ETV Bharat / state

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ 7 ಮಂದಿ ದೋಷಿ, ಇಂದು ಶಿಕ್ಷೆ ಪ್ರಕಟ - MLA SATISH SAIL

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್​ ಸೈಲ್​ ಅವರು ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ಅವರನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

mla-satish-sail
ಸತೀಶ್ ಸೈಲ್, ಕೋರ್ಟ್​ (ETV Bharat)
author img

By ETV Bharat Karnataka Team

Published : Oct 24, 2024, 9:58 PM IST

ಬೆಂಗಳೂರು: ಕಾರವಾರದ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಗಳಾದ ಶಾಸಕ ಸತೀಶ್ ಸೈಲ್ ಸೇರಿ ಇತರರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 'ದೋಷಿ' ಎಂದು ಆದೇಶಿಸಿದೆ. ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಶುಕ್ರವಾರ (ಅ.25) ಪ್ರಕಟಿಸಲಿದೆ.

ಕಾರವಾರದ ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ ಇತರರು ದೋಷಿ ಎಂದು ನ್ಯಾ.ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಅಪರಾಧಿಗಳನ್ನು ವಶಕ್ಕೆ ಪಡೆಯುವಂತೆ ಕೋರ್ಟ್​​ ಸೂಚಿಸಿದೆ. ಈ ಬೆನ್ನಲ್ಲೇ ಶಾಸಕರನ್ನು ತನಿಖಾಧಿಕಾರಿಗಳು ಬಂಧಿಸಿದ್ದಾರೆ.

ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್, ಬಂದರು ಅಧಿಕಾರಿ ಮಹೇಶ್ ಬಿಳಿಯ, ಲಾಲ್ ಮಹಲ್ ಕಂಪನಿಯ ಮಾಲೀಕ ಪ್ರೇಮ್ ಚಂದ್ ಗರ್ಗ್, ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ ಖಾರದಪುಡಿ ಮಹೇಶ್, ಸ್ವಸ್ತಿಕ್ ಕಂಪನಿ ಮಾಲೀಕ ಕೆ.ವಿ.ನಾಗರಾಜ್, ಗೋವಿಂದರಾಜು, ಆಶಾಪುರ ಕಂಪನಿ ಮಾಲೀಕ ಚೇತನ್ ಇವರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಿದರು.

ಪ್ರಕರಣದ ಹಿನ್ನೆಲೆ: ಅಕ್ರಮ ಗಣಿಗಾರಿಕೆ ಮೂಲಕ ವಿದೇಶಕ್ಕೆ ಸಾಗಿಸಲು ಕಾರವಾರದ ಬೇಲೆಕೇರಿ ಬಂದರಿಯಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ಸಂಗ್ರಹಿಸಲಾಗಿತ್ತು. ಇದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದರು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಅವರು ಇದನ್ನು ವಿದೇಶಕ್ಕೆ ಸಾಗಾಟ ಮಾಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕ 6 ಪ್ರಕರಣಗಳು ದಾಖಲಾಗಿದ್ದವು. ಲೋಕಾಯುಕ್ತ ಮತ್ತು ಸಿಬಿಐ ತನಿಖೆ ನಡೆಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದವು.

ನ್ಯಾ.ಸಂತೋಷ್ ಗಜಾನನ ಭಟ್ ಅವರು ಪ್ರಕರಣದ ವಾದ- ಪ್ರತಿವಾದ ಆಲಿಸಿ, ಶಾಸಕ ಸತೀಶ್ ಸೈಲ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದಾರೆ. ಶುಕ್ರವಾರ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದ್ದು, ಜೈಲಿಗೆ ಕಳುಹಿಸುವ ಸಾಧ್ಯತೆಯಿದೆ. ಶಿಕ್ಷೆಯ ಪ್ರಮಾಣ ಎಷ್ಟು ಯಾವ ಮಾನದಂಡದ ಮೇಲೆ ಶಿಕ್ಷೆ ನೀಡಲಾಗುತ್ತದೆ ಎಂಬುದು ಕೋರ್ಟ್ ಆದೇಶದ ನಂತರ ತಿಳಿಯಲಿದೆ.

ಜಪ್ತಿ ಆಗಿದ್ದ ಅದಿರು ಸಾಗಾಟ: 2010ರಲ್ಲಿ ಬಳ್ಳಾರಿಯಿಂದ ಮ್ಯಾಂಗನೀಸ್ ಸಾಗಾಟ ಮಾಡಿ ಕಾರವಾರ ಬಂದರು ಮೂಲಕ ವಿದೇಶಕ್ಕೆ ರಫ್ತು ಮಾಡಲಾಗುತ್ತಿತ್ತು ಎಂದು ಆರೋಪ ಮಾಡಲಾಗಿತ್ತು. ಅಂದಿನ ಲೋಕಾಯುಕ್ತ ನ್ಯಾ.ಎನ್.ಸಂತೋಶ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಹಗರಣವನ್ನು ಬೆಳಕಿಗೆ ತಂದಿದ್ದರು. ಈ ವರದಿ ಅನ್ವಯ 2006-07 ಮತ್ತು 2010-11ರ ನಡುವೆ 7.74 ಮಿಲಿಯನ್ ಟನ್ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗಿತ್ತು. ಇದರಿಂದ ಸರ್ಕಾರದ ಖಜಾನೆಗೆ ಭಾರಿ ನಷ್ಟ ಉಂಟಾಗಿತ್ತು. ಇದೇ ವೇಳೆ, ಲೋಕಾಯುಕ್ತ ಎಸ್‌ಐಟಿ ಮತ್ತು ಸಿಬಿಐ ಅಧಿಕಾರಿಗಳು ಪ್ರತ್ಯೇಕ ತನಿಖೆ ನಡೆಸಿದ್ದರು.

ವಿದೇಶಕ್ಕೆ ಸಾಗಾಟಕ್ಕೆ ಸಂಗ್ರಹಿಸಿದ್ದ 11,312 ಮೆಟ್ರಿಕ್ ಟನ್‌ ಅನ್ನು ಅರಣ್ಯಾಧಿಕಾರಿಗಳು ಜಪ್ತಿ ಮಾಡಿದ್ದರು. ಆದರೂ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮೂಲಕ ಅನುಮತಿ ಇಲ್ಲದೆ ವಿದೇಶಕ್ಕೆ ಸಾಗಾಟ ಮಾಡಲಾಗಿತ್ತು ಎಂದು 6 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಶಾಸಕರ ವಿರುದ್ಧ ಅಪರಾಧಿಕ ಒಳಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಆರೋಪ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಸಿಬಿಐ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿತ್ತು. 2013ರ ಸೆಪ್ಟೆಂಬರ್ ಸಿಬಿಐ ಸತೀಶ್ ಸೈಲ್ ಅವರನ್ನು ಬಂಧಿಸಿದ್ದು, ನಂತರ ಅವರು ಜಾಮೀನಿನ ಮೇಲೆ ಹೊರ ಬಂದಿದ್ದರು.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಕಂಪನಿ ಮಾಜಿ ಉದ್ಯೋಗಿಗೆ ಸಾಕ್ಷಿಯಾಗಲು ನೀಡಿದ್ದ ಅನುಮತಿ ಎತ್ತಿ ಹಿಡಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.