ETV Bharat / state

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ವಿಧಿವಶ - TULASI GOWDA PASSES AWAY

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಅವರು ಇಂದು ನಿಧರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ
ವೃಕ್ಷಮಾತೆ ತುಳಸಿ ಗೌಡ (ETV Bharat)
author img

By ETV Bharat Karnataka Team

Published : Dec 16, 2024, 9:48 PM IST

Updated : Dec 16, 2024, 10:00 PM IST

ಕಾರವಾರ: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ (86) ಸೋಮವಾರ ಇಹಲೋಕ ತ್ಯಜಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ, ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಸುಬ್ರಾಯ, ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಲಕ್ಷಾಂತರ ಗಿಡಗಳನ್ನು ನೆಟ್ಟು, ಪೋಷಿಸುತ್ತಿದ್ದ ಇವರು ವೃಕ್ಷಮಾತೆ ಎಂದೇ ಜನಪ್ರಿಯರು. ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿದ್ದ ತುಳಸಿಗೌಡರ ಪರಿಸರಪ್ರೇಮವನ್ನು ಮೆಚ್ಚಿ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ವಿಧಿವಶ
ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ್ದ ತುಳಸಿಗೌಡ (ETV Bharat)

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಪ್ಪಲಿ ಹಾಕಿಕೊಳ್ಳದೇ ಬರಿಗಾಲಿನಲ್ಲೇ ತೆರಳಿ ದೇಶದ ಉನ್ನತ ಗೌರವ ಸ್ವೀಕರಿಸಿದ್ದರು. ಆ ವೇಳೆ ಸ್ವತಃ ಪ್ರಧಾನಿ ಮೋದಿ ಅವರು ತುಳಸಜ್ಜಿಯ ಸರಳತೆಯನ್ನು ಕೊಂಡಾಡಿದ್ದರು.

1944ರಲ್ಲಿ ಹೊನ್ನಳ್ಳಿಯಲ್ಲಿ ನಾರಾಯಣ ಹಾಗೂ ನೀಲಿ ದಂಪತಿಗೆ ಜನಿಸಿದ ಇವರು ಬಡತನದಲ್ಲೇ ಬೆಳೆದರು. ಶಾಲೆಯ ಮುಖವನ್ನೂ ನೋಡದಿದ್ದರೂ ಚಿಕ್ಕವಯಸ್ಸಿನಿಂದಲೇ ಪರಿಸರ ಪ್ರೇಮ ಬೆಳೆಸಿಕೊಂಡಿದ್ದರು.

ಇದನ್ನೂ ಓದಿ: ತಬಲಾ ವಾದ ನಿಲ್ಲಿಸಿದ ಜಾಕಿರ್ ಹುಸೇನ್​: ಅಮೆರಿಕದಲ್ಲಿ ಶಾಸ್ತ್ರೀಯ ಸಂಗೀತ ದಿಗ್ಗಜ ಅಸ್ತಂಗತ

ಗಣ್ಯರಿಂದ ಸಂತಾಪ: ತುಳಸಿ ಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವ ಸಂತೋಷ ಲಾಡ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

"ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಜೀವನ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ್ದ ತುಳಸಿಗೌಡ ಅವರು ನಿವೃತ್ತಿಯ ನಂತರವೂ ತಮ್ಮ ಪರಿಸರ ಕಾಳಜಿಯಿಂದ ವಿಮುಖರಾಗದೆ ಗಿಡನೆಡುವುದನ್ನು ಮುಂದುವರೆಸಿ, ಪದ್ಮಶ್ರೀಯಂತಹ ಅತ್ಯುನ್ನತ ಗೌರವಕ್ಕೆ ಪಾತ್ರರಾದವರು. ತುಳಸಿಗೌಡ ಅವರ ಪರಿಸರದ ಬಗೆಗಿನ ಪ್ರೀತಿ - ಕಾಳಜಿಯನ್ನು ಸ್ಮರಿಸುತ್ತ, ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ" ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

"ಲಕ್ಷಾಂತರ ಗಿಡಗಳನ್ನು ನೆಟ್ಟು, ಪೋಷಿಸಿದ್ದ ಮಹಾತಾಯಿ, ಪರಿಸರ ಪ್ರೇಮಿ, ಪದ್ಮಶ್ರೀ ತುಳಸಿಗೌಡ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಚಿರಶಾಂತಿ‌ ಕೋರುತ್ತೇನೆ. ತುಳಸಿಗೌಡ ಅವರ ಕುಟುಂಬದ ಈ ನೋವಿನಲ್ಲಿ ನಾನೂ ಭಾಗಿ" ಎಂದು ಸಚಿವ ಸಂತೋಷ ಲಾಡ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

"ವೃಕ್ಷಮಾತೆ ಎಂದೇ ಹೆಸರಾಗಿದ್ದ ತುಳಸಿ ಗೌಡ ಅವರು ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಬೆಳೆಸಿದವರು. ಅವರ ಪರಿಸರ ಪ್ರೇಮಕ್ಕೆ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ರಾಜ್ಯೋತ್ಸವ ಪ್ರಶಸ್ತಿಯನ್ನೂ ಅವರು ಪಡೆದಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ" ಎಂದು ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

Last Updated : Dec 16, 2024, 10:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.