ETV Bharat / state

ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗ್ತಾರಂತ ಮೊದಲೇ ಗೊತ್ತಿತ್ತು, ನಮ್ಮ ಅಭ್ಯರ್ಥಿಯೇ ಗೆಲ್ಲುವುದು: ಸಿಎಂ - CM SIDDARAMAIAH

ಚನ್ನಪಟ್ಟಣ ಉಪ ಚುನಾವಣಾ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗ್ತಾರೆ ಅಂತ ಮೊದಲೇ ಗೊತ್ತಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Oct 24, 2024, 6:55 PM IST

ಬೆಂಗಳೂರು: ''ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆಯ ಅಭ್ಯರ್ಥಿ ಆಗ್ತಾರೆ ಅಂತ ಮೊದಲೇ ಗೊತ್ತಿತ್ತು. ಆದರೆ ನಮ್ಮ ಅಭ್ಯರ್ಥಿಯೇ ಗೆಲ್ಲುವುದು'' ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ''ನಿಖಿಲ್ ಚನ್ನಪಟ್ಟಣ ಅಭ್ಯರ್ಥಿ ಆಗ್ತಾರೆ ಅಂತ ಮೊದಲೇ ಗೊತ್ತಿತ್ತು. ಆದರೆ, ನಮ್ಮ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ'' ಎಂದು ತಿಳಿಸಿದರು.

ಶಿಗ್ಗಾಂವಿಯಲ್ಲಿ ಯಾಸಿರ್ ಖಾನ್ ಪಠಾಣ್​ಗೆ ಟಿಕೆಟ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ''ನಾವು ಎಐಸಿಸಿ ಪ್ಯಾನಲ್​ಗೆ ಲಿಸ್ಟ್​ ಕಳುಹಿಸಿದ್ದೆವು. ಅದರಂತೆ ಟಿಕೆಟ್ ಹಂಚಿಕೆ ಮಾಡಿದ್ದಾರೆ. ಕಳೆದ ಬಾರಿ ಕೂಡ ಪಠಾಣ್ ಸ್ಫರ್ಧೆ ಮಾಡಿದ್ದರು. ಹಾಗಾಗಿ ಟಿಕೆಟ್ ನೀಡಿದ್ದಾರೆ'' ಎಂದರು.

ಟಿಕೆಟ್​ಗೆ ಪೈಪೋಟಿ ಇರಲಿಲ್ಲ‌- ಪಠಾಣ್​: ಇದೇ ವೇಳೆ, ಯಾಸಿರ್ ಖಾನ್ ಪಠಾಣ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು. ನಾಳೆ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಆಹ್ವಾನ ನೀಡಿದರು. ಬಳಿಕ ಮಾತನಾಡಿ, ''ಕ್ಷೇತ್ರದಲ್ಲಿ ಟಿಕೆಟ್​ಗೆ ಪೈಪೋಟಿ ಏನೂ ಇರಲಿಲ್ಲ‌. ಆಕಾಂಕ್ಷಿಗಳು ಇರುವುದು ಸಹಜ. ಎಲ್ಲರಿಗೂ ಆಸೆ ಇರುತ್ತದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಾಗಿದೆ. ಎಲ್ಲರೂ ಚೆನ್ನಾಗಿ ಕೆಲಸ ಮಾಡಿ‌ ಒಟ್ಟಾಗಿ ಕೆಲಸ ಮಾಡಿ ಗೆದ್ದು ಬನ್ನಿ ಎಂದು ಸಿಎಂ ಸಲಹೆ ನೀಡಿದ್ದಾರೆ'' ಎಂದರು.

ಇದನ್ನೂ ಓದಿ: ಶಿಗ್ಗಾಂವಿ ಉಪಸಮರ: ಯಾಸಿರ್ ಖಾನ್ ಪಠಾಣ್ ಕಾಂಗ್ರೆಸ್ ಅಭ್ಯರ್ಥಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.