ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮುದಗಲ್ ಬಳಿ ಜರುಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
60ಕ್ಕೂ ಹೆಚ್ಚು ಪ್ರಯಾಣಿಕರನ್ನ ಹೊತ್ತುಕೊಂಡು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಬಸ್ ಕಡೆ ತೆರಳುತ್ತಿತ್ತು. ಬಸ್ನಲ್ಲಿ ಸುಮಾರ 33 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಚರಿಸಿದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಕಡೆ ಹೊರಟ್ಟಿದ್ದ ಮಾರ್ಗ ಮಧ್ಯೆ ಬಸ್‌ನ ಎಕ್ಸಲ್ ಕಟ್ ಆಗಿರುವ ಪರಿಣಾಮ ಈ ಘಟನೆ ಎಂದು ಪ್ರಾಥಮಿಕವಾಗಿ ತಿಳಿದಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ: ಬೈಕ್-ಸಾರಿಗೆ ಬಸ್ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು