ETV Bharat / state

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ - SUICIDE AFTER DOUBLE MURDER

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

murder
ನಿರ್ಮಾಣ ಹಂತದ ಕಟ್ಟಡ (ETV Bharat)
author img

By ETV Bharat Karnataka Team

Published : Oct 17, 2024, 11:32 AM IST

Updated : Oct 17, 2024, 12:45 PM IST

ಬೆಂಗಳೂರು: ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಹತ್ಯೆ ಮಾಡಿ, ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡಾವಣೆಯಲ್ಲಿರುವ ನಿರ್ಮಾಣ ಹಂತದ ‌ಕಟ್ಟಡವೊಂದರಲ್ಲಿ ನಡೆದಿದೆ.

ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆಗೈದು ಲಕ್ಷ್ಮಿ (33) ಹಾಗೂ ಗಣೇಶ್ ಕುಮಾರ್ (20) ಎಂಬಾತನನ್ನು ಕೊಲೆ ಮಾಡಲಾಗಿದೆ. ಅಲ್ಲಿಯೇ, ಗೊಲ್ಲಬಾಬು (41) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶ ಮೂಲದವರಾದ ಮೂವರೂ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದರು. ಪತ್ನಿ ಲಕ್ಷ್ಮಿ ಸಂಬಂಧ ಹೊಂದಿರುವ ಕುರಿತು ಗೊಲ್ಲಬಾಬು ಅನುಮಾನ ಹೊಂದಿದ್ದ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಮಾಹಿತಿ (ETV Bharat)

ಬುಧವಾರ ರಾತ್ರಿ ಲಕ್ಷ್ಮಿ ಹಾಗೂ ಗಣೇಶ್ ಕುಮಾರ್ ಜೊತೆಗಿರುವುದನ್ನು ಕಣ್ಣಾರೆ ಕಂಡ ಗೊಲ್ಲಬಾಬು, ಇಬ್ಬರನ್ನೂ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ನಂತರ ಲಕ್ಷ್ಮಿಯ ಸಹೋದರಿಗೆ ಕರೆ ಮಾಡಿ ಹತ್ಯೆಯ ವಿಚಾರವನ್ನು ತಿಳಿಸಿ, ತಾನೂ ಸಾಯುವುದಾಗಿ ಹೇಳಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಕೊಣನಕುಂಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾವೇರಿ: ಸೀಗೆ ಹುಣ್ಣಿಮೆ ಸಂಭ್ರಮ ಕಿತ್ತುಕೊಂಡ ಮಳೆ; ನೀರಿನಲ್ಲಿ ಕೊಚ್ಚಿಹೋದ ಬಾಲಕ

Last Updated : Oct 17, 2024, 12:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.