ETV Bharat / state

ನಮ್ಮ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ - DCM D K SHIVAKUMAR

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ ಎಂದಿದ್ದಾರೆ.

dcm-d-k-shivakumar
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Nov 19, 2024, 8:43 PM IST

ಬೆಂಗಳೂರು: ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ, ರಾಜಕೀಯ ಮಾಡಲು ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿವೆ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ವಿರೋಧ ಪಕ್ಷಗಳ ಟೀಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿ ಹಾಗೂ ಕುಮಾರಸ್ವಾಮಿ ಅವರಿಗೆ ನಮ್ಮ ಸರ್ಕಾರದ ಮೇಲೆ ಟೀಕೆ ಮಾಡಲು ವಿಚಾರಗಳಿಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿದ್ದಾರೆ. ಅವರ ಸರ್ಕಾರದ ಅವಧಿಯಲ್ಲಿ ಯಾವುದೇ ಬಡವರಿಗೆ ಸಹಾಯ ಮಾಡಲಿಲ್ಲ. ಅವರಿಗೆ ಬಡವರಿಗೆ ಒಂದು ಕಾರ್ಯಕ್ರಮ ಮಾಡಲು ಆಗುವುದಿಲ್ಲ ಎಂದರು.

ಬಡವರ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡಲಾಗುವುದು : ಕೆಲವು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಆರ್ಥಿಕವಾಗಿ ಅನುಕೂಲವಾಗಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅಂತಹವರನ್ನು ಪರಿಶೀಲಿಸಲು ನಾವು ಮುಂದಾಗಿದ್ದೇವೆ. ಬಡವರು ಎಂದು ನಿರ್ಧರಿಸಲು ಕೇಂದ್ರ ಸರ್ಕಾರ ಮಾನದಂಡ ವಿಧಿಸಿದ್ದು, ಅದರ ಆಧಾರದ ಮೇಲೆ ನಾವು ತೀರ್ಮಾನ ಮಾಡುತ್ತೇವೆ. ಬಡವರ ಕಾರ್ಡ್ ರದ್ದಾಗಿದ್ದರೆ ಅದನ್ನು ಸರಿಪಡಿಸಿ ಮತ್ತೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಸ್ಪಷ್ಟನೆ ನೀಡಿದರು.

ಕುಮಾರಸ್ವಾಮಿ ಮೊದಲು ಮೋದಿ ಕೊಟ್ಟಿರುವ ಕೆಲಸ ಮಾಡಲಿ : ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಏನಾದರೂ ಹೇಳಲಿ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಏನು ಮಾಡಿದರು?. ಈ ರಾಜ್ಯಕ್ಕೆ ಅವರ ಕೊಡುಗೆ ಏನು?. ಗಾಳಿಯಲ್ಲಿ ಗುಂಡು ಹೊಡೆಯುವುದೇ ಅವರ ಕೊಡುಗೆ. ಅವರ ಕಾಲದಲ್ಲಿ ಸರ್ಕಾರಕ್ಕೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

ನಾವು ಬಂಡವಾಳ ಹೂಡಿಕೆ ತಂದು ರಾಜ್ಯದ ಆರ್ಥಿಕತೆಗೆ ಶಕ್ತಿ ತುಂಬುತ್ತಿದ್ದೇವೆ. ಟೆಕ್ ಸಮ್ಮಿಟ್ ಮಾಡಿದ್ದು ಕೂಡ ಉದ್ಯೋಗ ಸೃಷ್ಟಿ ಹಾಗೂ ಬಂಡವಾಳ ಹೂಡಿಕೆ ತರುವ ಉದ್ದೇಶದಿಂದ. ಮೋದಿ ಅವರು ಕೊಟ್ಟಿರುವ ಕೆಲಸವನ್ನು ಅವರು ಮಾಡಲಿ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದಾರಲ್ಲ, ರಾಜ್ಯದಲ್ಲಿ ಅವರಿಗೆ ಎಷ್ಟು ಜಮೀನು ಬೇಕು ಎಂದು ಪತ್ರ ಬರೆಯಲಿ. ಯಾವ ಕೈಗಾರಿಕೆಯನ್ನು ತರುತ್ತಾರೆ ಎಂದು ಯೋಜನಾ ವರದಿ ಸಲ್ಲಿಸಲಿ. ನಾನೇ ನಿಂತು ಅಗತ್ಯ ಜಮೀನು ಕೊಡಿಸುತ್ತೇನೆ ಎಂದು ತಿರುಗೇಟು ನೀಡಿದರು.

ಆಯಾ ಕ್ಷೇತ್ರಕ್ಕೆ ಎಷ್ಟು ಕೊಡಬೇಕು ಎಂಬ ಲೆಕ್ಕಾಚಾರವಿದೆ : ಅಭಿವೃದ್ಧಿ ಯೋಜನೆಗಳಿಗೆ ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ ಎಂಬ ಬಗ್ಗೆ ಮಾತನಾಡಿ, ಕೆಲವರು ತಮ್ಮದೇ ಆದ ಲೆಕ್ಕಾಚಾರದಲ್ಲಿ ಹೇಳಿರುತ್ತಾರೆ. ಅದಕ್ಕೆ ಪ್ರಕ್ರಿಯೆಗಳಿವೆ. ಕೆಲವರು ತಮ್ಮ ಕ್ಷೇತ್ರಕ್ಕೆ 100 ಕೋಟಿ ಅನುದಾನ ಬೇಕು ಎಂದು ಕೇಳುತ್ತಾರೆ. ಅವರು ಕೇಳಿದಾಕ್ಷಣ ಕೊಡಲು ಆಗುವುದಿಲ್ಲ. ಆಯಾ ಕ್ಷೇತ್ರಕ್ಕೆ ಎಷ್ಟು ಕೊಡಬೇಕು ಎಂಬ ಲೆಕ್ಕಾಚಾರವಿದ್ದು, ಅದರಂತೆ ನೀಡುತ್ತೇವೆ ಎಂದರು.

ಯತ್ನಾಳ್ ಹೇಳಿದ 1 ಸಾವಿರ ಕೋಟಿ ಯಾರ ಮನೆಯಲ್ಲಿದೆ : ಶಾಸಕರ ಖರೀದಿ ಬಗ್ಗೆ ಪ್ರತಿಕ್ರಿಯಿಸುತ್ತಾ, ಮಾಧ್ಯಮದವರು ಬಿಜೆಪಿ ವಿಚಾರವಾಗಿ ಚರ್ಚೆ ಮಾಡುತ್ತಿಲ್ಲ. ಈ ವಿಚಾರದಲ್ಲಿ ನಾನು ಮಾಧ್ಯಮಗಳ ಮೇಲೆ ಆರೋಪ ಮಾಡುತ್ತೇನೆ. ಯತ್ನಾಳ್ ಅವರು 1 ಸಾವಿರ ಕೋಟಿ ವಿಚಾರವಾಗಿ ಪ್ರಸ್ತಾಪ ಮಾಡಿದ್ದರ ಬಗ್ಗೆ ಮಾಧ್ಯಮಗಳು ಯಾಕೆ ಚರ್ಚೆ ಮಾಡುತ್ತಿಲ್ಲ?. ಮೊದಲು ಯತ್ನಾಳ್ ಅವರು ಈ ವಿಚಾರ ಪ್ರಸ್ತಾಪಿಸಿದ್ದು, ಮೊದಲು ಅದರ ಬಗ್ಗೆ ಚರ್ಚೆ ಮಾಡಿ. ಆ ಹಣ ಎಲ್ಲಿಂದ ಬಂತು, ಅದು ಯಡಿಯೂರಪ್ಪ, ಅಶೋಕ್, ವಿಜಯೇಂದ್ರ, ಅಶ್ವತ್ಥ್ ನಾರಾಯಣ್, ಕುಮಾರಸ್ವಾಮಿ ಯಾರ ಮನೆಯಲ್ಲಿದೆ ಎಂದು ಚರ್ಚೆ ಮಾಡಿ. ಯತ್ನಾಳ್ ಈ ಆರೋಪ ಮಾಡಿದ ಮೇಲೆ ಬಿಜೆಪಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರಾ?. ಅದು ಸುಳ್ಳು ಎಂದು ಹೇಳಿದ್ದಾರಾ? ಮೊದಲು ಅಲ್ಲಿಂದ ಚರ್ಚೆ ಆರಂಭವಾಗಲಿ ಎಂದು ತಿಳಿಸಿದರು.

ಇದನ್ನೂ ಓದಿ : ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿ. ಕೆ. ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.