ETV Bharat / state

ಮುಂಗಾರು ಮಾರುತಗಳು ರಾಜ್ಯಕ್ಕೆ ಅಪ್ಪಳಿಸಲು ಸಜ್ಜು: ಹವಾಮಾನ ಇಲಾಖೆಯಿಂದ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ - Orange alert to four district - ORANGE ALERT TO FOUR DISTRICT

ಮುಂದಿನ 24 ಗಂಟೆಗಳ ಕಾಲ ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಗೆ ಆರೆಂಜ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್
ಆರೆಂಜ್ ಅಲರ್ಟ್ (ETV Bharat)
author img

By ETV Bharat Karnataka Team

Published : Jun 1, 2024, 6:18 PM IST

ಬೆಂಗಳೂರು: ಮುಂಗಾರು ಮಾರುತಗಳು ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾಗಿದ್ದು, ಈ ಕಾರಣಕ್ಕೆ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಮುಂದಿನ 24 ಗಂಟೆಗಳ ಕಾಲಕ್ಕೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಘೋಷಣೆ ಮಾಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ಬೆಳಗಾವಿ, ಬೀದರ್‌ನಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಗಾಳಿ ಸಹಿತ ಮಳೆಯಾಗಲಿದೆ. ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಒಳನಾಡಿನ ಎಲ್ಲ ಜಿಲ್ಲೆಗಳ ಮೇಲೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಮೇಲ್ಮೈ ಮಾರುತಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಡಿಗ್ರಿ ಮತ್ತು 22 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನೈಋತ್ಯ ಮಾನ್ಸೂನ್ ಮಾರುತಗಳು ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ದಕ್ಷಿಣ ಅರೇಬಿಯನ್ ಸಮುದ್ರದ ಭಾಗಗಳು, ಲಕ್ಷದ್ವೀಪ, ಕೇರಳ, ಕರ್ನಾಟಕ ಮತ್ತು ರಾಯಲ್​ ಸೀಮಾದ ಕೆಲವು ಭಾಗಗಳು, ತಮಿಳುನಾಡು ಮತ್ತು ಬಂಗಾಳ ಕೊಲ್ಲಿಯಲ್ಲಿ ಕಂಡುಬರುತ್ತಿದೆ. ದಕ್ಷಿಣ ಕೇರಳದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆ ಮುಂದುವರಿಯುತ್ತಿದ್ದು, ಸರಾಸರಿ ಸಮುದ್ರ ಮಟ್ಟದಿಂದ 5.8 ಮತ್ತು 7.6 ಕಿಮೀ ನಡುವೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ: ಜೂನ್ 6ಕ್ಕೆ ಕರ್ನಾಟಕಕ್ಕೆ ಮುಂಗಾರು ಎಂಟ್ರಿ: ಈ ಬಾರಿ ರಾಜ್ಯದಲ್ಲಿ ಹೇಗಿರಲಿದೆ ಮಳೆ? - KARNATAKA RAIN FORECAST

ETV Bharat Logo

Copyright © 2024 Ushodaya Enterprises Pvt. Ltd., All Rights Reserved.