ETV Bharat / state

ಕಾಂಗ್ರೆಸ್ ಸರ್ಕಾರ ಬಂದರೆ ಮಾಂಗಲ್ಯ ಕಿತ್ತುಕೊಳ್ಳುತ್ತಾರೆ ಎಂಬ ಪ್ರಧಾನಿ ಮೋದಿ ಮಾತು ಸತ್ಯವಾಗಿದೆ: ಆರ್.ಅಶೋಕ್ - R ASHOK

ರಾಜ್ಯದಲ್ಲಿ ಮಹಿಳೆಯೊಬ್ಬರು ತಮ್ಮ ಮಾಂಗಲ್ಯವನ್ನು ಗೃಹ ಸಚಿವ ಜಿ. ಪರಮೇಶ್ವರ್​ಗೆ ಪೋಸ್ಟ್ ಮಾಡಿದ್ದಾರೆ. ಅಂದರೆ ಪ್ರಧಾನಿ ಮೋದಿ ಅವರು ಹೇಳಿದ್ದು ಸತ್ಯ ಆಯಿತಲ್ಲ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ಸರ್ಕಾರದ ವಿರುದ್ಧ ಕಿಡಿಕಾರಿದರು.

R ASHOK
ವಿಪಕ್ಷ ನಾಯಕ ಆರ್​. ಅಶೋಕ್ (ETV Bharat)
author img

By ETV Bharat Karnataka Team

Published : Jan 27, 2025, 6:10 PM IST

ಬೆಂಗಳೂರು: "ಕಾಂಗ್ರೆಸ್ ಸರ್ಕಾರ ಬಂದರೆ ಮಾಂಗಲ್ಯ ಕಿತ್ತು ಹಾಕ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಈಗ ಸತ್ಯವಾಗಿದೆ" ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪ್ರಧಾನಿ ಚುನಾವಣೆ ವೇಳೆ ಹೇಳಿದ ಈ ಹೇಳಿಕೆಗೆ ಕಾಂಗ್ರೆಸ್​ನವರು ಮುಗಿಬಿದ್ದಿದ್ದರು. ಈಗ ಅವರು ಹೇಳಿರುವುದು ಸತ್ಯವಾಗಿದೆ" ಎಂದರು.

"ರಾಜ್ಯದಲ್ಲಿ ಮಹಿಳೆಯೊಬ್ಬರು ತಮ್ಮ ಮಾಂಗಲ್ಯವನ್ನು ಗೃಹ ಸಚಿವರಿಗೆ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಹೇಳಿದ್ದು ಸತ್ಯ ಆಯಿತಲ್ಲ.‌ ಗ್ಯಾರಂಟಿಯ ಎರಡು ಸಾವಿರ ರೂಪಾಯಿಯಿಂದ ಫ್ರಿಡ್ಜ್ ತಗೊಂಡೆ, ಹೋಳಿಗೆ ಊಟ ಹಾಕಿಸಿದೆ, ಎರಡು ಸಾವಿರ ರೂ. ತಗೊಂಡು ಟೂರ್ ಹೋದೆ, ಬೈಕ್ ತಗೊಂಡೆ ಅಂದ್ರು. ಈಗ ಎಲ್ಲಿಗೆ ಹೋಯಿತು ಎರಡು ಸಾವಿರ?. ನಿಮ್ಮ ಎರಡು ಸಾವಿರ ಸರಿಯಾಗಿ ಪಾವತಿಯಾಗಿದ್ದರೆ, ಇವರು ಏಕೆ ಮೈಕ್ರೋ ಫೈನಾನ್ಸ್​ಗೆ ಹೋಗ್ತಾ ಇದ್ದರು?" ಎಂದು ಟೀಕಿಸಿದರು.

"ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌. ಡಾ. ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ" ಎಂದು ತಿಳಿಸಿದರು.

"ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ. ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ನೀಡಲಾಗಿದೆ. ಅಂದರೆ ಎಲ್ಲ‌ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆ" ಎಂದರು.

ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ : "ಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಸಾಲ ನೀಡುತ್ತಿತ್ತು. ಈಗ ಕಾಂಗ್ರೆಸ್‌ ಸರ್ಕಾರ ನಿಗಮಗಳ ಮೂಲಕ ಸಾಲ ನೀಡದೇ ಇರುವುದರಿಂದ ಜನರು ಅನಿವಾರ್ಯವಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆ" ಎಂದು ದೂರಿದರು.

"ಮೈಕ್ರೋ ಫೈನಾನ್ಸ್‌ನಲ್ಲಿ 10 ಜನರ ಗುಂಪು ರಚಿಸಿ, ಪ್ರತಿಯೊಬ್ಬರಿಗೂ 50 ಸಾವಿರ ರೂ. ಸಾಲ ನೀಡುತ್ತಾರೆ. ಒಬ್ಬರಿಗೆ ಉಳಿದವರು ಶ್ಯೂರಿಟಿ ಕೊಡಬೇಕಾಗುತ್ತದೆ. ಪ್ರತಿ ತಿಂಗಳು ಅಧಿಕ ಬಡ್ಡಿ ಕಟ್ಟಬೇಕಾಗುತ್ತದೆ. 50 ಸಾವಿರ ರೂ. ಸಾಲ ಪಡೆದರೆ 67 ಸಾವಿರ ರೂ. ವಾಪಸ್‌ ನೀಡಬೇಕು. ಎರಡು ತಿಂಗಳು ಕಟ್ಟಲಿಲ್ಲವೆಂದರೆ ರೌಡಿಗಳು ಮನೆಗೆ ಹೋಗಿ ಗಲಾಟೆ ಮಾಡುತ್ತಾರೆ. ಅನೇಕ ಹಳ್ಳಿಗಳಲ್ಲಿ ಜನರು ಮನೆ ಬಿಟ್ಟು ವಲಸೆ ಹೋಗಿದ್ದಾರೆ" ಎಂದು ಆರ್​ ಅಶೋಕ್​ ಆತಂಕ ವ್ಯಕ್ತಪಡಿಸಿದರು.

"ಕೋಟೆ ಲೂಟಿಯಾದ ನಂತರ ಬಾಗಿಲು ಹಾಕಿದರು ಎಂಬಂತೆ, ಸಿಎಂ ಸಿದ್ದರಾಮಯ್ಯ ಈಗ ಹೊಸ ಕಾನೂನು ತರಲು ಮುಂದಾಗಿದ್ದಾರೆ. ನೋಟಿಸ್‌ ಕೊಡದೆ ಜನರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಇಂತಹ ಸಮಯದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಪೊಲೀಸರು ಕೂಡ ಇದಕ್ಕೆ ಸಹಕಾರ ನೀಡಿದ್ದಾರೆ. ಕಂಟ್ರೋಲ್‌ ರೂಮ್‌ ರೂಪಿಸಿದರೂ ಅದರಿಂದ ಜನರಿಗೆ ಪ್ರಯೋಜನವಾಗಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.

"ಸಿಎಂ ಸಿದ್ದರಾಮಯ್ಯ ಸಾಲ ಮನ್ನಾ ಬಗ್ಗೆ ಹೇಳಿದ್ದರಿಂದ ಡಿಸಿಸಿ ಬ್ಯಾಂಕ್‌ಗಳಿಗೆ ನಷ್ಟವಾಗಿದೆ. ಸಾಲ ಪಡೆದವರು ಕಾಂಗ್ರೆಸ್‌ ಸರ್ಕಾರವನ್ನು ನಂಬಿಕೊಂಡು ಕೂತಿದ್ದಾರೆ. ಗೃಹಲಕ್ಷ್ಮಿಯ ಹಣ ಮಹಿಳೆಯರಿಗೆ ನಿಜವಾಗಿಯೂ ಸಿಕ್ಕಿದ್ದರೆ ಏಕೆ ಮೈಕ್ರೋ ಫೈನಾನ್ಸ್‌ಗೆ ಹೋಗುತ್ತಾರೆ?. ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸಲು ಕೇಂದ್ರ ಸರ್ಕಾರ ಹಣ ಕೊಡಬೇಕಿದೆ. ಇದರ ಜೊತೆಗೆ ಬೆಂಗಳೂರಿಗೆ ಅನುದಾನ ನೀಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಕೇಳಿದ್ದಾರೆ. ಈಗ ಮೈಕ್ರೋ ಫೈನಾನ್ಸ್‌ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಂತೆ. ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡುವುದಾದರೆ ಇಲ್ಲಿ ಕಾಂಗ್ರೆಸ್‌ ಏಕೆ ಅಧಿಕಾರದಲ್ಲಿದೆ?" ಎಂದು ಪ್ರಶ್ನಿಸಿದರು.

ನೀವೇ ಒಂದು ಹೊಸ ಕಾನೂನು ಬರೆಯಿರಿ : "ಸಿಎಂ ಪತ್ನಿಗೆ ಇ.ಡಿ ನೋಟಿಸ್​ ಕೊಟ್ಟಿದ್ದರಲ್ಲಿ ಏನು ವಿಶೇಷ ಇಲ್ಲ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರಿಗೂ ಸಿಬಿಐ ನೋಟಿಸ್​, ಲೋಕಾಯುಕ್ತ ನೋಟಿಸ್​ ಕೊಟ್ಟಿದ್ದರು. ಆಗ ಅದು ಸುದ್ದಿಯಾಗಿಲ್ಲ. ಈಗ ಏಕೆ ಸುದ್ದಿ ಆಗಬೇಕು?. ಕಾನೂನುಬದ್ಧ ಸಂಸ್ಥೆಗಳು. ಇ.ಡಿ ನೋಟಿಸ್​ ಕೊಟ್ಟರೆ ಮಾತ್ರ ಸುದ್ದಿ ಆಗುತ್ತೆ. ಲೋಕಾಯುಕ್ತ ಕೊಟ್ಟರೆ ಸುದ್ದಿನೇ ಆಗಲ್ಲ‌ ಎಂದರು.

"ವಾಲ್ಮೀಕಿ ನಿಗಮದ್ದು ಏನಾಯ್ತು?. ಇ.ಡಿಯವರು ಹಣ ಎಲ್ಲೆಲ್ಲಿಗೆ ಹೋಗಿದೆ ಅಂತ ಪತ್ರಿಕಾ ಪ್ರಕಟಣೆ ಹೊರಡಿಸಿದರು. ಆದರೆ ಎಸ್ಐಟಿ ಕ್ಲೀನ್ ಚಿಟ್ ಕೊಟ್ಟಿದೆ. ಅವರಿಗೂ ಮುಂಬಡ್ತಿ ಬೇಕಲ್ಲ. ಅದಕ್ಕೆ ಹಾಗೇ ಮಾಡುತ್ತಿದ್ದಾರೆ. ಯಡಿಯೂರಪ್ಪ, ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ನೋಟಿಸ್​ ಕೊಟ್ಟರೆ ಅದು ರಾಜಕೀಯ ಪ್ರೇರಿತ ಅಲ್ಲ. ಇವರಿಗೆ ಕೊಟ್ಟರೆ ಮಾತ್ರ ರಾಜಕೀಯ ಪ್ರೇರಿತ‌. ಹೊಸದೊಂದು ಕಾನೂನು ಬರೆಯಿರಿ. ಕಾಂಗ್ರೆಸ್ ನವರಿಗೆ ನೋಟಿಸ್​ ಕೊಟ್ಟರೆ ಮಾತ್ರ ಅದು ರಾಜಕೀಯ ಪ್ರೇರಿತ. ಬಿಜೆಪಿಯವರಿಗೆ ಕೊಟ್ಟರೆ ಮಾತ್ರ ಅದು ಕಾನೂನು ಪ್ರಕಾರ ಎಂದು ಕಾನೂನು ಪುಸ್ತಕ ಬರೆದುಬಿಡಿ. ಆವಾಗ ಇದ್ದಿದ್ದು ಅದೇ ಇ.ಡಿ, ಸಿಬಿಐ. ಅದೇ ಕಾನೂನೇ ಇದ್ದಿದ್ದು. ಅವರು ಅದೇ ಕಾನೂನಿನಂತೆ ನೋಟಿಸ್​ ಕೊಟ್ಟಿದ್ದಾರೆ. ಇದರಲ್ಲಿ ರಾಜಕೀಯ ಎಲ್ಲಿದೆ?" ಎಂದು ಪ್ರಶ್ನಿಸಿದರು.

ಏಕರೂಪ ನಾಗರಿಕ ಸಂಹಿತೆ ಬರಬೇಕು : "ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಎಲ್ಲರೂ ಸಮಾನ ಎಂಬ ಭಾವನೆ ಬೆಳೆಯುತ್ತದೆ. ಬೇರೆ ದೇಶಗಳಲ್ಲಿ ಎಲ್ಲ ನಾಗರಿಕರು ಒಂದೇ ಎಂದು ಪರಿಗಣಿಸಲಾಗುತ್ತದೆ. ಅದೇ ರೀತಿ ಭಾರತದಲ್ಲೂ ಹಿಂದೂಗಳಿಗೆ ಇರುವ ಕಾನೂನು ಎಲ್ಲ ಧರ್ಮೀಯರಿಗೆ ಅನ್ವಯವಾಗಬೇಕು" ಎಂದರು.

ಇದನ್ನೂ ಓದಿ: ಇ.ಡಿ ನೋಟಿಸ್​ನಿಂದ ಸಿಎಂ ಸಿದ್ದರಾಮಯ್ಯನವರಿಗೆ ದೊಡ್ಡ ಆಘಾತವಾಗಿದೆ: ಬಿ.ವೈ. ವಿಜಯೇಂದ್ರ

ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ ಮುಂದುವರೆಯುತ್ತಿರುವುದು ಅಧರ್ಮ : ಪ್ರಲ್ಹಾದ್‌ ಜೋಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.