ETV Bharat / state

ಮಹಿಳೆಯರಿಗೆ ಅವಮಾನ ಆರೋಪ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ಗೆ ಅರ್ಜಿ - High Court

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನಿಂದಿಸುವ ಭರದಲ್ಲಿ ಮಹಿಳೆಯರಿಗೆ ಅವಮಾನ ಮಾಡಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

PIL AGAINST RAHUL GANDHI
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Jul 30, 2024, 11:51 AM IST

Updated : Jul 30, 2024, 12:05 PM IST

ಬೆಂಗಳೂರು: ಹಲವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹಾಸನದ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಮಾನ ಹಾನಿಯಾಗುವಂತೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಚಿ.ನಾ.ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.

ಈ ಅರ್ಜಿಯಲ್ಲಿ ರಾಹುಲ್ ಗಾಂಧಿ, ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ದ್ವೇಷ ಭಾಷಣದ ಮೂಲಕ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿರುವ, ಸಂವಿಧಾನ ಮತ್ತು ಭಾರತೀಯ ಮಹಿಳೆಯರಿಗೆ ಒದಗಿಸಿರುವ ಸಾಂವಿಧಾನಿಕ ರಕ್ಷಣೆಗೆ ಅವಿಧೇಯತೆ ತೋರಿರುವ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡುವ ಮೂಲಕ ಅವರಿಗೆ ಅವಮಾನ, ನೋವು, ವೇದನೆ ಉಂಟು ಮಾಡಿರುವ ಅಸಾಂವಿಧಾನಿಕ ಭಾಷಣಕ್ಕೆ ರಾಹುಲ್ ಬೇಷರತ್ ಕ್ಷಮೆ ಕೋರಲು ಆದೇಶಿಸಬೇಕು. ರಾಹುಲ್ ಹೊರತುಪಡಿಸಿದ ಪ್ರತಿವಾದಿಗಳು ಪ್ರತ್ಯೇಕವಾಗಿ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಶ್ವೇತಪತ್ರ ಸಲ್ಲಿಸಲು ಆದೇಶಿಸಬೇಕು. ಮಹಿಳೆಯ ಘನತೆಗೆ ಹಾನಿ ಮಾಡಿರುವ ರಾಹುಲ್ ಹಾಗೂ ಇತರೆ ಪ್ರತಿವಾದಿಗಳಿಗೆ ಸಾರ್ವಜನಿಕ ಹುದ್ದೆಯ ದುರ್ಬಳಕೆ, ಸಾರ್ವಜನಿಕ ನಂಬಿಕೆಗೆ ಹಾನಿ, ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಗಾಗಿ ಭಾರತೀಯ ನ್ಯಾಯ ಸಂಹಿತೆಯ ಅಡಿ ಸಾಂಕೇತಿಕ ದಂಡ ವಿಧಿಸಬೇಕು ಎಂದು ಮನವಿ ಮಾಡಲಾಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 2024ರ ಮೇ 2ರಂದು ಶಿವಮೊಗ್ಗದಲ್ಲಿ ಪ್ರಚಾರ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು ಹಾಸನದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರನ್ನು ಅತ್ಯಾಚಾರ ಮಾಡಿ, ಆ ಘಟನೆಯನ್ನು ವೀಡಿಯೊ ಮಾಡಿಕೊಂಡಿದ್ದಾರೆ. ಇಂಥ ಅಭ್ಯರ್ಥಿಯ ಪರವಾಗಿ ಮತ ಕೇಳಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕ್ಷಮೆ ಕೋರಬೇಕು ಎಂದು ವಾಗ್ದಾಳಿ ನಡೆಸಿದ್ದರು.

ಈ ಮೂಲಕ ಮಹಿಳೆಯ ಘನತೆಗೆ ವಿಶೇಷವಾಗಿ ಹಾಸನ ಭಾಗದ ಮಹಿಳೆಯರ ಘನತೆಗೆ ಹಾನಿ ಮಾಡಿದ್ದಾರೆ. ಈ ಮೂಲಕ ಸುಳ್ಳು ಸುದ್ದಿ ಹರಡಿದ್ದು, ಮತಗಳಿಕೆಗೆ ಪ್ರಕರಣವನ್ನು ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಭಾರತದ ಮಹಿಳೆಯ ಘನತೆಗೆ ಹಾನಿ ಮಾಡಿದ್ದಾರೆ. ಅಧಿಕಾರಿಗಳೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ನಿಂದನಾತ್ಮಕ ಹೇಳಿಕೆ ಆರೋಪ; ಶಾಸಕ ಭರತ್ ಶೆಟ್ಟಿಗೆ ಮಧ್ಯಂತರ ಜಾಮೀನು - Interim Bail to Bharath Shetty

Last Updated : Jul 30, 2024, 12:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.