ETV Bharat / state

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ: ಈ ಎಲ್ಲಾ ಷರತ್ತುಗಳು ಅನ್ವಯ - Ganesha enshrine in idgah Maidan - GANESHA ENSHRINE IN IDGAH MAIDAN

ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಈ ಸಂಬಂಧ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನ
ಹುಬ್ಬಳ್ಳಿ ಈದ್ಗಾ ಮೈದಾನ (ETV Bharat)
author img

By ETV Bharat Karnataka Team

Published : Sep 4, 2024, 3:25 PM IST

ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ (ETV Bharat)

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅನುಮತಿ ನೀಡಿದೆ. ಕುರಿತು ಹುಬ್ಬಳ್ಳಿಯ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದು, ಮೂರು ದಿನಗಳ ಕಾಲ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.

ಮೂರು ದಿನಗಳ ಕಾಲ ಪಾಲಿಕೆ ಒಡೆತನದ (ಸಿಟಿಎಸ್ ನಂ.174) ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಗಣೇಶ ಪ್ರತಿಷ್ಠಾಪನೆಗೆ ಷರತ್ತು ಹಾಕಲಾಗಿದೆ. ಈ ವರ್ಷ ಗಣೇಶ ಪ್ರತಿಷ್ಠಾಪನೆಗೆ 4 ರಿಂದ 5 ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಆದರೆ ಈ ಹಿಂದೆ ಎರಡು ಬಾರಿ ಗಣೇಶಮೂರ್ತಿ ಪ್ರತಿಷ್ಠಾಪಿಸಿದ್ದ ನ್ಯಾಯವಾದಿ ಸಂಜಯ ಬಡಸ್ಕರ ಅಧ್ಯಕ್ಷರಾಗಿರುವ ಮಹಾಮಂಡಳಕ್ಕೆ ಷರತ್ತು ವಿಧಿಸಿ ಅನುಮತಿ ನೀಡಲಾಗಿದೆ.

ಷರತ್ತುಗಳು ಏನು?:
ಸಂಘಟನೆ ಪಾಲಿಕೆ ವಿಧಿಸುವ ಕರಾರುಗಳಿಗೆ ಬದ್ಧರಾಗಿರಬೇಕು.

  • ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮುನ್ನ ಕಡ್ಡಾಯವಾಗಿ ಪಾಲಿಕೆ ಮತ್ತು ಪೊಲೀಸ್ ಆಯುಕ್ತರ ಅನುಮತಿ ಪಡೆದುಕೊಳ್ಳಬೇಕು.
  • ಸೆ.7ರಂದು ಬೆಳಗ್ಗೆ 06:00 ಗಂಟೆಯಿಂದ 08:00 ಗಂಟೆಯೊಳಗೆ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಸೆ.9ರಂದು
    ಮಧ್ಯಾಹ್ನ 12:00 ಗಂಟೆಯ ಒಳಗಾಗಿ ಗಣೇಶ ನಿಮಜ್ಜನ ಮಾಡಬೇಕು.
  • 30 ಅಡಿ ಉದ್ದ, 30 ಅಡಿ ಅಗಲಕ್ಕೆ ಮೀರದಂತೆ ಹಾಗೂ ಪಾಲಿಕೆ/ಪೊಲೀಸ್/ಕಂದಾಯ ಅಧಿಕಾರಿಗಳು ಸೂಚಿಸುವ ಜಾಗದಲ್ಲಿ ಮಾತ್ರ ಪೆಂಡಾಲ್​ ಹಾಕಬೇಕು.
  • ಸದರಿ ಜಾಗದಲ್ಲಿ ಯಾವುದೇ ಖಾಯಂ ಕಟ್ಟಡ ನಿರ್ಮಿಸಬಾರದು.
  • ಉತ್ಸವ ಮೂರ್ತಿಯ ಹೊರತಾಗಿ ಯಾವುದೇ ರೀತಿಯ ಬಾವುಟಗಳು ಹಾಗೂ ಇತರೆ ಮೈದಾನದ ಭಾಗದಲ್ಲಿ ಯಾವುದೇ ರೀತಿಯ ವಿವಾದಿತ ಹಾಗೂ ಪ್ರಚೋದನಕಾರಿ ಫೋಟೋಗಳನ್ನು, ಭಿತ್ತಿಪತ್ರ, ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಅಳವಡಿಸಕೂಡದು ಹಾಗೂ ಪ್ರದರ್ಶಿಸಕೂಡದು. ಯಾವುದೇ ಪ್ರಚೋದನಕಾರಿ ಹಾಡುಗಳನ್ನು ಹಾಕಬಾರದು ಹಾಗೂ ಡಿಜೆ ಅಥವಾ ಇತರೆ ಕರ್ಕಶ ಧ್ವನಿವರ್ಧಕಗಳನ್ನು ಉಪಯೋಗಿಸುವಂತಿಲ್ಲ.
  • ಯಾವುದೇ ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮ ಕೈಗೊಳ್ಳಲು/ಆಯೋಜಿಸಲು ಅವಕಾಶ ಇರುವುದಿಲ್ಲ.
  • ಗಣೇಶ ಚತುರ್ಥಿಯ ಉತ್ಸವ ಆಚರಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲ ಗಲಭೆಗಳಿಗೆ ಅವಕಾಶಗಳನ್ನು ನೀಡಕೂಡದು. ಸಾರ್ವಜನಿಕರ ವಿರೋಧಗಳಿಗೆ ಮತ್ತು ಪ್ರತಿಭಟನೆಗಳಿಗೆ ಪ್ರಚೋದನೆಯನ್ನು ನೀಡುವಂತೆ ಆಯೋಜಿಸಬಾರದು.
  • ಸಾರ್ವಜನಿಕ ಗಣೇಶ ಉತ್ಸವ ಆಚರಣೆಗಾಗಿ ಪೆಂಡಾಲ್‌ಗಳಲ್ಲಿ ಯಾವುದೇ ವಾಣಿಜ್ಯ ಹಾಗೂ ಇನ್ನಿತರ ಜಾಹೀರಾತುಗಳನ್ನು ಹಾಕುವಂತಿಲ್ಲ.
  • ಈ ಸಂಧರ್ಭದಲ್ಲಿ ಸಾರ್ವಜನಿಕ ಶಾಂತಿಯನ್ನು ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡು ಹೋಗುವ ಭರವಸೆಯನ್ನು ಸಮಾರಂಭದ ಆಯೋಜಕರು ನೀಡಬೇಕು ಹಾಗೂ ಯಾವುದೇ ಪರಿಸ್ಥಿತಿಯಲ್ಲಿ ಅನಾವಶ್ಯಕವಾಗಿ ಗಲಭೆಗಳು, ಗಲಾಟೆಗಳು ಉಂಟಾಗಿ ಸಾರ್ವಜನಿಕರ ಸ್ವಸ್ಥತೆಗೆ ಮತ್ತು ಆಸ್ತಿ ಪಾಸ್ತಿಗಳಿಗೆ ಹಾನಿಯಾದ ಸಂಧರ್ಭದಲ್ಲಿ ಸಂಪೂರ್ಣ ಜವಾಬ್ದಾರಿಯನ್ನು ಸಮಾರಂಭದ ಆಯೋಜಕರು ವಹಿಸಿಕೊಂಡು ಮುಂದಿನ ಯಾವುದೇ ಕಾನೂನು ರೀತಿಯ ಕ್ರಮಗಳನ್ನು ಒಪ್ಪಿಕೊಂಡು ತನ್ಮೂಲಕ ಉಂಟಾಗುವ ಹಾನಿಯ ಮೊತ್ತವನ್ನು ಭರಿಸುವುದಾಗಿ ಘೋಷಿಸಿ ಲಿಖಿತವಾಗಿ ಪ್ರಮಾಣವನ್ನು ಸಲ್ಲಿಸಬೇಕು.
  • ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಸೂಚಿಸಿದಂತೆ ಗಣೇಶ ಮೆರವಣಿಗೆ ಮಾರ್ಗಕ್ಕೆ ಬದ್ಧರಾಗಿರತಕ್ಕದ್ದು ಹಾಗೂ ಸದರಿ ಮೆರವಣಿಗೆಯನ್ನು ಒಂದು ಗಂಟೆಯ ಒಳಗೆ ಮುಕ್ತಾಯಗೊಳಿಸಿ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಸೂಚಿಸಿದ ಸ್ಥಳದಲ್ಲಿ ಗಣೇಶ ನಿಮಜ್ಜನ ಮಾಡತಕ್ಕದ್ದು.
  • ಸಮಾರಂಭವನ್ನು ಆಚರಿಸಿದ ನಂತರದಲ್ಲಿ ಪಾಲಿಕೆಯ ಸ್ಥಳವನ್ನು ತೆರವುಗೊಳಿಸಿ ಮತ್ತು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮಹಾನಗರ ಪಾಲಿಕೆಗೆ ವರದಿಯನ್ನು ನೀಡಬೇಕು.
  • ಕಾಲಕಾಲಕ್ಕೆ ಮಾನ್ಯ ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯ ನೀಡುವ ಆದೇಶ ಹಾಗೂ ಸೂಚನೆಗಳಿಗೆ ಬದ್ಧರಾಗಿರಬೇಕು.
  • ಪೊಲೀಸ್ ಇಲಾಖೆಯಿಂದ ಭದ್ರತೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡತಕ್ಕದ್ದು
  • ಗಣೇಶ ಮೂರ್ತಿ ಪ್ರತಿಷ್ಠಾಪನೆ ಪಾಲಿಕೆ, ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ಸೂಚಿಸುವ ಜಾಗದಲ್ಲಿ ಹಾಗೂ ವಿಧಿಸುವ ಮಾನದಂಡಗಳಿಗೆ ಅನುಗುಣವಾಗಿ ಮಾತ್ರ ಆಚರಿಸಬೇಕು.
  • ಸರ್ಕಾರದ ಮತ್ತು ಇತರೆ ಇಲಾಖೆಗಳ ಇನ್ನಿತರ ಕರಾರುಗಳು ಅನ್ವಯಿಸುತ್ತವೆ.
  • ಈದ್ಗಾ ಮೈದಾನದ ಆವರಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಪಟಾಕಿ ಹಾಗೂ ಇತರೆ ಸಿಡಿಮದ್ದುಗಳನ್ನು ಬಳಸಬಾರದು.
  • ಯಾವುದೇ ರೀತಿಯ ಪ್ರಚೋದನಾಕಾರಿ ಹೇಳಿಕೆ ಹಾಗೂ ಭಾಷಣ ಮಾಡಕೂಡದು.
  • ಅನ್ಯ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಯಾವುದೇ ಕಾರ್ಯಕ್ರಮಗಳನ್ನು ಅಥವಾ ಧಾರ್ಮಿಕ ಚಟುವಟಿಕೆಗಳನ್ನು ಮಾಡಬಾರದು.
    ಈ ಕುರಿತಂತೆ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿ, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಸೂಕ್ತ ಭದ್ರತೆ ಒದಗಿಸಲಾಗುವುದು. ಪೊಲೀಸ್ ಇಲಾಖೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಂಡಿದ್ದು, ಕಾನೂನು ‌ಉಲ್ಲಂಘನೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ದರ್ಶನ್​ ಇರುವ ಸೆಲ್​ಗೆ ಹಳೇ ಟಿವಿಯನ್ನೇ ರಿಪೇರಿ ಮಾಡಿ ನೀಡಲು ತಯಾರಿ - Darshan

ETV Bharat Logo

Copyright © 2025 Ushodaya Enterprises Pvt. Ltd., All Rights Reserved.