ETV Bharat / state

ಮೈಸೂರು ದಸರಾ: ಪ್ರಾಣಿ ಪ್ರಿಯರ ಗಮನ ಸೆಳೆದ ಮುದ್ದು ಮುದ್ದಾದ ಶ್ವಾನಗಳು - Dog show - DOG SHOW

ದಸರಾ ಅಂಗವಾಗಿ ಜೆ.ಕೆ. ಮೈದಾನದಲ್ಲಿ ನಡೆದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ 45 ತಳಿಯ 480 ಅಧಿಕ ಶ್ವಾನಗಳು ಭಾಗವಹಿಸಿದ್ದವು.

ಪ್ರಾಣಿ ಪ್ರಿಯರ ಗಮನ ಸೆಳೆದ ಮುದ್ದು ಮುದ್ದಾದ ಶ್ವಾನಗಳು
ಪ್ರಾಪ್ರಿಯರ ಗಮನ ಸೆಳೆದ ಮುದ್ದು ಮುದ್ದಾದ ಶ್ವಾನಗಳು (ETV Bharat)
author img

By ETV Bharat Karnataka Team

Published : Oct 6, 2024, 3:56 PM IST

Updated : Oct 6, 2024, 5:16 PM IST

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಜೆ.ಕೆ ಮೈದಾನದಲ್ಲಿ 'ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆ' ನಡೆಯಿತು. ದೇಶ-ವಿದೇಶದ ಶ್ವಾನಗಳು ತಮ್ಮ ತುಂಟಾಟ, ಓಡಾಟದ ಮೂಲಕ ಪ್ರಾಣಿ ಪ್ರಿಯರ ಗಮನ ಸೆಳೆದವು.

ಸ್ಪರ್ಧೆಯಲ್ಲಿ ಜರ್ಮನ್ ಶೆಫರ್ಡ್, ಟಿಬೆಟಿಯನ್ ಮಸ್ಟಿಫ್, ಇಂಡಿಯನ್ ಮಸ್ಟಿಫ್, ಡಾಬರ್ ಮ್ಯಾನ್, ಮುಧೋಳ್, ಸಿಬೇರಿಯನ್ ಹಸ್ಕಿ, ಐರಿಷ್ ಶೆಟ್ಟರ್, ಅಕಿಟಾ, ಲೆಬ್ರಡರ್ ಲ್ಯಾಬ್ರಡರ್, ಪೂಡ್ಲೆ, ಡಾಗೋ ಅರ್ಜೆಂಟೈನಾ, ಗ್ರೇಟ್ ಡೇನ್, ಪೋಮೋರಿಯನ್, ರಾಜ ಪಲ್ಯಮ್, ಪಿಟ್ ಬುಲ್ ಹಾಗೂ ಗೋಲ್ಡನ್ ರಿಟ್ರೀವರ್, ಕಾಕರ್ ಸ್ಫ್ಯಾನಿಯಲ್, ಅಮೆರಿಕನ್​ ಬುಲ್ಲಿ, ಬಾಕ್ಸರ್, ಬೀಗಲ್, ಫ್ರೆಂಡ್ಸ್ ಬುಲ್ ಡಾಗ್, ಚೌಚೌ, ಪಗ್, ಡಚ್ ಶೆಫರ್ಡ್, ಟಿಬೇಟಿಯನ್ ಸ್ಫ್ಯಾನಿಯಲ್, ರಾಟ್ ವಿಲ್ಲರ್, ಸೈಂಟ್ ಬೆರ್ನಾರ್ಡ್, ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.

ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆ (ETV Bharat)

ಈ ಬಾರಿಯ ದಸರಾದಲ್ಲಿ ವಿಶೇಷತೆ: ಕಳೆದ ಬಾರಿ ದಸರಾದಲ್ಲಿ ಸುಮಾರು 20 ರಿಂದ 25 ಶ್ವಾನ ತಳಿಗಳು ಮಾತ್ರ ನೋಂದಣಿಯಾಗಿದ್ದವು. ಈ ಬಾರಿಯ ದಸರಾದಲ್ಲಿ 45 ತಳಿಗಳು ಪ್ರದರ್ಶನದಲ್ಲಿ ನೋಂದಣಿಯಾಗಿವೆ. ಅದರಲ್ಲಿ ಪ್ರಮುಖವಾಗಿ 12 ತಳಿಗಳು ದೇಶಿಯದ್ದಾಗಿದ್ದು, ಉಳಿದ ಎಲ್ಲಾ ತಳಿಗಳು ವಿದೇಶಿಯದ್ದಾಗಿವೆ.

ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಭಾಗಿ: ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರು ಮಾತನಾಡಿ, ಮುದ್ದು ಪ್ರಾಣಿಗಳು ನಮ್ಮ ಮಕ್ಕಳಿದ್ದಂತೆ. ಅವುಗಳನ್ನು ನಾವು ಪ್ರೀತಿಯಿಂದ ನೋಡಿಕೊಳ್ಳಬೇಕು. ಅನಾರೋಗ್ಯಕ್ಕೆ ತುತ್ತಾಗಿರುವ ಹಾಗೂ ಗಾಯಗೊಂಡ ಎಷ್ಟೋ ಬೀದಿ ಶ್ವಾನಗಳಿವೆ. ನಮ್ಮ ಮಕ್ಕಳೊಂದಿಗೆ ಅವುಗಳ ಆರೈಕೆಗೆ ಮುಂದಾಗಬೇಕು. ಇಂತಹ ಶ್ವಾನಗಳ ಪ್ರದರ್ಶನದಿಂದ ಮಕ್ಕಳಲ್ಲಿ ಪ್ರಾಣಿಗಳ ಬಗ್ಗೆ ಪ್ರೀತಿ ಹೆಚ್ಚಾಗುತ್ತದೆ ಎಂದರು.

ಸ್ಪರ್ಧೆಯಲ್ಲಿ ಸುಧಾಮೂರ್ತಿಯವರ ಮುದ್ದಾದ ಗೋಪಿ ಶ್ವಾನ ಪಾಲ್ಗೊಂಡು ಬಹುಮಾನ ಪಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉತ್ತಮ ಹಾಗೂ ಮೂಲ ತಳಿಗಳ ಶ್ವಾನಗಳನ್ನು ಶ್ವಾನ ವೈದ್ಯಾಧಿಕಾರಿಗಳು ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿದಂತಹ ತೀರ್ಪುಗಾರರಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು.

ಈ ಪ್ರದರ್ಶನದಲ್ಲಿ ಭಾಗಿವಹಿಸಿದ್ದ ವಿವಿಧ ತಳಿಯ ಶ್ವಾನಗಳ ಬಗ್ಗೆ ಜನರು ಮಾಹಿತಿ ಪಡೆದರು. ಸ್ಪರ್ಧೆಯಲ್ಲಿ 45 ತಳಿಯ 480ಕ್ಕೂ ಅಧಿಕ ಶ್ವಾನಗಳು ಭಾಗವಹಿಸಿದ್ದವು.

ಇದನ್ನೂ ಓದಿ: ಯುವದಸರಾಗೆ ಇಂದು ಅಶ್ವಿನಿ ಪುನೀತ್ ರಾಜ್‌ಕುಮಾರ್​ ಚಾಲನೆ, ಶ್ರೇಯಾ ಘೋಷಲ್​ ಗಾನಸುಧೆ - Yuva Dasara

Last Updated : Oct 6, 2024, 5:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.