ETV Bharat / state

ಪೆನ್‌ಡ್ರೈವ್ ಹಂಚಿಕೆ: ಪ್ರೀತಂಗೌಡ ವಿರುದ್ಧದ ತನಿಖೆಗೆ ಹೈಕೋರ್ಟ್ ಅನುಮತಿ, ಬಂಧಿಸದಂತೆ ನಿರ್ಬಂಧ - Pen Drive Sharing Case

ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧದ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿ, ಬಂಧಿಸದಂತೆ ನಿರ್ಬಂಧ ವಿಧಿಸಿದೆ.

ಪ್ರೀತಂಗೌಡ ವಿರುದ್ಧದ ತನಿಖೆಗೆ ಹೈಕೋರ್ಟ್ ಅನುಮತಿ
ಪ್ರೀತಂಗೌಡ ವಿರುದ್ಧದ ತನಿಖೆಗೆ ಹೈಕೋರ್ಟ್ ಅನುಮತಿ (ETV Bharat)
author img

By ETV Bharat Karnataka Team

Published : Jun 28, 2024, 5:04 PM IST

Updated : Jun 28, 2024, 8:14 PM IST

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತೆಯ ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್, ತನಿಖಾಧಿಕಾರಿಗಳು ತಮ್ಮ ವಿವೇಚನೆಯಂತೆ ಪ್ರಕರಣದ ತನಿಖೆ ನಡೆಸಬಹುದು. ಆದರೆ, ಬಂಧಿಸುವಂತಿಲ್ಲ ಎಂದು ತಿಳಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಪ್ರೀತಂಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಬೆಳಗ್ಗೆ 7ರಿಂದ ರಾತ್ರಿ 9 ಗಂಟೆಯತನಕ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಬಹುದು. ವಿಚಾರಣಾಧಿಕಾರಿಗಳು ಕರೆದಾಗೆಲ್ಲ ಹಾಜರಾಗಬೇಕು. ಈ ವೇಳೆ ಪೊಲೀಸರು ಅವರನ್ನು ಬಂಧಿಸುವಂತಿಲ್ಲ, ವಶಕ್ಕೆ ಪಡೆದುಕೊಳ್ಳುವಂತಿಲ್ಲ. ಆದರೆ, ತನಿಖೆಗೆ ಅಗತ್ಯವೆನಿಸಿದರೆ ಆರೋಪಿಗಳ ಮೊಬೈಲ್ ಫೋನ್ ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಬಹುದು ಎಂದೂ ಪೀಠ ತಿಳಿಸಿದೆ.

ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಹಾಗೂ ದೂರುದಾರೆಗೆ ನೋಟಿಸ್ ಜಾರಿ ಮಾಡಿ ಹೈಕೋರ್ಟ್ ವಿಚಾರಣೆ ಮುಂದೂಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಕಿರಣ್, ಶರತ್ ಹಾಗೂ ಪ್ರೀತಂಗೌಡ ವೈರಲ್ ಮಾಡಿಸುತ್ತಿದ್ದಾರೆ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ. ನಿರ್ದಿಷ್ಟವಾಗಿ ಅರ್ಜಿದಾರರೇ ಮಾಡಿದ್ದಾರೆ ಎಂದು ನೇರವಾಗಿ ಹೇಳಿಲ್ಲ. ಹಾಗಾಗಿ, ಈ ಪ್ರಕ್ರಿಯೆಯಲ್ಲಿ ಅರ್ಜಿದಾರರ ಪಾತ್ರವೂ ಇಲ್ಲ, ಅವರು ಭಾಗಿಯಾಗಿಯೂ ಇಲ್ಲ. ಇದೊಂದು ರಾಜಕೀಯ ಸೇಡು, ಅರ್ಜಿದಾರರನ್ನು ರಾಜಕೀಯವಾಗಿ ಬೇಟೆಯಾಡಲು ಈ ಪ್ರಕರಣವನ್ನು ಬಳಸಿಕೊಳ್ಳಲಾಗಿದೆ. ಇಂತಹದ್ದಕ್ಕೆಲ್ಲ ಕಡಿವಾಣ ಹಾಕಬೇಕು. ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಪ್ರಕರಣ ದಾಖಲಾಗಿ 20 ದಿನ ಆಗಿದೆ. ಈಗ ಅರ್ಜಿದಾರರು ಏಕಾಏಕಿ ನ್ಯಾಯಾಲಯದ ಮುಂದೆ ಬಂದಿರುವುದು ಅಚ್ಚರಿ ತಂದಿದೆ. ಈಗಷ್ಟೇ ಪ್ರಕರಣದ ದಾಖಲೆಗಳನ್ನು ನಮಗೆ ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ. ತನಿಖಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಆಕ್ಷೇಪಣೆ ಸಲ್ಲಿಸಬೇಕಿದೆ. ಮೊದಲು ಸರ್ಕಾರ, ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಯಾಗಲಿ, ಪ್ರತಿಕ್ರಿಯೆ ನೀಡಲು ಪ್ರಾಸಿಕ್ಯೂಷನ್ ಸಮರ್ಥವಾಗಿದೆ. ಇದು ರಾಜಕೀಯ ಸೇಡು ಎಂದು ಅರ್ಜಿದಾರರ ಪರ ವಕೀಲರು ಆರೋಪಿಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ರಾಜಕೀಯ ಸೇಡಿನ ಪ್ರಶ್ನೆ ಎಲ್ಲಿಂದ ಬರುತ್ತದೆ?. ಪ್ರಕರಣದ ತನಿಖೆ ನಡೆಯಬೇಕಿದೆ, ಹಾಗಾಗಿ, ಪ್ರಕರಣ ರದ್ದುಪಡಿಸುವುದಾಗಲಿ, ತಡೆ ನೀಡುವುದಾಗಲಿ ನ್ಯಾಯಾಲಯ ಮಾಡಬಾರದು ಎಂದು ಮನವಿ ಮಾಡಿದರು.

ಪ್ರಕರಣಕ್ಕೆ ತನಿಖೆಗೆ ತಡೆ ನೀಡಲು ಸಾಧ್ಯವಿಲ್ಲ. ತನಿಖಾಧಿಕಾರಿಗಳು ತಮ್ಮ ವಿವೇಚನೆಯಂತೆ ತನಿಖೆ ಮುಂದುವರಿಸಲಿ. ಆದರೆ, ಅರ್ಜಿದಾರರನ್ನು ಬಂಧಿಸುವುದಾಗಲಿ, ವಶಕ್ಕೆ ಪಡೆದುಕೊಳ್ಳುವುದಾಗಲಿ ಮಾಡಬಾರದು. ಅದೇ ರೀತಿ ವಿಚಾರಣೆಗೆ ಕರೆದಾಗ ಅರ್ಜಿದಾರರು ಹೋಗಬೇಕು ಎಂದು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಪೊಲೀಸ್ ರಾಜ್ಯ ಮಾಡ್ತೀರಾ ಹೇಗೆ?: ಪ್ರಕರಣದಲ್ಲಿ ಆರೋಪಿತರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಪ್ರಾಸಿಕ್ಯೂಷನ್ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಬಂಧಿಸಿಯೇ ವಿಚಾರಣೆಗೊಳಪಡಿಸಬೇಕು ಎಂಬ ಹಠ ಏಕೆ? ಹೀಗೆ ಎಲ್ಲಾ ಪ್ರಕರಣಗಳಲ್ಲಿ ಎಲ್ಲರನ್ನೂ ಬಂಧಿಸುತ್ತಾ ಹೋದರೆ ಹೇಗೆ? ನೀವೇನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದೀರಾ ಎಂದು ಸರ್ಕಾರವನ್ನು ಪ್ರಶ್ನಿಸಿತು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕರು, ತನಿಖೆ, ವಿಚಾರಣೆ ಹೇಗೆ ನಡೆಸಬೇಕು ಅನ್ನುವುದು ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟಿದ್ದು. ಯಾರನ್ನೂ ಬಂಧಿಸಬಾರದು ಎಂದು ನ್ಯಾಯಾಲಯ ಹೇಳುತ್ತಾ ಹೋದರೆ, ಪ್ರಕರಣದ ತನಿಖೆ ನಡೆಸುವುದು ಹೇಗೆ, ನ್ಯಾಯಾಲಯದ ಈ ರೀತಿಯ ಮಧ್ಯಪ್ರವೇಶ ಸಮಂಜಸವಲ್ಲ ಎಂದರು. ಆಗಲಿ, ವಿಶೇಷ ಸರ್ಕಾರಿ ಅಭಿಯೋಜಕರ ಅಸಮಾಧಾನವನ್ನು ನ್ಯಾಯಾಲಯ ದಾಖಲಿಸಿಕೊಳ್ಳಲಿದೆ ಎಂದಷ್ಟೇ ನ್ಯಾಯಪೀಠ ಹೇಳಿತು.

ಸರ್ಕಾರದಲ್ಲಿದ್ದವರೇ ಪೆನ್‌ಡ್ರೈವ್ ಹಂಚಿದ್ರಾ?: ವಿಚಾರಣೆ ವೇಳೆ ಪ್ರೀತಂಗೌಡ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಅರ್ಜಿದಾರರು ವೈರಲ್ ಮಾಡಿಸಿದ್ದಾರೆ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ ಎಂಬ ಸಂತ್ರಸ್ತೆಯ ಹೇಳಿಕೆ ಆಧರಿಸಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಸಿಕೊಳ್ಳಲಾಗಿದೆ. ಹಾಗಾದರೆ, ಸರ್ಕಾರದಲ್ಲಿ ಇದ್ದವರೇ 3 ಲಕ್ಷ ಪೆನ್‌ಡ್ರೈವ್‌ಗಳನ್ನು ಖರೀದಿಸಿ ಅವುಗಳನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ಹಂಚಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಹಾಗಂತ ಸರ್ಕಾರದಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತೀರಾ ಎಂದು ಸರ್ಕಾರಿ ಅಭಿಯೋಜಕರನ್ನು ಪ್ರಶ್ನಿಸಿದರು. ಇಂತಹ ರಾಜಕೀಯ ಪ್ರೇರಿತ ವಾದಗಳಿಗೆ ಉತ್ತರಿಸಲು ನಮಗೂ ಬರುತ್ತದೆ ಎಂದು ಸರ್ಕಾರಿ ಅಭಿಯೋಜಕರು ಹೇಳಿದರು. ನೀವು (ವಕೀಲರು) ಇಂತಹ ಮಾತುಗಳನ್ನು ಆಡಿಕೊಳ್ಳಬಹುದು. ಆದರೆ, ನಮಗೆ (ಜಡ್ಜ್) ಕೆಲವು ಮಿತಿಗಳಿವೆ ಎಂದು ನ್ಯಾಯಪೀಠ ತಿಳಿಸಿತು.

ಇದನ್ನೂ ಓದಿ: ಪೆನ್​ಡ್ರೈವ್ ಹಂಚಿಕೆ ಆರೋಪ: ಪ್ರಜ್ವಲ್ ರೇವಣ್ಣ, ಪ್ರೀತಂ ಗೌಡ ವಿರುದ್ಧ ಎಫ್ಐಆರ್ - Preetham Gowda

Last Updated : Jun 28, 2024, 8:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.