ETV Bharat / state

ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ಗ್ರಾ.ಪಂ ಕಾರ್ಯದರ್ಶಿಗಳನ್ನು ನೇಮಿಸಿ ಸರ್ಕಾರ ಆದೇಶ - Birth death registrar

ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ತಿದ್ದುಪಡಿ ಮಾಡಿದೆ. ಹಾಗೆಯೇ 151 ಮಂದಿ ಜಿಲ್ಲಾ ತಾಂತ್ರಿಕ ಬೆಂಬಲ ಸಿಬ್ಬಂದಿಯ ನೇಮಕಾತಿಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಜ್ಜಾಗಿದೆ.

Etv Bharat
Etv Bharat
author img

By ETV Bharat Karnataka Team

Published : Mar 16, 2024, 10:14 AM IST

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಮರಣ ನೋಂದಣಿಯನ್ನು ಬಲಪಡಿಸುವ ಸಲುವಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಜನನ ಅಥವಾ ಮರಣ ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬದಲಾಗಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ತಿದ್ದುಪಡಿ ಮಾಡಲಾಗಿದೆ.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜನನ ಮರಣ ನೋಂದಣಿಯನ್ನು ಸುವ್ಯವಸ್ಥಿತವಾಗಿ ಹಾಗೂ ಉತ್ತಮವಾಗಿ ಅನುಷ್ಠಾನಗೊಳಿಸಲು ಎಲ್ಲಾ ಅವಶ್ಯಕ ಸೌಕರ್ಯ ಹೊಂದಿರುವ ಗ್ರಾ.ಪಂ ಕಚೇರಿಗಳು ಸಾರ್ವಜನಿಕರಿಗೆ ಹತ್ತಿರವಿರುವ ಜನಸ್ನೇಹಿ ಕೇಂದ್ರವಾಗಿರುತ್ತವೆ. ರಾಜ್ಯದ ಎಲ್ಲಾ ಗ್ರಾ.ಪಂ ಕಚೇರಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳು ಸೇವಾನಿರತವಾಗಿದ್ದು, ಈಗಾಗಲೇ 72 ಸೇವೆಗಳನ್ನು ಒದಗಿಸುತ್ತಿವೆ.

ಜನನ, ಮರಣ ನೋಂದಣಿಯ 73ನೇ ಸೇವೆಯಾಗಿದ್ದು, ಸಾರ್ವಜನಿಕರಿಗೆ ತ್ವರಿತ ಸೇವೆ ದೊರೆಯಲಿದೆ. ಇದರಿಂದಾಗಿ ಗ್ರಾಮೀಣ ಭಾಗಗಳಲ್ಲಿ ಶೇಕಡ 100ರಷ್ಟು ಜನನ, ಮರಣ ನೋಂದಣಿಯ ಗುರಿಯನ್ನು ಸಾಧಿಸಲು ಮತ್ತು ಕಾಯ್ದೆಯಲ್ಲಿ ನಿಗದಿಪಡಿಸಿರುವ ಕಾಲಮಿತಿಯೊಳಗೆ ಎಲ್ಲಾ ಜನನ ಮತ್ತು ಮರಣವನ್ನು ನೋಂದಾಯಿಸಲು ಸಾಧ್ಯವಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರತಿ ಹಳ್ಳಿಗೂ ನೀರು ಸರಬರಾಜು ಕಾರ್ಯಕ್ರಮ ಯಶಸ್ವಿಗೆ 151 ತಾಂತ್ರಿಕ ಬೆಂಬಲ ಸಿಬ್ಬಂದಿ ನೇಮಕ: 151 ಮಂದಿ ಜಿಲ್ಲಾ ತಾಂತ್ರಿಕ ಬೆಂಬಲ ಸಿಬ್ಬಂದಿಯ ನೇಮಕಾತಿಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಜ್ಜಾಗಿದೆ. ರಾಜ್ಯದಾದ್ಯಂತ ನೀರಿನ ಲಭ್ಯತೆ, ಗುಣಮಟ್ಟ ಮತ್ತು ಸುಸ್ಥಿರತೆಯನ್ನು ಸುಧಾರಿಸಲು ಹಾಗೂ 2024ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಗುರಿಯತ್ತ ಸಾಗಲು ನೆರವಾಗುವ ಸಲುವಾಗಿ ಪ್ರತಿ ಜಿಲ್ಲೆಯಲ್ಲೂ ತಾಂತ್ರಿಕ ಬೆಂಬಲ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.

ಜಿಲ್ಲಾ ತಾಂತ್ರಿಕ ಬೆಂಬಲ ಸಿಬ್ಬಂದಿಗಳಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಅವರು ಸೇವಾ ನಿಶ್ಚಯ ಪತ್ರಗಳನ್ನು ವಿತರಿಸಿದರು.

ಇದನ್ನೂ ಓದಿ: ಹಾಸನ ಗ್ರಾಮ ಪಂಚಾಯತ್​ನಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ವಿವರ

ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನವನ್ನು ಖಾತ್ರಿಪಡಿಸುವ ಪ್ರಕ್ರಿಯೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ತಾಂತ್ರಿಕ ಬೆಂಬಲ ಸಿಬ್ಬಂದಿಯನ್ನು ನಿಯೋಜಿಸುತ್ತಿರುವುದು ನೇಮಕಾತಿಯು ಒಂದು ಪ್ರಮುಖ ಅಂಶವಾಗಿದೆ. 31 ಜಿಲ್ಲೆಗಳಲ್ಲಿ 155 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯೊಂದಿಗೆ ಈ ಪ್ರಕ್ರಿಯೆ ಅಕ್ಟೋಬರ್ 2023ರಲ್ಲಿ ಪ್ರಾರಂಭವಾಯಿತು. ಒಟ್ಟು 1770 ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸ್ವೀಕರಿಸಲಾಯಿತಲ್ಲದೆ ತಾಂತ್ರಿಕ ಪರಿಣತಿ ಮತ್ತಿತರ ಕೌಶಲ್ಯಗಳಿಗೆ ಅನುಗುಣವಾಗಿ ನೇಮಕಾತಿಯನ್ನು ಅಂತಿಮಗೊಳಿಸಲಾಯಿತು. ನಿಖರವಾದ ವಿಧಾನಗಳನ್ನು ಅಳವಡಿಸಿಕೊಂಡು ಕಟ್ಟುನಿಟ್ಟಾದ ನೇಮಕಾತಿ ಪ್ರಕ್ರಿಯೆ ಮೂಲಕ ಅರ್ಹ ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಚಿವ ಖರ್ಗೆ ತಿಳಿಸಿದ್ದಾರೆ.

ಜಿಲ್ಲಾ ತಾಂತ್ರಿಕ ಬೆಂಬಲ ಘಟಕಗಳು ಗ್ರಾ.ಪಂ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ, ಸಾಮರ್ಥ್ಯ ವೃದ್ಧಿ ಮತ್ತು ಆರ್ಥಿಕ ಸುಸ್ಥಿರತೆ ಸೇರಿದಂತೆ ಕಾರ್ಯಕ್ರಮ ಅನುಷ್ಠಾನವನ್ನು ಸಂಘಟಿಸಲು ಸಹಾಯ ಮಾಡುತ್ತವೆ. ಕಾರ್ಯಕ್ರಮದ ಅನುಷ್ಠಾನವನ್ನು ವೇಗಗೊಳಿಸಲು ಮತ್ತು ಉತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಲು ಅವರು ಜಿಪಂ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಒದಗಿಸುತ್ತಾರೆ. ಈ ಕಾರ್ಯಕ್ರಮದ ಭಾಗವಾಗಿ, ಕರ್ನಾಟಕ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ವಾರ್ಷಿಕ 45 ಲಕ್ಷ ರೂ. ಖರ್ಚು ಮಾಡುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಒಟ್ಟು 13.95 ಕೋಟಿ ರೂ. ವೆಚ್ಚ ಮಾಡಲಾಗುವುದು. ಈ ಕಾರ್ಯಕ್ರಮವು 2023ರಿಂದ 2028ರ ವರೆಗೆ ಐದು ವರ್ಷಗಳ ಕಾಲಮಿತಿಯಲ್ಲಿ ರಾಜ್ಯದ ಎಲ್ಲಾ ಗ್ರಾಮಾಂತರ ಜಿಲ್ಲೆಗಳನ್ನು ಒಳಗೊಂಡಿದೆ.

2024ರ ವೇಳೆಗೆ ರಾಜ್ಯದ ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕ ಸರ್ಕಾರದ ಬದ್ಧತಾಪೂರ್ಣ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಶ್ವ ಬ್ಯಾಂಕ್‌ನಿಂದ 2904 ಕೋಟಿ ರೂಪಾಯಿಗಳ ಗಣನೀಯ ಪ್ರಮಾಣದ ಹಣಕಾಸಿನ ನೆರವನ್ನು ಪಡೆದು ʼಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಯೋಜನೆʼ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ.

ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮವನ್ನು ಪ್ರೋಗ್ರಾಂ-ಫಾರ್-ರಿಜಲ್ಟ್ಸ್ (ಪಿಎಪ್​ಆರ್​​ಆರ್) ಫೈನಾನ್ಸಿಂಗ್ ಅಡಿಯಲ್ಲಿ ಜಾರಿಗೆ ತರಲಾಗಿದ್ದು, ಸೂಚಕಗಳ ಆಧಾರಿತ ಫಲಿತಾಂಶಗಳ ಮೇಲೆ ವಿಶ್ವಬ್ಯಾಂಕ್‌ ಹಣಕಾಸು ಬಿಡುಗಡೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: KPSC ಕೆಪಿಎಸ್​ಸಿ ನೇಮಕಾತಿ: ಭೂ ಮಾಪಕರ ಹುದ್ದೆಗೆ ಅರ್ಜಿ ಸ್ವೀಕಾರ ಆರಂಭ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.