ETV Bharat / state

ಪುತ್ತೂರಿನ ಕೋಳಿ ತ್ಯಾಜ್ಯ ಘಟಕ ಸ್ಥಳಾಂತರಿಸಲು ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​ - Poultry Waste Unit - POULTRY WASTE UNIT

ಕೋಳಿ ತ್ಯಾಜ್ಯ ಘಟಕ ಸ್ಥಳಾಂತರಿಸಲು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿತು.

HIGH COURT NOTICE
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Sep 4, 2024, 7:56 AM IST

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಂಚೋಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕೋಳಿ ತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಮಂಗಳವಾರ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ.

ಗ್ರಾಮಸ್ಥರಾದ ಬಿ.ಪ್ರವೀಣ್ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ, ದಕ್ಷಿಣ ಕನ್ನಡ ಜಿಲ್ಲಾ ಉಪ ಪೊಲೀಸ್ ಆಯುಕ್ತ, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಪುತ್ತೂರು ತಾಲೂಕು ತಹಶೀಲ್ದಾರ್​ಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿಯ ವಿವರ: ಪುತ್ತೂರು ತಾಲೂಕಿನ ಪಂಚೋಡಿ ಪರಿಸರದಲ್ಲಿ ಕೇಶವ ಪಾಟಾಳಿಯವರ ಜಾಗದಲ್ಲಿ ರಾಸಾಯನಿಕಸಹಿತ ಪ್ರಾಣಿ ತ್ಯಾಜ್ಯ ನಿರ್ವಹಣಾ ಘಟಕ ಕಾರ್ಯನಿರ್ವಹಿಸುತ್ತಿದೆ. ಇದರಿಂದ ಪರಿಸರದ 2 ಕಿಲೋ ಮೀಟರ್​ ವ್ಯಾಪ್ತಿಯಲ್ಲಿ ದುರ್ವಾಸನೆಯುಕ್ತ ಗಾಳಿ ಬರುತ್ತಿದ್ದು ಪರಿಸರ ಸಂಪೂರ್ಣವಾಗಿ ಕಲುಷಿತಗೊಂಡಿದೆ. ಉಸಿರಾಡಲು ಕಷ್ಟವಾಗುತ್ತಿದೆ. ದಿನದ 24 ಗಂಟೆಯೂ ದುರ್ವಾಸನೆ ಹೊರಹೊಮ್ಮುತ್ತಿದ್ದು, ಊಟ ಮಾಡಲು ಸಾಧ್ಯವಾಗದ ಪರಿಸ್ಥಿತಿ ಇದೆ.

ಇದರ ಬಳಿಯಲ್ಲಿಯೇ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿದ್ದು ಇಲ್ಲಿನ ಮಕ್ಕಳಿಗೆ ತೀವ್ರತರವಾದ ಆರೋಗ್ಯ ತೊಂದರೆ ಉಂಟಾಗಿದೆ. ಸಾಮಾನ್ಯವಾಗಿ ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆಯ ಪ್ರಕಾರ ಪರಿಸರಕ್ಕೆ ಮಾರಕವಾಗುವ ಕಾರ್ಖಾನೆಗಳು, ತ್ಯಾಜ್ಯನಿರ್ವಹಣಾ ಘಟಕಗಳು, ಜನವಸತಿ ಪ್ರದೇಶದಿಂದ ದೂರ ಇರಬೇಕು. ಜನರ ಆರೋಗ್ಯಕ್ಕೆ ತೊಂದರೆ ತರುವಂತಿರಬಾರದು ಎಂಬ ನಿಯಮವಿದೆ. ಆದರೆ, ಈ ನಿಯಮಕ್ಕೆ ವಿರುದ್ಧವಾಗಿ ಇದು ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಇಲ್ಲಿನ ಮಕ್ಕಳು, ಮಹಿಳೆಯರು, ವೃದ್ಧರ ಆರೋಗ್ಯ ಹದಗೆಡುತ್ತಿದೆ. ಈಗಾಗಲೇ ಹಲವು ಜನರು ಅನಾರೋಗ್ಯಕ್ಕೀಡಾಗಿದ್ದಾರೆ. ಅಲ್ಲದೆ, ಈ ರೀತಿಯ ಕಲುಷಿತ ಗಾಳಿ ಸೇವನೆಯಿಂದ ಜನ ಹಾಗೂ ರಸ್ತೆಯಲ್ಲಿ ವಾಹನಗಳ ಪ್ರಯಾಣಿಕರಿಗೆ ವಿವಿಧ ಭೀಕರ ಕಾಯಿಲೆಗಳು ಬರುವ ಸಾಧ್ಯತೆಯಿದೆ. ಹೀಗಾಗಿ ಘಟಕ ಸ್ಥಳಾಂತರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಕುಂದಾಪುರ ಕೋಡಿ ಕಿನಾರೆಯಲ್ಲಿ 1 ಟನ್ ಪಾದರಕ್ಷೆ! ಸಮುದ್ರ ಜೀವಿಗಳ ಪ್ರಾಣಕ್ಕೆ ಕುತ್ತು - Kundapura Kodi Beach

ETV Bharat Logo

Copyright © 2024 Ushodaya Enterprises Pvt. Ltd., All Rights Reserved.