ETV Bharat / state

ಪಾದರಾಯನಪುರ ಗಲಭೆ ಪ್ರಕರಣ; ಆರೋಪಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ - Padarayanpur Riot Case

ಕೊರೊನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಪಾದರಾಯನಪುರದಲ್ಲಿ ಬಿಬಿಎಂಪಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Mar 19, 2024, 9:01 PM IST

ಬೆಂಗಳೂರು: ಕೊರೊನಾ ವೇಳೆ ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳಾಗಿದ್ದ 375 ಮಂದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ನವಾಜ್ ಪಾಷಾ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಜತೆಗೆ, ಅಕ್ರಮವಾಗಿ ಗುಂಪುಗೂಡಿ ಪಾಲಿಕೆ ಅಧಿಕಾರಿಗಳ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿರು ಎನ್ನಲಾದ ಆರೋಪದಡಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಿ ಆದೇಶಿಸಿದೆ.

ಅಲ್ಲದೇ, ಸಾಕ್ಷಿಗಳ ಹೇಳಿಕೆಗಳನ್ನು ಒಂದೇ ರೀತಿಯಲ್ಲಿ ದಾಖಲಿಸಲಾಗಿದೆ. ಪೊಲೀಸರು 120ಕ್ಕೂ ಅಧಿಕ ಮಂದಿ ವಿರುದ್ಧ ಕೇಸುಗಳನ್ನು ದಾಖಲಿಸಿದ್ದರೂ ಸಹ ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ - ಪಾಸ್ತಿ ನಷ್ಟವಾಗಿರುವ ಸಂಬಂಧ ಸಾಕ್ಷ್ಯಾಧಾರಗಳಿಲ್ಲ. ಪೊಲೀಸರು ಯಾವುದೇ ವಸ್ತು ವಶಪಡಿಸಿಕೊಂಡಿಲ್ಲ ಎಂದು ಪೀಠ ತಿಳಿಸಿದೆ.

ಅಲ್ಲದೇ, ಭಾರತೀಯ ದಂಡ ಸಂಹಿತೆ ಸೆಕ್ಷನ್ 172 ರಿಂದ 188 ರವರೆಗೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆ ಉಲ್ಲಂಘಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಸಕ್ಷಮ ಪ್ರಾಧಿಕಾರ ದೂರು ದಾಖಲಿಸಿಲ್ಲ. ಜತೆಗೆ ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರಕ್ಕೆ ಸೀಲ್​ಡೌನ್ ಮಾಡಲು ಹೋದಾಗ 51 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು ಎಂದು ಹೇಳುತ್ತಾರೆ. ಆದರೆ, ಆ ಐವರು ಯಾರು ಎಂಬುದನ್ನು ಆರೋಪಪಟ್ಟಿಯಲ್ಲಿ ದಾಖಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಿಬಿಎಂಪಿ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್​ಡೌನ್ ಮಾಡಲು ಮುಂದಾದಾಗ ಅಲ್ಲಿನ ಜನರು ಹಾಲು, ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ತರಲು ತೊಂದರೆ ಆಗಬಹುದೆಂದು ಪ್ರತಿರೋಧ ಮಾಡಿರಬಹುದು, ಆಗ ಒಂದು ರೀತಿಯ ಬಿಗುವಿನ ವಾತಾವರಣ ನಿರ್ಮಾಣವಾಗಿರಬಹುದು, ಜತೆಗೆ ಮ್ಯಾಜಿಸ್ಟ್ರೇಟ್ ಐಪಿಸಿ ಸೆಕ್ಷನ್ 188ರಡಿ ಕಾಗ್ನಿಜೆನ್ಸ್ ತೆಗೆದುಕೊಳ್ಳಲು ನಿರ್ಬಂಧವಿದೆ. ಆದರೂ ಕಾಗ್ನಿಜೆನ್ಸ್ ತೆಗೆದುಕೊಂಡು ಮುಂದುವರಿದಿರುವುದು ಸರಿಯಲ್ಲ. ಹಾಗಾಗಿ, ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಲಾಗುವುದು ಎಂದು ಆದೇಶಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ್ದ ಎಸ್‌ಪಿಪಿ ಬಿ.ಎನ್. ಜಗದೀಶ್, 2020ರ ಏ.19ರಂದು ಸಂಜೆ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಕೊರೊನಾ ಸೋಂಕು ತಗುಲಿದ್ದ 58 ಮಂದಿಯನ್ನು ವಶಕ್ಕೆ ತೆಗೆದಕೊಳ್ಳಲು ಪಾದರಾಯನಪುರದಲ್ಲಿ ಹೋಗಿದ್ದಾಗ ಅಲ್ಲಿ ಅಕ್ರಮವಾಗಿ ಗುಂಪು ಗೂಡಿದ್ದವರು ಕೈಯಲ್ಲಿ ಚಾಕು, ದೊಣ್ಣೆ ಮತ್ತು ರಾಡ್‌ಗಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಅಲ್ಲದೇ, ಆರೋಪಿಗಳು ಚೇರು, ಟೇಬಲ್‌ಗಳನ್ನು ಒಡೆದು ಟೆಂಟ್ ಕಿತ್ತು ಹಾಕಿ, ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು. ಹಾಗಾಗಿ ಪ್ರಕರಣ ದಾಖಲಿಸಲಾಗಿತ್ತು ಎಂದು ತಿಳಿಸಿದ್ದರು.

ಅರ್ಜಿದಾರರ ಪರ ವಕೀಲರು, ಅರ್ಜಿದಾರರಿಗೂ ಪ್ರಕರಣಕ್ಕೂ ಸಂಬಂಧವಿಲ್ಲ, ಅವರ ಮನೆಗಳು ಬೇರೆ ಕಡೆ ಇವೆ. ನಿಜವಾದ ಆರೋಪಿಗಳನ್ನು ಗುರುತಿಸದೇ ಪೊಲೀಸರು ಸಿಕ್ಕ ಸಿಕ್ಕವರ ಮೇಲೆ ಕೇಸ್ ಹಾಕಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದಾಗ ಅವರಲ್ಲಿ ಸೋಂಕಿತರ ಪಟ್ಟಿಯೇ ಇರಲಿಲ್ಲ. ಗಲಭೆ ನಡೆದಿದೆ ಎನ್ನಲಾಗಿದೆ. ಆದರೆ, ಯಾರೊಬ್ಬರಿಗೂ ಗಾಯವಾಗಿಲ್ಲ. ಹಾಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.

ಇದನ್ನೂ ಓದಿ: ತೀವ್ರ ವಿವಾದಕ್ಕೀಡಾದ ಪಾದರಾಯನಪುರ ವಾರ್ಡ್ ರಸ್ತೆಗಳ ನಾಮಕರಣ ವಿಚಾರ : ಆಯುಕ್ತರಿಗೆ ಪತ್ರ ಬರೆದ ಅನಂತ್​ ಕುಮಾರ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.