ETV Bharat / state

ಕೊಡವರಿಗೆ ಪ್ರತ್ಯೇಕ ಸ್ಥಾನ ಕೋರಿರುವ ಅರ್ಜಿಗೆ ಆಕ್ಷೇಪಿಸಿ ಎಸ್ಸಿ-ಎಸ್ಟಿ ಬುಡಕಟ್ಟು ಸಮುದಾಯಗಳಿಂದ ಅರ್ಜಿ - High Court - HIGH COURT

ಕೊಡವರಿಗೆ ಪ್ರತ್ಯೇಕ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕವಾಗಿ ಸ್ವಯಂ ರಾಜಕೀಯ ನಿರ್ಣಯಗಳ ಹಕ್ಕು ನೀಡುವ ಸಂಬಂಧ ಸಲ್ಲಿಕೆಯಾದ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ.

high-court
ಹೈಕೋರ್ಟ್‌
author img

By ETV Bharat Karnataka Team

Published : Apr 1, 2024, 7:38 PM IST

ಬೆಂಗಳೂರು : ಕೊಡವರಿಗೆ ಪ್ರತ್ಯೇಕ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕವಾಗಿ ಸ್ವಯಂ ರಾಜಕೀಯ ನಿರ್ಣಯಗಳ ಹಕ್ಕು ನೀಡುವ ಸಂಬಂಧ ಸಲ್ಲಿಸಲಾಗಿರುವ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಕೊಡಗು ಜಿಲ್ಲೆಯ ಮೂಲನಿವಾಸಿ ಎಸ್ಸಿ, ಎಸ್ಟಿ, ಬುಡಕಟ್ಟು ಹಾಗೂ ಆದಿವಾಸಿ ಸಮುದಾಯಗಳು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿವೆ.

ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಲ್ಲಿಸಿರುವ ಮನವಿ ಪರಿಗಣಿಸಬೇಕು ಹಾಗೂ ಈ ಸಂಬಂಧ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಸುವ ಪ್ರತ್ಯೇಕ ಆಯೋಗ ರಚಿಸಲು ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಅದರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಧ್ಯಂತರ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಹಾಜರಾಗಿ, ''ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಾಡಲಾಗಿರುವ ಮನವಿ ಪರಿಗಣಿಸಲ್ಪಟ್ಟರೆ ಅದು ಇಡೀ ಜಿಲ್ಲೆಯ ಮೂಲನಿವಾಸಿ ಬುಡಕಟ್ಟು ಜನಾಂಗಗಳ ಬದುಕು ಮತ್ತು ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಇದು ಸಾರ್ವಜನಿಕ ಹಿತಾಸಕ್ತ ಅರ್ಜಿ ಆಗಿದ್ದರೂ, ಒಂದು ಸೀಮಿತ ಜಾತಿಗೆ ಲಾಭವನ್ನುಂಟು ಮಾಡಲಿದೆ. ಅರ್ಜಿದಾರರ ಮನವಿ ಪ್ರತ್ಯೇಕ ರಾಜ್ಯದ ಬೇಡಿಕೆಯ ಸ್ವರೂಪದ್ದಾಗಿದೆ. ಮೂಲ ಅರ್ಜಿಯಲ್ಲಿನ ಬೇಡಿಕೆಗಳು ಇಡೀ ಕೊಡಗು ಜಿಲ್ಲೆಯ ಜನತೆ, ಅದರಲ್ಲೂ ವಿಶೇಷವಾಗಿ ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.30ರಷ್ಟು ಇರುವ ಎಸ್ಸಿ-ಎಸ್ಟಿ, ಆದಿವಾಸಿ, ಬುಡಕಟ್ಟು, ಒಬಿಸಿ ವರ್ಗಗಳ ಮೇಲೆ ಪರಿಣಾಮ ಉಂಟು ಮಾಡಲಿದೆ. ಆದ್ದರಿಂದ ಮಧ್ಯಂತರ ಅರ್ಜಿ ವಿಚಾರಣೆಗೆ ಅಂಗೀಕರಿಸಿ, ನಮ್ಮ ಅಹವಾಲು ಆಲಿಸಬೇಕು'' ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರ ಸುಬ್ರಮಣಿಯನ್ ಸ್ವಾಮಿ, ''ಸಂವಿಧಾನದತ್ತ ಅವಕಾಶವಾಗಿರುವ ಪ್ರತ್ಯೇಕ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕವಾಗಿ ಸ್ವಯಂ ರಾಜಕೀಯ ನಿರ್ಣಯಗಳ ಹಕ್ಕು ನೀಡಬೇಕು ಎಂಬುದಷ್ಟೇ ನಮ್ಮ ಬೇಡಿಕೆಯಾಗಿದೆ. ಪ್ರತ್ಯೇಕ ರಾಜ್ಯದ ಬೇಡಿಕೆ ಖಂಡಿತ ನಮ್ಮದಲ್ಲ. ಈ ವಿಚಾರದಲ್ಲಿ ಕೊಡಗಿನವರ ಬಗ್ಗೆ ಕಪೋಲಕಲ್ಪಿತ ಸುದ್ದಿಗಳನ್ನು ಹರಿಯಬಿಡಲಾಗುತ್ತಿದೆ'' ಎಂದರು.

ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಪೀಠ, ಮಧ್ಯಂತರ ಅರ್ಜಿ ವಿಚಾರಣೆಗೆ ಅಂಗೀಕರಿಸಿದರೆ ವಿಷಯವನ್ನು ಇನ್ನಷ್ಟು ವಿಸ್ತೃತವಾಗಿ ಪರಾಮರ್ಶಿಸುವ ಅವಕಾಶಗಳು ಸಿಕ್ಕಂತಾಗುವುದಿಲ್ಲವೇ ಎಂದು ಪ್ರಶ್ನಿಸಿತು. ಅದಕ್ಕೆ ಮಧ್ಯಂತತರ ಅರ್ಜಿ ಪರಿಗಣಿಸುವುದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದರು. ಆಗ ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಪೀಠ, ಮೂಲ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮಧ್ಯಂತರ ಅರ್ಜಿದಾರರಿಗೆ ಮತ್ತು ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮೂಲ ಅರ್ಜಿದಾರರಿಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

ಮೂಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಕ್ಷೇಪಿಸಿ ಕೊಡಗು ಜಿಲ್ಲೆಯ ಮೂಲ ನಿವಾಸಿ ಎಸ್ಸಿ-ಎಸ್ಟಿ, ಬುಡಕಟ್ಟು, ಆದಿವಾಸಿ, ಒಬಿಸಿ ಸಮುದಾಯಗಳನ್ನು ಪ್ರತಿನಿಧಿಸುವ ಜಿಲ್ಲೆಯ ಕೊಡವ ಬೋಣಿಪಟ್ಟ ಸಮಾಜ, ಕೂಯ್ಯುವ ಸಮಾಜ, ಅಖಿಲ ಕೊಡಗು ಪಣಿಕ ಸಮಾಜ, ಸವಿತ ಸಮಾಜ ಕೈಕೇರಿ, ಕೊಡಗು ಬಣ್ಣ ಸಮಾಜ, ಕೊಡಗು ಕೊಡವ ಮಡಿವಾಳ ಸಮಾಜ, ಕೊಲೆಯ ಸಮಾಜ, ಕೊಡಗು ಜಿಲ್ಲಾ ಕೆಂಬಟ್ಟ ಅಭಿವೃದ್ಧಿ ಸಮಾಜ, ಕೊಡಗು ಹೆಗ್ಗಡೆ ಸಂಘ ಮತ್ತು ಸಮಾಜ, ಕೊಡಗು ಜಿಲ್ಲಾ ಗೊಲ್ಲ ಸಮಾಜ ಸೇರಿದಂತೆ 10 ಸಂಘ-ಸಂಸ್ಥೆಗಳು ಹೈಕೋರ್ಟ್ ಮೆಟ್ಟಿಲೇರಿವೆ.

ಇದನ್ನೂ ಓದಿ: ಲೋಕಾಯುಕ್ತಕ್ಕೆ ಸರ್ಕಾರಿ ನೌಕರರ ವಿಚಾರಣೆಗೆ ಹೊಣೆ ವಹಿಸುವಂತೆ ನಿರ್ದೇಶನ ನೀಡುವ ಅಧಿಕಾರವಿಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.