಂಬಲ ಕೊಡುತ್ತಿದೆ. ಮತ ಹಾಕಿದರೆ ಅವರನ್ನು ರಕ್ಷಿಸುವ ಸಂದೇಶವನ್ನು ಮೂಲಭೂತವಾದಿಗಳಿಗೆ ಕಾಂಗ್ರೆಸ್ ಪಕ್ಷ ನೀಡಿದೆ'' ಎಂದು ಪ್ರತಿಪಕ್ಷ ನಾಯಕ ಆರೋಪಿಸಿದರು.

ಬಹುಸಂಖ್ಯಾತ ಹಿಂದೂಗಳನ್ನು ಈ ಸರಕಾರ ಕಡೆಗಣಿಸುತ್ತಿದೆ. ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸಿದ್ದರಾಮಯ್ಯನವರು ಗೂಂಡಾ ಕಾಯ್ದೆ, ದೇಶದ್ರೋಹದ ಕೇಸು ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ಅರೆಸ್ಟ್ ಮಾಡಿದ್ದೀರಿ. ಬಿರಿಯಾನಿ ಕೊಟ್ಟು ಕಳಿಸುತ್ತೀರಿ ಎಂದು ಅಶೋಕ್​ ಅವರು ಟೀಕಿಸಿದರು.

ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ: ''ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಉಪ ಮುಖ್ಯಮಂತ್ರಿಯವರ ಸಹೋದರ ದೇಶ ಇಬ್ಭಾಗ ಮಾಡಬೇಕು ಎನ್ನುತ್ತಾರೆ. ಈ ಥರದ ಹೇಳಿಕೆಗಳಿಂದ ಅಲ್ಪಸಂಖ್ಯಾತ ಮೂಲಭೂತವಾದಿಗಳಿಗೆ ಹುರುಪು ಬಂದಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನವರು ಫಿಟ್ಟಿಂಗ್ ಮಾಸ್ಟರ್​ಗಳು. ರಾಮೇಶ್ವರಂ ಕೆಫೆ ಬಾಂಬ್ ಹೊಗೆ ಏಳುತ್ತಿರುವಾಗಲೇ ಅದು ಹೋಟೆಲ್ ರೈವಲ್ರಿ ಎಂದಿದ್ದರು'' ಎಂದು ಅಶೋಕ್​ ಕಿಡಿಕಾರಿದರು.

ಇಂಥ ಘಟನೆಗಳಿಗೆ ಕಾರಣವಾದ ಈ ಸರಕಾರ ಬಹಳ ದಿನ ಉಳಿಯುವುದಿಲ್ಲ. ಇದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ಸರಕಾರ ಎಂದು ಬ್ರಾಂಡ್ ಆಗಿದೆ. ಇದು ಜನಕ್ಕೆ ಗೊತ್ತಾಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರು ಇವರಿಗೆ ಪಾಠ ಕಲಿಸುತ್ತಾರೆ ಎಂದರು. ನಿಮ್ಮ ಏಕೈಕ ಎಂಪಿ, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಂಸತ್ತಿನಲ್ಲಿ ಏನು ಮಾಡಿದ್ದಾರೆ? ಕರ್ನಾಟಕದ ಪರವಾಗಿ ಬಾಯಿಬಿಟ್ಟೇ ಇಲ್ಲ; ನೀವೇನು ಮಾಡಿದ್ದೀರಿ ಎಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದರು.

''ಹಿಂದೂಗಳ ರಕ್ಷಣೆ ಬಗ್ಗೆ ಆತಂಕ ಉಂಟಾಗಿದೆ. ದರಿದ್ರ ಸರಕಾರ ಇದು. ನಯಾಪೈಸೆ ಹಣ ಇಲ್ಲ. ಮೇ, ಜೂನ್ ನಂತರ ಸಂಬಳ ಕೊಡಲು ದುಡ್ಡಿಲ್ಲ ಎಂಬ ಸ್ಥಿತಿ ಬಂದಿದೆ. ಪಿಂಚಣಿ, ಸ್ಕಾಲರ್‍ಶಿಪ್ ಕೊಟ್ಟಿಲ್ಲ. ಇದರ ಜೊತೆಗೆ ಕರ್ನಾಟಕದ ಶಾಂತಿಯ ತೋಟವನ್ನು ಮತಕ್ಕಾಗಿ ಹಾಳು ಮಾಡುತ್ತಿದ್ದಾರೆ ಎಂದು ಅಶೋಕ್​ ವಾಗ್ದಾಳಿ ನಡೆಸಿದರು. ಇದರ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ'' ಎಂದು ಎಚ್ಚರಿಸಿದರು. ಈ ವೇಳೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಎಂ. ಜಿ. ಮಹೇಶ್ ಅವರು ಹಾಜರಿದ್ದರು.

ಇದನ್ನೂಓದಿ:ಮೋದಿ ಗ್ಯಾರಂಟಿ ಎನ್ನುವುದು ಸುಳ್ಳಿನ‌ ಗ್ಯಾರಂಟಿ ಅಷ್ಟೇ: ಸಚಿವ ಹೆಚ್ ಸಿ ಮಹದೇವಪ್ಪ - Lok Sabha Election 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.