ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. 60 ವರ್ಷದ ಕೃಷ್ಣ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ 11 ಗಂಟೆಯ ಸುಮಾರಿಗೆ ಮೆಜೆಸ್ಟಿಕ್ ಬಸ್ ತಂಗುದಾಣದಲ್ಲಿ ಬಸ್ ಹತ್ತಿದ್ದ ಕೃಷ್ಣ, ಟಿಕೆಟ್ ಪಡೆದು ಕುಳಿತುಕೊಂಡು ಪ್ರಯಾಣಿಸುತ್ತಿದ್ದರು. ನವರಂಗ್ ಸಮೀಪ ಬರುವಾಗ ಏಕಾಏಕಿ ಹೃದಯಾಘಾತವಾಗಿ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಗಮನಿಸಿದ ಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದರು. ಬಸ್ ಸೀಟ್‌ನಲ್ಲಿ ಕುಳಿತ ಹದಿನೈದು ನಿಮಿಷದಲ್ಲೇ ಕೃಷ್ಣ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
ನವರಂಗ್ ಸಮೀಪ ಬಸ್ ಸಂಚರಿಸುತ್ತಿದ್ದಾಗ ಕೃಷ್ಣ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಬಸ್ನಲ್ಲಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಷ್ಟೊತ್ತಿಗಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ಮೃತನ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್ನಿಂದ ಹಲ್ಲೆ ಆರೋಪ: ಕಂಡಕ್ಟರ್ ವಿಚಾರಣಾ ಇತ್ಯರ್ಥ ಪೂರ್ವ ಅಮಾನತು - BMTC BUS CONDUCTOR