ETV Bharat / state

ವಾಹನ‌ ಸವಾರರೇ ಎಚ್ಚರ! ಅರಣ್ಯದ ಹೆದ್ದಾರಿಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ಇದ್ರೆ ಬೀಳಲಿದೆ ದಂಡ - PENALTY FOR PLASTIC

ಅರಣ್ಯದೊಳಗೆ ಸಾಗುವ ಮಾರ್ಗದಲ್ಲಿ 2 ಹಂತದ ತಪಾಸಣೆ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸುವಂತೆ ಸಚಿವ ಈಶ್ವರ್​ ಖಂಡ್ರೆ ಸೂಚಿಸಿದ್ದಾರೆ.

Minister Ishwar Khandre meeting with officials
ಅಧಿಕಾರಿಗಳ ಜೊತೆಗೆ ಸಚಿವ ಈಶ್ವರ್​ ಖಂಡ್ರೆ ಸಭೆ (ETV Bharat)
author img

By ETV Bharat Karnataka Team

Published : Jan 19, 2025, 8:22 PM IST

ಚಾಮರಾಜನಗರ: ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಚಮಚ ಇತ್ಯಾದಿ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ತಡೆಯಲು ಅರಣ್ಯದೊಳಗೆ ಸಾಗುವ ಮಾರ್ಗದಲ್ಲಿ 2 ಹಂತದ ತಪಾಸಣೆ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸುವಂತೆ ಅರಣ್ಯ ಸಚಿವ ಈಶ್ವರ್​ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಂಡೀಪುರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೇರಳ ಮತ್ತು ತಮಿಳುನಾಡು ಸಂಪರ್ಕ ಕಲ್ಪಿಸುವ ಕೆಕ್ಕನಹಳ್ಳ, ಮೂಲೆಹೊಳೆ, ಮದ್ದೂರು ಗೇಟ್, ಮೇಲುಕಾಮನಹಳ್ಳಿ ಗೇಟ್ ಬಳಿ ಪ್ರತಿ ನಿತ್ಯ 30-35 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಆಗುತ್ತಿದೆ. ಪ್ರತಿ ವರ್ಷ ಈ ನಾಲ್ಕು ತಪಾಸಣಾ ಕೇಂದ್ರಗಳಲ್ಲಿ ಸುಮಾರು 11 ರಿಂದ 12 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬ ಮಾಹಿತಿ ಇದೆ. ಅರಣ್ಯ ಸಿಬ್ಬಂದಿ ಕಾಡಿನಲ್ಲಿ ಇಳಿದು ಪ್ಲಾಸ್ಟಿಕ್ ಸಂಗ್ರಹಿಸುವಾಗ ವನ್ಯಜೀವಿ ದಾಳಿ ಮಾಡುವ, ಹಾವು ಕಚ್ಚುವ ಅಪಾಯ ಇರುತ್ತದೆ. ಹೀಗಾಗಿ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ದ್ವಾರದಲ್ಲೇ ತಡೆಯುವ ವ್ಯವಸ್ಥೆ ಮಾಡಿ ಎಂದರು.

Minister Ishwar Khandre meeting with officials
ಅಧಿಕಾರಿಗಳ ಜೊತೆಗೆ ಸಚಿವ ಈಶ್ವರ್​ ಖಂಡ್ರೆ ಸಭೆ (ETV Bharat)

ಅರಣ್ಯದೊಳಗೆ ಹಾದು ಹೋಗುವ ಹೆದ್ದಾರಿಗಳಲ್ಲಿ, ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ 2 ಹಂತದ ತಪಾಸಣೆ ವ್ಯವಸ್ಥೆ ಜಾರಿ ಮಾಡಿ, ಮೊದಲ ಹಂತದಲ್ಲಿ ಒಂದು ದೊಡ್ಡ ಬುಟ್ಟಿ ಇಟ್ಟು ಏಕ ಬಳಕೆ ಪ್ಲಾಸ್ಟಿಕ್ ಬಾಟಲಿ, ಲೋಟ, ತಟ್ಟೆ, ಕ್ಯಾರಿ ಬ್ಯಾಗ್ ಅನ್ನು ಅದರಲ್ಲಿ ಸ್ವಯಂ ಪ್ರೇರಿತವಾಗಿ ಹಾಕಲು ವಾಹನದಲ್ಲಿರುವವರಿಗೆ ತಿಳಿಸಿ. ನಂತರ ಎರಡನೇ ಹಂತದಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಇದ್ದರೆ ದಂಡ ವಿಧಿಸಿ ಎಂದು ಸೂಚಿಸಿದರು.

ಬೇಸಿಗೆಯಲ್ಲಿ ನೀರಿನ ಕೊರತೆ ಬಾರದಂತೆ ಕ್ರಮ ವಹಿಸಿ: ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಉತ್ತಮವಾಗಿದ್ದರೂ, ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬರುವ ಬೇಸಿಗೆಯಲ್ಲಿ ಅರಣ್ಯದೊಳಗೆ ನೀರು ಮತ್ತು ಮೇವಿನ ಕೊರತೆ ಆಗದಂತೆ ಈಗಿನಿಂದಲೇ ಕ್ರಮ ವಹಿಸಿ, ನೀರು ಗುಂಡಿಗಳಲ್ಲಿ ನೀರು ಸಂಗ್ರಹಣೆಗೆ ಆದ್ಯತೆ ನೀಡಿ. ಅಗತ್ಯಬಿದ್ದರೆ ಕೊಳವೆ ಬಾವಿಗಳಿಗೆ ಸೌರ ವಿದ್ಯುತ್ ಪಂಪ್ ಅಳವಡಿಸಿ ನೀರು ಹರಿಸಿ ಎಂದು ಸೂಚಿಸಿದರು.

ಲಂಟನಾ, ಸೆನ್ನಾ ಕಳೆಗಳು ವ್ಯಾಪಕವಾಗಿ ಬೆಳೆಯುತ್ತಿದ್ದು, ಇದರಿಂದ ಸಸ್ಯಹಾರಿ ಪ್ರಾಣಿಗಳಿಗೆ ಮೇವಿನ ಕೊರತೆ ಆಗುತ್ತಿದೆ. ಈ ಕಳೆ ತೆಗೆಯಲು ಸಮಗ್ರ ಯೋಜನೆ ರೂಪಿಸಿ, ಪರಿಹಾರ ಕಂಡು ಹಿಡಿಯಿರಿ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ರೈತರ ಅಹವಾಲು ಆಲಿಸಿದ ಸಚಿವರು, ಕಾನೂನಿನ ಚೌಕಟ್ಟಿನೊಳಗೆ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ಇದನ್ನೂ ಓದಿ: ಹೆಚ್​​ಎಂಟಿ ವಶದಲ್ಲಿರುವ 14,300 ಕೋಟಿ ಬೆಲೆಯ ಅರಣ್ಯ ಭೂಮಿ ಹಿಂಪಡೆಯಲು ಕ್ರಮ: ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.