ETV Bharat / state

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಿಸುವ ಸುಗ್ರೀವಾಜ್ಞೆ ವಾರದಲ್ಲಿ ಸಿದ್ಧ: ಸಚಿವ ಕೃಷ್ಣ ಬೈರೇಗೌಡ - MEETING ON MICROFINANCE HARASSMENT

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಸಿಎಂ ನಾಲ್ಕು ಸಭೆ ಮಾಡಿದ್ದು, ಅದರ ಆಟಾಟೋಪಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ವಾರದಲ್ಲಿ ಬರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

MEETING ON MICROFINANCE HARASSMENT
ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ. (ETV Bharat)
author img

By ETV Bharat Karnataka Team

Published : Feb 1, 2025, 8:35 PM IST

ಬೆಂಗಳೂರು: ಮೈಕ್ರೋ ಫೈನಾನ್ಸ್​ಗಳ ಆಟಾಟೋಪಗಳಿಗೆ ಕಡಿವಾಣ ಹಾಕುವ ಹೊಸ ಕಾನೂನು ವಾರದಲ್ಲಿ ಸಿದ್ಧವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಈ ನಿಟ್ಟಿನಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು.

ಸಭೆ ಬಳಿಕ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ಮೈಕ್ರೋ ಫೈನಾನ್ಸ್ ಬರೋದು ಕೇಂದ್ರದ ಅಡಿ. ಇಲ್ಲಿ ಬಂದು ಕೇಂದ್ರ ಮಂತ್ರಿ ಮಾತನಾಡ್ತಾರೆ. ಆದರೆ, ಆರ್​ಬಿಐ ಯಾರ ಅಡಿ ಬರುತ್ತದೆ?. ಅವರು ಬಂದು ಮೀಡಿಯಾಗೇ ಮಾತಾಡ್ತಾರೆ ಅಷ್ಟೇ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು‌‌ ಕೇಂದ್ರದವರು ಏನು ಮಾಡಿದ್ದಾರೆ?. ಅವರಿಗೆ ಜನರ ಗೋಳು ಕಾಣಿಸ್ತಿಲ್ವಾ?. ಸಿಎಂ ಸಿದ್ದರಾಮಯ್ಯ ನಾಲ್ಕು ಸಭೆ ಮಾಡಿದ್ದು, ವಾರದಲ್ಲಿ ಬಿಲ್ ತಯಾರಾಗ್ತಿದೆ. ಕೇಂದ್ರ ನಿದ್ದೆ ಮಾಡುವಾಗ ರಾಜ್ಯ ಎಚ್ಚೆತ್ತು ಕೆಲಸ ಮಾಡ್ತಿದೆ ಎಂದರು.‌

ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು ಎಂದು ಸೂಚಿಸಲಾಯಿತು.

ಮೈಕ್ರೋ ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಬದುದು. ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯವಹಾರವನ್ನ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC-AC ಒಳಗೊಂಡ ಒಂಬುಡ್ಸ್​ಮನ್​ ನೇಮಕ ಮಾಡಬೇಕು. ಈ ಕಂಪನಿಗಳು ಸಾಲದ ಹೆಸರಲ್ಲಿ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ. ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬುದೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾಗಬೇಡಿ, ಸರ್ಕಾರ ನಿಮ್ಮ ಜೊತೆಗಿದೆ: ಸಿಎಂ‌ ಸಿದ್ದರಾಮಯ್ಯ - CM SIDDARAMAIAH

ETV Bharat Logo

Copyright © 2025 Ushodaya Enterprises Pvt. Ltd., All Rights Reserved.