ETV Bharat / state

ಕಪಿಲಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣ: ನಂಜನಗೂಡು ಕಪಿಲಾ ಸ್ನಾನ ಘಟ್ಟಕ್ಕೆ ಪ್ರವೇಶ ನಿರ್ಬಂಧ - water level Increase in Kapila - WATER LEVEL INCREASE IN KAPILA

ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ನದಿ ಸ್ನಾನಘಟಕ್ಕೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.

ಕಪಿಲಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣ
ಕಪಿಲಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣ (ETV Bharat)
author img

By ETV Bharat Karnataka Team

Published : Jul 16, 2024, 6:18 PM IST

ಮೈಸೂರು: ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸುವ ಭಕ್ತರು ಕಪಿಲಾ ನದಿಯ ಸ್ನಾನಘಟ್ಟಕ್ಕೆ ತೆರಳದಂತೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.

ಮೈಸೂರು ನಂಜನಗೂಡು ಮುಖ್ಯ ರಸ್ತೆಯ ನೂರು ವರ್ಷಗಳ ಹಳೆಯ ದೇವರಾಜ ಅರಸು ಸೇತುವೆ ಮೂಲಕ ಬಾರಿ ಪ್ರಮಾಣದ ನೀರು ಹರಿಯ ತೊಡಗಿದೆ. ಈಗಾಗಲೇ ಕಬಿನಿ ನಾಲೆಯಿಂದ ಒಟ್ಟಾರೆಯಾಗಿ ಕಪಿಲ ನದಿಗೆ 36,000 ಕ್ಯೂಸಕ್​ ನೀರು ಹರಿ ಬಿಡಲಾಗಿದೆ. ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ, ನಂಜುಂಡೇಶ್ವರನ ದೇವಾಲಯದ ಸ್ನಾನಘಟ್ಟ, ಹದಿನಾರು ಕಾಲು ಮಂಟಪ ಭಾಗಶಃ ಮುಳುಗಡೆಯಾಗಿವೆ. ಹಾಗಾಗಿ ಭಕ್ತರು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.

ದೇವಾಲಯದ ಹಿಂಬದಿಯಲ್ಲಿರುವ ತಗ್ಗು ಪ್ರದೇಶಗಳಾದ ತೋಪಿನ ಬೀದಿ, ಒಕ್ಕಲ ಗೇರಿ, ಹಳ್ಳದ ಕೇರಿ, ರಾಯರ ಮಠ, ಸೇರಿದಂತೆ ಸಾಕಷ್ಟು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ನೇತೃತ್ವದಲ್ಲಿ ಅಧಿಕಾರಿಗಳ ತಂಡ ತಗ್ಗು ಪ್ರದೇಶದ ಜನ ವಸತಿ ಪ್ರದೇಶಕ್ಕೆ ತೆರಳಿ ಎಚ್ಚರಿಕೆ ನೀಡಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುವ ಕಾರಣ ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ. ಜನ ಜಾನುವಾರುಗಳೊಂದಿಗೆ ಸುರಕ್ಷಿಯ ಸ್ಥಳಗಳಿಗೆ ಸ್ಥಳಾಂತರವಾಗುವಂತೆ ಸೂಚಿಸಿದ್ದಾರೆ.

ಶಾಸಕ ದರ್ಶನ್ ದ್ರುವ ನಾರಾಯಣ್​ ಕೂಡು ಸಂಬಂಧಪಟ್ಟ ಅಧಿಕಾರಿಗಳು ಬೊಕ್ಕಳ್ಳಿ, ಹೆಜ್ಜೆಗೆ, ಹುಲ್ಲಹಳ್ಳಿ, ಮಹದೇವತಾತ ಗದ್ದಿಗೆಯ ಸಂಗಮ ಸೇರಿದಂತೆ ಕಪಿಲಾ ನದಿಯ ಹಂಚಿನಲ್ಲಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸ್ಪಷ್ಟ ಮಾಹಿತಿ ಕಲೆ ಹಾಕಿ ಜನ ಜಾನವಾರುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸೂಚಿಸಿದ್ದಾರೆ.

ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಆತಂಕ ಸೃಷ್ಟಿಯಾದರೇ ಯಾವುದೇ ಜೀವ ಹಾನಿ ಸಂಭವಿಸದ ಹಾಗೆ ಜನ ಮತ್ತು ಜಾನುವಾರುಗಳನ್ನು ಸಂರಕ್ಷಣೆ ಮಾಡಲು ಗಂಜಿ ಕೇಂದ್ರಗಳನ್ನ ತೆರೆಯಲಾಗುವುದು. ಸಂಕಷ್ಟದಲ್ಲಿರುವ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತಾಲೂಕು ಆಡಳಿತ ಸಿದ್ಧವಾಗಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ತಿಳಿಸಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ ಏಳು ಜನರ ದಾರುಣ ಸಾವು, ಮುಂದುವರಿದ ಕಾರ್ಯಾಚರಣೆ - hill collapsed

ETV Bharat Logo

Copyright © 2024 Ushodaya Enterprises Pvt. Ltd., All Rights Reserved.