ETV Bharat / state

ನಕ್ಸಲರನ್ನ ಮುಖ್ಯವಾಹಿನಿಗೆ ತರಲು ಸರ್ಕಾರ ಬಯಸುತ್ತದೆ, ಹಿಂಸಾಚಾರ ಮಾಡಿದರೆ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ - C M SIDDARAMAIAH

ನಕ್ಸಲರನ್ನ ಮುಖ್ಯವಾಹಿನಿಗೆ ತರಲು ಸರ್ಕಾರ ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

cm siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Dec 30, 2024, 9:03 PM IST

ಬೆಂಗಳೂರು : ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರ ಬಯಸುತ್ತದೆ. ಆದರೆ, ಹಿಂಸಾತ್ಮಕ ಚಟುವಟಿಕೆಗಳಲ್ಲಿ ಯಾರೇ ತೊಡಗಿದರೂ ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯೂ ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

ಆದರೆ, ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ. ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ. ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೆ ಕೂರುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರ ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾಗಿದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದೆ. ಈ ನೀತಿಯನ್ನು ಸರಳೀಕರಣಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿ ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅವರ ಮೇಲಿನ ಮೊಕದ್ದಮೆ/ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮುಖ್ಯವಾಹಿನಿಗೆ ಬರಲಿಚ್ಚಿಸುವವರು ನಕ್ಸಲರ ಶರಣಾಗತಿ ಮತ್ತು ಪುರ್ನವಸತಿ ಸಮಿತಿ ಸಂಪರ್ಕಿಸಿ: ಬಂಜೆಗೆರೆ ಜಯಪ್ರಕಾಶ್ - Dr Banjagere Jayaprakash - DR BANJAGERE JAYAPRAKASH

ETV Bharat Logo

Copyright © 2025 Ushodaya Enterprises Pvt. Ltd., All Rights Reserved.