ETV Bharat / state

ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಬರಲು ಸಿದ್ದರಾಮಯ್ಯ ಕಾರಣ: ಆರ್. ಅಶೋಕ್ - R Ashok

ಡಿ.ಕೆ.ಶಿವಕುಮಾರ್ ಸಹೋದರನನ್ನು ಮುಗಿಸಲು ಸಿಎಂ ಸಿದ್ದರಾಮಯ್ಯ ತಂತ್ರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್​.ಅಶೋಕ್ ಆರೋಪಿಸಿದ್ದಾರೆ.

ಬೆ. ಗ್ರಾಮಾಂತರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಬರಲು ಸಿದ್ದರಾಮಯ್ಯ ಕಾರಣ!: ಆರ್. ಅಶೋಕ್

author img

By ETV Bharat Karnataka Team

Published : Apr 27, 2024, 6:13 PM IST

ಬೆಂಗಳೂರು: ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ‌ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ‌‌. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈಚಳಕ ತೋರಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ‌. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು. ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಪ್ರವಾಹ ಪರಿಹಾರ ನೀಡಿತ್ತು. ಈಗಲೂ ಸರ್ಕಾರ ತನ್ನ ಕಡೆಯಿಂದ ಡಬಲ್ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಪರಿಹಾರದ ಬಗ್ಗೆ ಸಾಮಾನ್ಯ ಪ್ರಜ್ಞೆ ಹಾಗೂ ತಿಳುವಳಿಕೆ ಇಲ್ಲ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿತ್ತು ಎಂದು ತಿಳಿಸಲಿ‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವೇ ಇತ್ತು‌‌. ಆಗಿನ ಪರಿಹಾರಕ್ಕೂ ಈಗ ನೀಡಿರುವ ಪರಿಹಾರಕ್ಕೂ ಜನರೇ ಹೋಲಿಕೆ ಮಾಡಲಿ‌‌. ವಿದ್ಯುತ್ ದರ, ಮಾರ್ಗಸೂಚಿ ದರ, ದತ್ತು ಪಡೆಯಲು ದರ ಹೀಗೆ ಎಲ್ಲದರಲ್ಲೂ ಸರ್ಕಾರ ದರ ಏರಿಕೆ ಮಾಡಿದೆ ಎಂದು ದೂರಿದರು.

ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಬರಲು ಸಿಎಂ ಸಿದ್ದರಾಮಯ್ಯನವರೇ ಕಾರಣ. ಡಿ.ಕೆ.ಶಿವಕುಮಾರ್ ಸೋದರರನ್ನು ಮುಗಿಸಲು ಸಿಎಂ ಸಿದ್ದರಾಮಯ್ಯ ತಂತ್ರ ಮಾಡಿದ್ದಾರೆ. ಕಾಂಗ್ರೆಸ್ ನವರೇ ಅವರ ಕಾಲ ಮೇಲೆ ಚಪ್ಪಡಿ ಎಳೆದುಕೊಳ್ಳುತ್ತಾರೆ. ಸಿದ್ದರಾಮಯ್ಯನವರಿಗೆ ವಿರೋಧಿಗಳನ್ನು ಹೇಗೆ ಮುಗಿಸಬೇಕೆಂದು ಗೊತ್ತಿದೆ. ಅದಕ್ಕೆ ಉದಾಹರಣೆಯಾಗಿ ಡಾ.ಜಿ.ಪರಮೇಶ್ವರ್ ಇದ್ದಾರೆ ಎಂದು ಹೇಳಿದರು.

ಸಹೋದರ ಸೋತಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕನಸು ಬಿದ್ದಿದ್ದು, ಅದಕ್ಕಾಗಿ ತಮಿಳುನಾಡು, ಉಡುಪಿಗೆ ಹೋಗಿ ಪೂಜೆ ಮಾಡಿದ್ದಾರೆ. ಡಿ.ಕೆ. ಸುರೇಶ್ ಅವರನ್ನು ಹೇಗೆ ಎಂಎಲ್​ಸಿ ಮಾಡಬೇಕೆಂದು ಅವರು ಚಿಂತಿಸಿದ್ದಾರೆ. ಅವರಿಗೆ ಸೋಲಿನ ಭೀತಿ ಉಂಟಾಗಿರುವುದರಿಂದಲೇ ಪ್ರಚಾರಕ್ಕೆ ಪದೇ ಪದೆ ಬೆಂಗಳೂರು ಗ್ರಾಮಾಂತರಕ್ಕೆ ಹೋಗಿದ್ದಾರೆ. ಬಿಜೆಪಿಗೆ ಯಾವುದೇ ಭಯವಿಲ್ಲ. ನಮಗೆ 400 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಮೈತ್ರಿಕೂಟದ ಬಹುತೇಕರು ಜೈಲಲ್ಲಿ, ಬೇಲ್​​ನಲ್ಲಿದ್ದಾರೆ. ಫಲಿತಾಂಶದ ಮೊದಲೇ ನಾವು ಒಂದು ಸ್ಥಾನ ಗೆದ್ದಾಗಿದೆ ಎಂದರು.

14 ಕ್ಷೇತ್ರಗಳಲ್ಲಿ ಉತ್ತಮ ಮತದಾನವಾಗಿದ್ದು, 12 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಸಿಲಿದ್ದರೂ ಜನರು ಬಂದು ಮತದಾನ ಮಾಡಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದ ಅಶೋಕ್, ಎರಡನೇ ಹಂತದಲ್ಲಿ 14 ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೋದಿ, ಅಮಿತ್ ಶಾ ಗೆ ಕರ್ನಾಟಕದ ಜನತೆ ಬಳಿ ಮತಕೇಳುವ ನೈತಿಕತೆ ಇಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ - Lok Sabha Election 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.