ETV Bharat / state

ಗ್ಯಾರಂಟಿಗಳ ಫಲದಿಂದ ನಾಡಿನ ಜನರು ನಮ್ಮ ಕೈ ಬಿಡಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವ ವಿಶ್ವಾಸವಿದೆ. ನಮ್ಮ ಗ್ಯಾರಂಟಿಗಳಿಂದಾಗಿ ನಾಡಿನ ಜನರು, ಮಹಿಳೆಯರು ನಮ್ಮ ಕೈ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Etv Bharat
Etv Bharat
author img

By ETV Bharat Karnataka Team

Published : Mar 22, 2024, 7:29 AM IST

ಬೆಂಗಳೂರು: ನಮಗೆ ಲೋಕಸಭೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಉತ್ತಮ ಅವಕಾಶವಿದೆ. ಹೀಗಾಗಿ ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿ ಎಂದು ಕೈ ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಹಾರೈಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಅಭ್ಯರ್ಥಿಗಳ ಸಭೆ ನಡೆಯಿತು.

ವಿಧಾನಸಭೆ ಚುನಾವಣೆಯಲ್ಲಿ ನಾವು 136 ಸ್ಥಾನ ಗೆಲ್ಲುತ್ತೇವಿ ಎಂದು ಯಾರೂ ಹೇಳಿರಲಿಲ್ಲ. ಆದರೆ ನನಗೆ ವೈಯಕ್ತಿಕವಾಗಿ ಜನರ ಭಾವನೆ ಗೊತ್ತಿತ್ತು. ಹೀಗಾಗಿ 135 ಗೆದ್ದೇ ಗೆಲ್ತೀವಿ ಎಂದು ನಾವು ಧೈರ್ಯವಾಗಿ ಚುನಾವಣೆಗೆ ಮೊದಲೇ ಹೇಳಿದ್ದೆವು. ಲೋಕಸಭೆಯಲ್ಲೂ ನಮಗೆ 20 ಸ್ಥಾನದವರೆಗೂ ಖಚಿತವಾಗಿ ಗೆಲ್ಲುವ ಅವಕಾಶಗಳಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮಾತ್ರವಲ್ಲ, ದೇಶದ ನಾನಾ ಕಡೆಗಳಲ್ಲಿ ಬಿಜೆಪಿ ವಿರುದ್ಧದ ಅಲೆ ತೀವ್ರವಾಗಿದೆ. ದೇಶದ ಭವಿಷ್ಯಕ್ಕೆ ಈ ಸರ್ಕಾರ ಬದಲಾಗಲೇಬೇಕಿದೆ ಎನ್ನುವ ಅಭಿಪ್ರಾಯ ವಿದ್ಯಾವಂತ ಸಮುದಾಯದಲ್ಲಿದೆ. ಹೀಗಾಗಿ ನಾವು 20 ಸ್ಥಾನ ಗೆಲ್ಲಬಹುದು. ಅಂಡರ್ ಕರೆಂಟ್ ಏನಿದೆ ಎನ್ನುವುದು ನಮಗೆ ಗೊತ್ತಾಗಿದೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆ

ನಮ್ಮ ಗ್ಯಾರಂಟಿಗಳ ಬಗ್ಗೆ ನಾಡಿನ ಜನತೆಗೆ, ನಮ್ಮ ಹೆಣ್ಣು ಮಕ್ಕಳಿಗೆ, ತಾಯಂದಿರಿಗೆ ಧನ್ಯತೆ ಇದೆ. ಇವರ್ಯಾರೂ ನಮ್ಮ ಕೈ ಬಿಡಲ್ಲ. ಪ್ರತೀ ದಿನ ಪ್ರತೀ ತಿಂಗಳು ನಾಡಿನ ಮನೆ ಮನೆಗೆ ಸರ್ಕಾರದ ಗ್ಯಾರಂಟಿಗಳ ಫಲ ಹೆಣ್ಣು ಮಕ್ಕಳ ಮಡಿಲು ಸೇರುತ್ತಿದೆ. ಈ ಧನ್ಯತೆ ನಮ್ಮ ನಾಡಿನ ತಾಯಂದಿರು ಮತ್ತು ಹೆಣ್ಣು ಮಕ್ಕಳ ಹೃದಯದಲ್ಲಿದೆ. ಇವರಿಗೆ ಕೈ ಮುಗಿದು ಮತ ಕೇಳಿ ಎಂದು ಅಭ್ಯರ್ಥಿಗಳಿಗೆ ಸಲಹೆ ನೀಡಿದರು.

ಸಿಎಂ ನೀಡಿದ ಸಲಹೆ, ಸೂಚನೆಗಳೇನು?: ಪ್ರತೀ ಮತದಾರರನ್ನೂ ತಲುಪಲು ಪ್ಲಾನ್ ಮಾಡಿ. ಕೇಂದ್ರ ಸರ್ಕಾರದ ಸುಳ್ಳು, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವ ಬಿಜೆಪಿ ಷಡ್ಯಂತ್ರವನ್ನು ಜನರಿಗೆ ಸಮಾಧಾನದಿಂದ ಮನವರಿಕೆ ಮಾಡಿಸಿ. ದೇಶದ ಪ್ರಜಾತಂತ್ರ ಉಳಿವಿಗೆ-ಭವಿಷ್ಯದ ಭಾರತಕ್ಕಾಗಿ ಜನ ಮೋದಿ ಸರ್ಕಾರವನ್ನು ಬದಲಾಯಿಸುತ್ತಾರೆ. ನಾವು-ನೀವು ಗಟ್ಟಿಯಾಗಿ ಜನರ ನಡುವೆ ನಿಲ್ಲೋಣ ಎಂದರು.

ಕಾರ್ಯಕರ್ತರನ್ನು, ಸ್ಥಳೀಯ ಮುಖಂಡರನ್ನು ಮಾತಾಡಿಸಿ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪ್ರತಿಷ್ಠೆ ಬೇಡ. ಎಲ್ಲಾ ರೀತಿಯ ಅಧಿಕಾರ ದುರುಪಯೋಗ ಮಾಡಿ ನಮಗೆ ತೊಂದರೆ ಕೊಡುತ್ತಾರೆ. ನಾವು ಎದೆಗಾರಿಕೆಯಿಂದ ಎದುರಿಸಿ ಜನರಿಂದ ಶಕ್ತಿ ಪಡೆದುಕೊಳ್ಳಬೇಕು.‌ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ವೈಜ್ಞಾನಿಕವಾಗಿ ಪ್ರಚಾರ ಮಾಡಿ ಅರ್ಥಪೂರ್ಣವಾಗಿ ಚುನಾವಣೆ ನಡೆಸೋಣ ಎಂದು ಸೂಚಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಹಿಂದಿರುವ “ದುಷ್ಟ ಶಕ್ತಿ’’ ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ: ಸಿಎಂ ಸಿದ್ದರಾಮಯ್ಯ - CM siddaramaiah DEMAND

ಸಭೆಯಲ್ಲಿ ಬಾಗಲಕೋಟೆ ಅಭ್ಯರ್ಥಿ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮನ್ಸೂರ್ ಅಲಿ ಖಾನ್, ಧಾರವಾಡ ಅಭ್ಯರ್ಥಿ ವಿನೋದ್ ಅಸೂಟಿ, ಚಿತ್ರದುರ್ಗದ ಚಂದ್ರಪ್ಪ, ಉಡುಪಿ ಚಿಕ್ಕಮಗಳೂರು ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ತುಮಕೂರು ಅಭ್ಯರ್ಥಿ ಮುದ್ದಹನುಮೇಗೌಡ, ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್, ಬಳ್ಳಾರಿಯ ಹಿರಿಯ ಶಾಸಕರಾದ ಈ.ತುಕಾರಾಂ, ರಾಯಚೂರು ಅಭ್ಯರ್ಥಿ ಕುಮಾರನಾಯ್ಕ್, ಬೆಂಗಳೂರು ದಕ್ಷಿಣದ ಅಭ್ಯರ್ಥಿ ಸೌಮ್ಯ ರೆಡ್ಡಿ, ಉತ್ತರ ಕನ್ನಡ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ಮಂಡ್ಯ ಅಭ್ಯರ್ಥಿ ವೆಂಕಟರಮಣೇಗೌಡ, ಮೈಸೂರು ಅಭ್ಯರ್ಥಿ ಲಕ್ಷ್ಮಣ್, ಬೆಂಗಳೂರು ಉತ್ತರದ ಅಭ್ಯರ್ಥಿ ರಾಜೀವ್ ಗೌಡ, ಬೀದರ್ ಅಭ್ಯರ್ಥಿ ಸಾಗರ್ ಖಂಡ್ರೆ, ಬೆಳಗಾವಿ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಸೇರಿ ಹಲವರು ಉಪಸ್ಥಿತರಿದ್ದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಂತೋಷ್ ಎಸ್.ಲಾಡ್, ತಿಮ್ಮಾಪುರ, ಜಮೀರ್ ಅಹಮದ್ ಖಾನ್, ಎಂ.ಸಿ.ಸುಧಾಕರ್, ಶರಣಪ್ರಕಾಶ್ ಪಾಟೀಲ್, ಹೆಚ್.ಕೆ.ಪಾಟೀಲ್, ಕೆ.ಎನ್.ರಾಜಣ್ಣ, ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವಾನಂದ ಪಾಟೀಲ್, ಡಿ.ಸುಧಾಕರ್, ರಹೀಂ ಖಾನ್, ಮಂಕಾಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಪಕ್ಷದ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕರಾದ ಶಿವಲಿಂಗೇಗೌಡ, ಚನ್ನರಾಜು ಸೇರಿ ಹಲವು ನಾಯಕರು ಇದ್ದರು.

ಇದನ್ನೂ ಓದಿ: ರಾಜ್ಯದ 17 ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳು ಪ್ರಕಟ; ಐವರು ಸಚಿವರ ಮಕ್ಕಳಿಗೆ ಟಿಕೆಟ್; ಸುರಪುರ ವಿಧಾನಸಭೆ ಉಪಚುನಾವಣೆಗೂ ಅಭ್ಯರ್ಥಿ ಘೋಷಣೆ - Lok Sabha Elections

ETV Bharat Logo

Copyright © 2024 Ushodaya Enterprises Pvt. Ltd., All Rights Reserved.