ETV Bharat / state

ರಾಮನಗರದಲ್ಲಿ ಬಾಲಕಿ ಅಪಹರಣ ಯತ್ನ; ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟ ಜನ - Girl Kidnap Attempt - GIRL KIDNAP ATTEMPT

ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದ ಆರೋಪಿಯನ್ನು ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಏಳು ವರ್ಷದ ಬಾಲಕಿ ಅಪಹರಣ ಯತ್ನ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ, ಕ್ರಮ ಕೈಗೊಂಡಿದ್ದಾರೆ.

kidnap case
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Sep 9, 2024, 3:34 PM IST

ರಾಮನಗರ: ಪುಟ್ಟ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಚಾಮುಂಡಿಪುರ ಲೇಔಟ್​​ನಲ್ಲಿ ಭಾನುವಾರ ರಾತ್ರಿ ನಡೆದಿದೆ. ದರ್ಶನ್​ ಬಂಧಿತ ಆರೋಪಿ. ಈತ ಏಳು ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾನೆ.

ಆರೋಪಿಯು​ ಬಾಲಕಿಯ ಪಕ್ಕದ ಮನೆಯವನಾಗಿದ್ದು,​ ​ಅಪಹರಿಸಿ ಎರಡು ಲಕ್ಷ ರೂ.ಗಳಿಗೆ ಬೇಡಿಕೆ ಇಡಲು ಯೋಚಿಸಿದ್ದ ಎನ್ನಲಾಗಿದೆ. ಕಳೆದ ರಾತ್ರಿ 9 ಗಂಟೆಯ ಸುಮಾರಿಗೆ ಬಾಲಕಿ ಗಣೇಶ ಪೆಂಡಾಲ್​ ಬಳಿ ಇದ್ದಳು. ಈ ಸಮಯದಲ್ಲಿ ಅಲ್ಲಿಗೆ ಬಂದ ದರ್ಶನ್, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಕೈ ಮತ್ತು ಬಾಯಿಗೆ ಟೇಪ್ ಸುತ್ತಿ ಅಪಹರಣಕ್ಕೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ಮಗಳು ಕಾಣದಿದ್ದಾಗ ತಂದೆ ಸಂತೋಷ್​ ಗಾಬರಿಗೊಂಡು ಹುಡುಕಾಡಲು ಆರಂಭಿಸಿದ್ದರು. ಈ ವಿಚಾರವನ್ನು ಗಣೇಶ ಪೆಂಡಾಲ್​ ಬಳಿ ಇದ್ದ ಯುವಕರಿಗೂ ತಿಳಿಸಿದ್ದಾರೆ. ಈ ವೇಳೆ ಯುವಕರು ಹುಡುಕಾಟ ಆರಂಭಿಸಿದ್ದು, ಹೆದರಿದ ದರ್ಶನ್ ಬಾಲಕಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಲು ಯತ್ನಿಸಿದ್ದ. ಕೂಡಲೇ ಯುವಕರು ಬಾಲಕಿಯ ಕೈ ಮತ್ತು ಬಾಯಿಗೆ ಹಚ್ಚಿದ್ದ ಟೇಪ್​ ತೆಗೆದು ರಕ್ಷಿಸಿದ್ದಾರೆ.

ಆರೋಪಿ ದರ್ಶನ್​ನನ್ನು ಹಿಡಿದ ಯುವಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿರುವ ರಾಮನಗರದ ಐಜೂರು ಠಾಣೆ ಪೊಲೀಸರು, ಪ್ರಕರಣ ದಾಖಲಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಾತ್ರೆ ಕೊಡಲು ಬಂದ ಬಾವನ ಇರಿದು ಕೊಂದ ಬಾಮೈದ - Bengaluru Murder Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.