ETV Bharat / state

ಪೊಲೀಸ್ ಠಾಣೆಗೆ 144 ಸೆಕ್ಷನ್ ಹಾಕಿರುವುದು ಯಾರ ಓಲೈಕೆಗಾಗಿ?: ಪಿ.ರಾಜೀವ್ - P Rajiv

author img

By ETV Bharat Karnataka Team

Published : Jun 13, 2024, 6:29 PM IST

ತಮ್ಮ ವೈಯಕ್ತಿಕ ಹಿತಾಸಕ್ತಿಯ ಚಟುವಟಿಕೆಗಾಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಟೀಕಿಸಿದ್ದಾರೆ.

BJP STATE GENERAL SECRETARY P RAJIV
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ (ETV Bharat)

ಬೆಂಗಳೂರು: "ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ನಟ ದರ್ಶನ್ ಅವರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸ್ ಠಾಣೆಗೆ 144 ಸೆಕ್ಷನ್ ಹಾಕಿರುವುದು ವೈಯಕ್ತಿಕ ಹಿತಾಸಕ್ತಿ ಮತ್ತು ಓಲೈಕೆಗಾಗಿ. ಇದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ನಿದರ್ಶನ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಪೊಲೀಸ್ ಠಾಣೆಗೆ 144 ಸೆಕ್ಷನ್ ಹಾಕುವುದೆಂದರೆ ಪೊಲೀಸ್ ಸ್ಟೇಶನ್‌ ಅನ್ನು ರಕ್ಷಿಸಲು ಇನ್ನೊಬ್ಬ ಖಾಸಗಿಯವರಿಗೆ ಕೊಟ್ಟಂತೆ. ಮಾಧ್ಯಮದವರನ್ನು ದೂರವಿಡುವ ಉದ್ದೇಶ ಮತ್ತು ಠಾಣೆಯಲ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿಯ ಚಟುವಟಿಕೆ ಮಾಡುವುದಕ್ಕಾಗಿ ಅಥವಾ ಯಾರನ್ನೋ ಓಲೈಕೆಗೆ 144ನೇ ಸೆಕ್ಷನ್ ಬಳಸಿಕೊಳ್ಳುತ್ತಿದ್ದಾರೆ" ಎಂದು ಟೀಕಿಸಿದರು.

"ಜನರಿಗೆ ತನಿಖಾ ಸಂಸ್ಥೆ, ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ಕಡಿಮೆಯಾಗಬಾರದು. ಇದು ಪೊಲೀಸ್ ಇಲಾಖೆಯ ಗುರುತರ ಜವಾಬ್ದಾರಿ. ಎಸ್‍ಐಟಿ, ಪೊಲೀಸ್ ಠಾಣೆಗಳ ನಡವಳಿಕೆ ಜನರಲ್ಲಿ ವಿಶ್ವಾಸ ಮೂಡಿಸುವಂತೆ ಇರಬೇಕು" ಎಂದರು.

"ಕೊಲೆ ಮಾಡಿದವನು, ಕೊಲೆಗೆ ಸಂಚು ಮಾಡಿದವನು, ಕೊಲೆಗೆ ದುಷ್ಪ್ರೇರಣೆ ನೀಡಿದವನು, ಕೊಲೆ ಪ್ರಕರಣದ ಸಾಕ್ಷಿ ನಾಶ ಮಾಡುವವನು, ಕೊಲೆಯ ಸಾಕ್ಷ್ಯದ ದಿಕ್ಕು ತಪ್ಪಿಸುವವನು- ಈ ಎಲ್ಲಾ ಚಟುವಟಿಕೆಗಳು ಕೊಲೆಯ ಒಳಸಂಚಿನ ಭಾಗವೇ ಆಗುತ್ತದೆ. ಅದು ಒಬ್ಬ ಕೊಲೆಗಾರನ ಹೊಣೆಗಾರಿಕೆಯಷ್ಟೇ ಪ್ರಮುಖ" ಎಂದು ಹೇಳಿದರು.

"ಕಾನೂನು ಎಲ್ಲರಿಗೂ ಸಮಾನ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವುದೇ ಕಾನೂನು. ನಮ್ಮ ಸಂವಿಧಾನದಂತೆ ಕಾನೂನಿನಡಿ ಎಲ್ಲರೂ ಸಮಾನರು. ಆದರೆ, ವಿಐಪಿಯನ್ನು ಕರೆದುಕೊಂಡು ಬಂದ ತಕ್ಷಣ ಶಾಮಿಯಾನ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ಮಾಡಿ, ಮಾಧ್ಯಮದವರನ್ನು ಪೊಲೀಸ್ ಠಾಣೆ ಆವರಣಕ್ಕೆ ಬಿಡದಂತೆ ವರ್ತಿಸುತ್ತಿದ್ದು, ಇದು ಸರ್ಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದಕ್ಕೆ ಸಾಕ್ಷಿ" ಎಂದು ಟೀಕಿಸಿದರು.

"ಪ್ರತಿಯೊಬ್ಬರ ಮಾನ-ಪ್ರಾಣಕ್ಕೆ ಬಹಳ ದೊಡ್ಡ ಘನತೆ ಇದೆ. ಅಮಾಯಕರ ಪ್ರಾಣಹಾನಿಗೆ ಕಾರಣರಾದವರ ವಿರುದ್ಧ ಕಾನೂನಿನಡಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಇನ್ನು ಮುಂದೆ ಅಮಾಯಕರ ಪ್ರಾಣಹಾನಿ ಆಗದಂತೆ ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆ ತನ್ನ ಕರ್ತವ್ಯ ನಿರ್ವಹಿಸಲಿ" ಎಂದು ಒತ್ತಾಯಿಸಿದರು.

"ಈಗಿನ ಸರ್ಕಾರದಲ್ಲಿ ನಾವು ಏನು ಮಾಡಿದರೂ ದಕ್ಕಿಸಿಕೊಳ್ಳಬಹುದು. ನಮ್ಮ ಪ್ರಭಾವದಿಂದ ನಾವು ಬಚಾವ್ ಆಗಬಹುದು, ಎಂಬ ಭಾವನೆಯಿಂದ ಕ್ಷುಲ್ಲಕ ಕಾರಣಕ್ಕೆ ಕೊಲೆಗಳು ನಡೆಯುತ್ತಿವೆ. ಸರ್ಕಾರವು ಕಾನೂನು- ಸುವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಬೇಕು" ಎಂದು ಆಗ್ರಹಿಸಿದರು.

ಇದನ್ನೂ ಓದಿ: ದರ್ಶನ್​ಗೆ ನಾನು ಯಾವುದೇ ಟಾಂಗ್​ ಕೊಟ್ಟಿಲ್ಲ: ಇಂದ್ರಜಿತ್​ ಲಂಕೇಶ್​ - Indrajith Lankesh reaction

ETV Bharat Logo

Copyright © 2024 Ushodaya Enterprises Pvt. Ltd., All Rights Reserved.